ಮಾರ್ಕ 3:6 - ಪರಿಶುದ್ದ ಬೈಬಲ್6 ಆಗ ಫರಿಸಾಯರು ಹೊರಗೆ ಹೋಗಿ, ಹೆರೋದ್ಯರನ್ನು ಕೂಡಿಕೊಂಡು ಯೇಸುವನ್ನು ಯಾವ ರೀತಿ ಕೊಲ್ಲಬೇಕೆಂದು ಆಲೋಚಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ತಕ್ಷಣ ಫರಿಸಾಯರು ಹೊರಕ್ಕೆ ಹೋಗಿ ಹೆರೋದ್ಯರನ್ನು ಕೂಡಿಕೊಂಡು ಯಾವ ಉಪಾಯದಿಂದ ಯೇಸುವನ್ನು ಕೊಲ್ಲಬಹುದು ಎಂದು ಆತನಿಗೆ ವಿರೋಧವಾಗಿ ಒಳಸಂಚುಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಫರಿಸಾಯರು ಅಲ್ಲಿಂದ ಹೊರಗೆಹೋದರು. ಕೂಡಲೇ ಹೆರೋದಿಯರೊಡನೆ ಸೇರಿಕೊಂಡು ಯೇಸುವನ್ನು ಕೊಲೆಮಾಡಲು ಒಳಸಂಚು ಹೂಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಫರಿಸಾಯರು ಹೊರಕ್ಕೆ ಹೋಗಿ ಕೂಡಲೆ ಹೆರೋದ್ಯರನ್ನು ಕೂಡಿಕೊಂಡು ಇವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಫರಿಸಾಯರು ಅಲ್ಲಿಂದ ಹೊರಗೆ ಹೋಗಿ ಕೂಡಲೇ ಹೆರೋದ್ಯರೊಂದಿಗೆ ಸೇರಿಕೊಂಡು ಯೇಸುವನ್ನು ಹೇಗೆ ಕೊಲ್ಲಬೇಕೆಂದು ಅವರ ವಿರೋಧವಾಗಿ ಒಳಸಂಚು ಮಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತನ್ನಾ ಫಾರಿಜೆವಾ ಭಾಯ್ರ್ ಗೆಲಿ, ಅನಿ ಹೆರೊದಾಚ್ಯಾ ಪಕ್ಷಾಚ್ಯಾ ಲೊಕಾಂಚ್ಯಾ ವಾಂಗ್ಡಾ ಮಿಳುನ್, ಜೆಜುಕ್ ಕಶೆ ಕರುನ್ ಜಿವಾನಿ ಮಾರ್‍ತಲೆ ಮನುನ್ ಯವ್ಜನ್ ಘಾಟ್ಲ್ಯಾನಿ. ಅಧ್ಯಾಯವನ್ನು ನೋಡಿ |
ಫರಿಸಾಯರು ಯೇಸುವನ್ನು ವಂಚಿಸುವುದಕ್ಕೆ ಕೆಲವರನ್ನು ಕಳುಹಿಸಿದರು. ಅವರಲ್ಲಿ ಕೆಲವರು ಫರಿಸಾಯರ ಹಿಂಬಾಲಕರಾಗಿದ್ದರು. ಇನ್ನು ಕೆಲವರು ಯೆಹೂದ್ಯರ ರಾಜಕೀಯ ಪಂಗಡಕ್ಕೆ ಸೇರಿದವರಾಗಿದ್ದರು. ಈ ಜನರು, “ಬೋಧಕನೇ, ನೀನು ಯಥಾರ್ಥವಂತನೆಂದು ನಾವು ಬಲ್ಲೆವು. ನೀನು ದೇವರ ಮಾರ್ಗದ ಕುರಿತು ಸತ್ಯವನ್ನೇ ಬೋಧಿಸುವೆ ಎಂಬುದು ನಮಗೆ ಗೊತ್ತಿದೆ. ಬೇರೆಯವರು ನಿನ್ನ ವಿಷಯವಾಗಿ ಏನೇ ಯೋಚಿಸಿದರೂ ನೀನು ಹೆದರುವುದಿಲ್ಲ. ನೀನು ಮುಖದಾಕ್ಷಿಣ್ಯ ಮಾಡುವುದಿಲ್ಲ.