ಮಾರ್ಕ 3:8 - ಪರಿಶುದ್ದ ಬೈಬಲ್8 ಅನೇಕಾನೇಕ ಜನರು ಜುದೇಯದಿಂದ, ಜೆರುಸಲೇಮಿನಿಂದ, ಇದೂಮಾಯದಿಂದ, ಜೋರ್ಡನ್ ನದಿಯ ಆಚೆಗಿರುವ ಪ್ರದೇಶದಿಂದ ಮತ್ತು ಟೈರ್, ಸೀದೋನ್‌ಗಳ ಸುತ್ತಲಿನ ಪ್ರದೇಶಗಳಿಂದ ಬಂದರು. ಯೇಸುವು ಮಾಡುತ್ತಿದ್ದ ಕಾರ್ಯಗಳ ಬಗ್ಗೆ ಅವರು ಕೇಳಿ ಬಂದಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇದಲ್ಲದೆ ಆತನು ಇಂಥಿಂಥ ಕೆಲಸಗಳನ್ನು ಮಾಡುತ್ತಾನೆಂದು ಕೇಳಿ ಬಹುಜನರು ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ಇದೂಮಾಯದಿಂದಲೂ, ಯೊರ್ದನ್ ಹೊಳೆಯ ಆಚೆಯಿಂದಲೂ, ತೂರ್, ಸೀದೋನ್ ಪಟ್ಟಣಗಳ ಸುತ್ತಲಿನಿಂದಲೂ ಆತನ ಬಳಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಈ ಜನರು ಯೇಸು ಮಾಡುತ್ತಿದ್ದ ಮಹತ್ಕಾರ್ಯಗಳ ಸಮಾಚಾರವನ್ನು ಕೇಳಿ, ಗಲಿಲೇಯ ಪ್ರಾಂತ್ಯದಿಂದ, ಜುದೇಯ ಪ್ರಾಂತ್ಯದಿಂದ, ಜೆರುಸಲೇಮ್ ನಗರದಿಂದ, ಇದು ಮೇಯ ಪ್ರಾಂತ್ಯದಿಂದ ಜೋರ್ಡನ್ ನದಿಯ ಪೂರ್ವಪ್ರದೇಶ ಹಾಗೂ ಟೈರ್-ಸಿದೋನ್ ಪಟ್ಟಣಗಳ ಸುತ್ತಮುತ್ತಲಿಂದ ಬಂದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಇದಲ್ಲದೆ ಆತನು ಇಂಥಿಂಥ ಕೆಲಸಗಳನ್ನು ಮಾಡುತ್ತಾನೆಂದು ಕೇಳಿ ಬಹುಜನರು ಯೂದಾಯದಿಂದಲೂ ಯೆರೂಸಲೇವಿುನಿಂದಲೂ ಇದೂಮಾಯದಿಂದಲೂ ಯೊರ್ದನ್ ಹೊಳೆಯ ಆಚೆಯಿಂದಲೂ ತೂರ್ ಸೀದೋನ್ ಪಟ್ಟಣಗಳ ಸುತ್ತಲಿನಿಂದಲೂ ಆತನ ಬಳಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೇಸು ಮಾಡುತ್ತಿದ್ದ ಎಲ್ಲವನ್ನು ಕೇಳಿ, ಬಹುಜನರು ಯೂದಾಯದಿಂದಲೂ ಯೆರೂಸಲೇಮ್ ನಗರದಿಂದಲೂ ಇದುಮಾಯದಿಂದಲೂ ಯೊರ್ದನ್ ನದಿಯ ಆಚೆಕಡೆಯಿಂದಲೂ ಟೈರ್, ಸೀದೋನ್ ಪಟ್ಟಣಗಳ ಸುತ್ತಲಿನಿಂದಲೂ ಯೇಸುವಿನ ಬಳಿಗೆ ಬಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಗಾಲಿಲಿಯಾ, ಜುದೆಯಾ, ಅನಿ ಇದುಮೆಯಾ, ಮನ್ತಲ್ಯಾ ಪ್ರಾಂತ್ಯಾನಿತ್ನಾ, ಜೆರುಜಲೆಮ್, ಮನ್ತಲ್ಯಾ ಶಾರಾತ್ನಾ, ಅನಿ ಜೊರ್ದಾನ್ ನ್ಹಯ್ಚ್ಯಾ ತಿಕುಲ್ಲ್ಯಾ ಬಾಜುಕ್ನಾ, ತಿರ್ ಅನಿ ಸಿದೊನ್ ಮನ್ತಲ್ಯಾ ಶಾರಾಂಚ್ಯಾ ಅಜು-ಬಾಜುಚ್ಯಾ ಗಾವಾನಿತ್ನಾ, ಜೆಜುನ್ ಕರಲ್ಲ್ಯಾ ಬರ್‍ಯಾ ಕಾಮಾಂಚಿ ಖಬರ್ ಆಯ್ಕುನ್, ಹಿ ಲೊಕಾ ಥೈ ಯೆವ್ನ್ ಗೊಳಾ ಹೊಲ್ಲಿ. ಅಧ್ಯಾಯವನ್ನು ನೋಡಿ |
ಯೇಸು ಹೇಳಿದ್ದೇನೆಂದರೆ: “ಖೊರಾಜಿನೇ, ನಿನ್ನ ಗತಿಯನ್ನು ಏನು ಹೇಳಲಿ? ಬೆತ್ಸಾಯಿದವೇ, ನಿನ್ನ ಗತಿಯನ್ನು ಏನು ಹೇಳಲಿ! ನಾನು ನಿಮ್ಮಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆನು. ಅದೇ ಅದ್ಭುತಕಾರ್ಯಗಳನ್ನು ಟೈರ್, ಸೀದೋನ್‌ಗಳಲ್ಲಿ ಮಾಡಿದ್ದರೆ, ಅವುಗಳ ಜನರು ಬಹಳ ಕಾಲದ ಹಿಂದೆಯೇ ತಮ್ಮ ಜೀವಿತವನ್ನು ಬದಲಾಯಿಸಿಕೊಳ್ಳುತ್ತಿದ್ದರು; ತಮ್ಮ ಪಾಪಗಳಿಗಾಗಿ ದುಃಖಪಟ್ಟು ಗೋಣಿತಟ್ಟನ್ನು ಕಟ್ಟಿಕೊಳ್ಳುತ್ತಿದ್ದರು; ಮೈಮೇಲೆ ಬೂದಿಯನ್ನು ಹಾಕಿಕೊಳ್ಳುತ್ತಿದ್ದರು.
“ಎದೋಮಿನ ಬಗ್ಗೆಯೂ ಉಳಿದ ಆ ವಿದೇಶಗಳ ಬಗ್ಗೆಯೂ ನಾನು ರೋಷದಿಂದ ಮಾತಾಡುತ್ತಿದ್ದೇನೆಂದು ಪ್ರಮಾಣ ಮಾಡುತ್ತೇನೆ. ಆ ಜನಾಂಗಗಳು ನನ್ನ ದೇಶವನ್ನು ತಮ್ಮ ಸ್ವಾಸ್ತ್ಯವನ್ನಾಗಿ ಸಂತೋಷದಿಂದ ತೆಗೆದುಕೊಂಡರು. ಅವರು ಅದನ್ನು ವಶಪಡಿಸಿಕೊಂಡು ಸೂರೆ ಮಾಡಿದಾಗ ಮತ್ತು ನನ್ನ ಜನರಿಗೆ ಅವಮಾನ ಮಾಡಿದಾಗ ನನ್ನ ಜನರನ್ನು ಅವರು ಎಷ್ಟೊಂದು ದ್ವೇಷಿಸುತ್ತಾರೆಂದು ತೋರಿಸುತ್ತಾ ಉಲ್ಲಾಸಪಟ್ಟರು.