ಮಾರ್ಕ 4:17 - ಪರಿಶುದ್ದ ಬೈಬಲ್17 ಆದರೆ ಆ ವಾಕ್ಯವು ತಮ್ಮಲ್ಲಿ ಆಳವಾಗಿ ಬೇರೂರಲು ಅವರು ಅವಕಾಶ ನೀಡುವುದಿಲ್ಲ. ಅವರು ಆ ವಾಕ್ಯವನ್ನು ಸ್ವಲ್ಪಕಾಲ ಮಾತ್ರ ಸ್ವೀಕರಿಸಿಕೊಂಡಿರುತ್ತಾರೆ. ಆ ವಾಕ್ಯದ ದೆಸೆಯಿಂದ ತೊಂದರೆಯಾಗಲಿ ಹಿಂಸೆಯಾಗಲಿ ಬಂದಾಗ ಅವರು ಅದನ್ನು ಬಹುಬೇಗನೆ ತ್ಯಜಿಸುತ್ತಾರೆ. ಇವರೇ ಬೀಜಬಿದ್ದ ಬಂಡೆಯ ನೆಲವಾಗಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆದರೆ ಅವರಿಗೆ ಬೇರಿಲ್ಲದ ಕಾರಣ ಇವರು ಸ್ವಲ್ಪ ಕಾಲ ಮಾತ್ರವೇ ಇದ್ದು, ಬಳಿಕ ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಬೇಗ ಎಡವಿಬೀಳುತ್ತಾರೆ; ಇವರೇ ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ದೇವರ ಸಂದೇಶದ ನಿಮಿತ್ತ ಕಷ್ಟಕೋಟಲೆಗಳು ಬಂದೊದಗಿದಾಗ ಕೂಡಲೇ ಎಡವಿ ಬೀಳುತ್ತಾರೆ. ಇವರೇ ಕಲ್ಲುನೆಲದ ಮೇಲೆ ಬಿದ್ದ ಬೀಜಕ್ಕೆ ಸಮಾನರಾದವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದರೆ ಅವರಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇದ್ದು, ವಾಕ್ಯದ ನಿಮಿತ್ತವಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ, ಅವರು ಬೇಗನೆ ಬಿದ್ದು ಹೋಗುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಖರೆ, ತೆಂಚ್ಯಾ ಭುತ್ತುರ್ ತ್ಯಾ ಗೊಸ್ಟಿಯಾ ಖೊಲಾತ್ ಜಾಯ್ನಸಲ್ಲ್ಯಾಸಾಟ್ನಿ, ತ್ಯಾ, ತೆಂಚೆಕ್ಡೆ ಲೈ ಎಳ್ ರೈನಾತ್. ದೆವಾಚ್ಯಾ ಗೊಸ್ಟಿಯಾಕ್ನಿ ಲಾಗುನ್ ತರಾಸ್, ನಾಜಾಲ್ಯಾರ್, ಕಸ್ಟ್, ಯೆಲ್ಲ್ಯಾತನ್ನಾ ತೆನಿ ತ್ಯಾ ಗೊಸ್ಟಿಯಾ ಸೊಡುನ್ ಸೊಡ್ತ್ಯಾತ್. ಅಧ್ಯಾಯವನ್ನು ನೋಡಿ |
“ನೀನು ಎಲ್ಲಿ ವಾಸಮಾಡುತ್ತಿರುವೆ ಎಂಬುದು ನನಗೆ ತಿಳಿದಿದೆ. ಸೈತಾನನ ಸಿಂಹಾಸನ ವಿರುವ ಕಡೆಯಲ್ಲಿ ನೀನು ವಾಸಿಸುತ್ತಿರುವೆ. ಆದರೆ ನೀನು ನನಗೆ ನಂಬಿಗಸ್ತನಾಗಿರುವೆ. ಅಂತಿಪನ ಕಾಲದಲ್ಲಿಯೂ ನೀನು ನನ್ನಲ್ಲಿಟ್ಟಿರುವ ನಂಬಿಕೆಯನ್ನು ತಿಳಿಸಲು ನಿರಾಕರಿಸಲಿಲ್ಲ. ನಿನ್ನ ಪಟ್ಟಣದಲ್ಲಿ ಕೊಲ್ಲಲ್ಪಟ್ಟ ಅಂತಿಪನು ನನ್ನ ನಂಬಿಗಸ್ತ ಸಾಕ್ಷಿಯಾಗಿದ್ದನು. ನಿನ್ನ ನಗರ ಸೈತಾನನು ವಾಸಿಸುವ ನಗರವಾಗಿದೆ.
ಹೀಗಿರಲು ದೇವರ ಮಗನನ್ನು ದ್ವೇಷಿಸುವ ಒಬ್ಬ ವ್ಯಕ್ತಿಯನ್ನು ಏನು ಮಾಡಬೇಕೆಂದು ನೀವು ಆಲೋಚಿಸುವಿರಿ? ನಿಜವಾಗಿಯೂ ಆ ವ್ಯಕ್ತಿಗೆ ಇದಕ್ಕಿಂತಲೂ ತೀವ್ರವಾದ ದಂಡನೆಯನ್ನು ವಿಧಿಸಬೇಕಲ್ಲವೇ? ಹೌದು, ಹೊಸ ಒಡಂಬಡಿಕೆಯ ರಕ್ತಕ್ಕೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ಕ್ರೂರವಾದ ದಂಡನೆಯಾಗಬೇಕು. ಆ ರಕ್ತವು ಅವನನ್ನು ಪವಿತ್ರನನ್ನಾಗಿಸಿತು. ದೇವರಾತ್ಮನ ಕೃಪೆಗೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ತೀವ್ರವಾದ ದಂಡನೆಯಾಗಬೇಕು.