ಮಾರ್ಕ 4:19 - ಪರಿಶುದ್ದ ಬೈಬಲ್19 ಆದರೆ ಈ ಜೀವಿತದ ಚಿಂತೆಗಳು, ಹಣದ ಮೇಲಿನ ವ್ಯಾಮೋಹ ಮತ್ತು ಇತರ ಎಲ್ಲಾ ವಿಧವಾದ ಆಸೆಗಳು ಅವರಲ್ಲಿ ಬಿದ್ದ ವಾಕ್ಯಕ್ಕೆ ಬೆಳೆಯಲು ಅವಕಾಶ ಕೊಡುವುದಿಲ್ಲ. ಆದ್ದರಿಂದ ಅವರ ಜೀವಿತದಲ್ಲಿ ವಾಕ್ಯವು ಫಲ ಫಲಿಸುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಇವರು ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಗಳೂ, ಐಶ್ವರ್ಯದಿಂದುಂಟಾಗುವ ವ್ಯಾಮೋಹವೂ, ಇತರ ವಿಷಯಗಳ ಮೇಲಣ ಆಸೆಗಳೂ ಸೇರಿ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ನಿಷ್ಫಲರಾಗಿರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆದರೆ ಈ ಜೀವನದ ಚಿಂತೆಗಳೂ ಐಶ್ವರ್ಯದ ವ್ಯಾಮೋಹವೂ ಇನ್ನಿತರ ಅಭಿಲಾಷೆಗಳು ಸೇರಿ ದೇವರ ವಾಕ್ಯವನ್ನು ಅಡಗಿಸುವುದರಿಂದ, ವಾಕ್ಯವು ಫಲವನ್ನು ಕೊಡುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಖರೆ, ಹ್ಯಾ ಜಿವನಾಚ್ಯಾ ವಿಶಯಾತ್ಲಿ ಯವ್ಜನ್, ಪಯ್ಸ್ಯಾಂಚಿ ಆಶ್ಯಾ, ಅನಿ ಅಸ್ಲ್ಯಾ ಲೈ ಯೌಜನ್ಯಾತ್ನಿ ದೆವಾಚ್ಯಾ ಗೊಸ್ಟಿಯಾಕ್ನಿ ಗುಸ್ಮಟುನ್ ಪಿಕ್ಕ್ ದಿವ್ಕ್ ಹೊಯ್ನಾ. ಅಧ್ಯಾಯವನ್ನು ನೋಡಿ |
ಸ್ವಂತ ಕುಟುಂಬವನ್ನು ಹೊಂದಿಲ್ಲದವನು ಅಂದರೆ ಅಣ್ಣತಮ್ಮಂದಿರಾಗಲಿ ಮಕ್ಕಳಾಗಲಿ ಇಲ್ಲದವನು ಸಹ ಪ್ರಯಾಸಪಟ್ಟು ದುಡಿಯುವನು. ಅವನಿಗೂ ತನ್ನ ಆಸ್ತಿಯಲ್ಲಿ ತೃಪ್ತಿಯಿಲ್ಲ. ಅವನು ಬಿಡುವಿಲ್ಲದೆ ಪ್ರಯಾಸಪಟ್ಟು ದುಡಿಯುವನು. “ನಾನೇಕೆ ಪ್ರಯಾಸಪಟ್ಟು ದುಡಿಯುತ್ತಿರುವೆ? ನಾನೇಕೆ ಜೀವನದ ಸುಖವನ್ನು ಅನುಭವಿಸುತ್ತಿಲ್ಲ?” ಎಂದು ಅವನು ಆಲೋಚಿಸುವುದೇ ಇಲ್ಲ. ಇದು ಸಹ ಕೆಟ್ಟದ್ದೂ ವ್ಯರ್ಥವಾದದ್ದೂ ಆಗಿದೆ.
ನಿಮ್ಮ ಅನ್ಯೋನ್ಯತೆಯ ಭೋಜನದಲ್ಲಿ ಈ ಜನರು ಮುಳುಗಿಹೋದ ಬಂಡೆಗಳಂತಿದ್ದಾರೆ. ಅವರು ಭಯವಿಲ್ಲದೆ ನಿಮ್ಮ ಜೊತೆಯಲ್ಲಿ ತಿನ್ನುತ್ತಾರೆ. ಅವರು ತಮ್ಮ ಬಗ್ಗೆ ಮಾತ್ರ ಚಿಂತಿಸುವ ಕುರುಬರಾಗಿದ್ದಾರೆ. ಅವರು ನೀರಿಲ್ಲದ ಮೋಡಗಳಂತಿದ್ದಾರೆ. ಗಾಳಿಯು ಆ ಮೋಡಗಳನ್ನು ಬಡಿದುಕೊಂಡು ಹೋಗುವುದು. ಅವರು ಕಾಲಕ್ಕೆ ತಕ್ಕಂತೆ ಫಲಬಿಡದ ಮತ್ತು ಬೇರುಸಹಿತ ಕಿತ್ತುಬಂದು ಉರುಳಿಹೋದ ಮರಗಳಿಂತಿದ್ದಾರೆ.