ಮಾರ್ಕ 4:20 - ಪರಿಶುದ್ದ ಬೈಬಲ್20 “ಇನ್ನು ಕೆಲವರು ಬೀಜಬಿದ್ದ ಒಳ್ಳೆಯ ನೆಲದಂತಿದ್ದಾರೆ. ಅವರು ವಾಕ್ಯವನ್ನು ಸ್ವೀಕರಿಸಿಕೊಂಡು ಫಲವನ್ನು ಫಲಿಸುತ್ತಾರೆ. ಕೆಲವು ಸಂದರ್ಭಗಳಲ್ಲಿ ಮೂವತ್ತರಷ್ಟು ಹೆಚ್ಚಾಗಿ, ಇನ್ನು ಕೆಲವು ಸಂದರ್ಭಗಳಲ್ಲಿ ಅರವತ್ತರಷ್ಟು ಹೆಚ್ಚಾಗಿ, ಮತ್ತೆ ಕೆಲವು ಸಂಧರ್ಭಗಳಲ್ಲಿ ನೂರರಷ್ಟು ಹೆಚ್ಚಾಗಿ ಫಲ ಫಲಿಸುತ್ತಾರೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಮತ್ತೆ ಕೆಲವರು ವಾಕ್ಯವನ್ನು ಕೇಳಿ ಕೈಕೊಂಡು ಮೂವತ್ತರಷ್ಟಾಗಲಿ ಅರವತ್ತರಷ್ಟಾಗಲಿ ನೂರರಷ್ಟಾಗಲಿ ಫಲವನ್ನು ಕೊಡುತ್ತಾರೆ; ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜವಾಗಿರುವವರು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಮತ್ತೆ ಕೆಲವರಾದರೋ ದೇವರ ಸಂದೇಶವನ್ನು ಕೇಳಿ ಅದನ್ನು ಸ್ವಾಗತಿಸುತ್ತಾರೆ. ಅಂಥವರಲ್ಲಿ ಕೆಲವರು ಮೂವತ್ತರಷ್ಟು, ಕೆಲವರು ಅರವತ್ತರಷ್ಟು, ಇನ್ನೂ ಕೆಲವರು ನೂರರಷ್ಟು ಫಲಕೊಡುತ್ತಾರೆ. ಇವರೇ ಹದವಾದ ಭೂಮಿಯಲ್ಲಿ ಬಿದ್ದ ಬೀಜಕ್ಕೆ ಸಮಾನರು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಮತ್ತೆ ಕೆಲವರು ವಾಕ್ಯವನ್ನು ಕೇಳಿ ಕೈಕೊಂಡು ಮೂವತ್ತರಷ್ಟಾಗಲಿ ಅರುವತ್ತರಷ್ಟಾಗಲಿ ನೂರರಷ್ಟಾಗಲಿ ಫಲವನ್ನು ಕೊಡುತ್ತಾರೆ; ಇವರೇ ಬೀಜಬಿದ್ದ ಒಳ್ಳೆಯ ನೆಲವಾಗಿರುವವರು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಇನ್ನೂ ಕೆಲವರು ಒಳ್ಳೆಯ ಭೂಮಿಯಲ್ಲಿ ಬಿದ್ದ ಬೀಜದಂತಿದ್ದು, ವಾಕ್ಯವನ್ನು ಕೇಳಿ ಅಂಗೀಕರಿಸಿ, ಮೂವತ್ತರಷ್ಟು, ಅರವತ್ತರಷ್ಟು, ನೂರರಷ್ಟು ಫಲಕೊಡುತ್ತಾರೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಖರೆ ಅನಿಹುರಲ್ಲಿ ಲೊಕಾ, ಬರ್‍ಯಾ ಮಾಟಿತ್ ಪಡಲ್ಲ್ಯಾ ಬಿಂಯಾಂಚ್ಯಾ ಬಾಸೆನ್. ತೆನಿ ದೆವಾಚ್ಯಾ ಗೊಸ್ಟಿಯಾ ಅಯಿಕ್ತ್ಯಾತ್, ಸ್ವಿಕಾರ್ ಕರ್‍ತ್ಯಾತ್, ಅನಿ ಪಿಕ್ಕ್ ದಿತ್ಯಾತ್. ಥೊಡೆ ತಿಸ್, ಸಾಟ್, ಅನಿ ಸೆಂಬರ್.” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |