ಮಾರ್ಕ 4:24 - ಪರಿಶುದ್ದ ಬೈಬಲ್24 ನೀವು ಕೇಳುತ್ತಿರುವ ಪ್ರತಿಯೊಂದು ವಿಷಯವನ್ನು ಎಚ್ಚರಿಕೆಯಿಂದ ಆಲೋಚಿಸಿರಿ. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು; ನೀವು ಕೊಟ್ಟದ್ದಕ್ಕಿಂತ ಹೆಚ್ಚಾಗಿ ಕೊಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಮತ್ತು ಆತನು ಅವರಿಗೆ; “ನೀವು ಕಿವಿಗೊಡುವ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನೀವು ಅಳೆಯುವ ಅಳತೆಯಿಂದಲೇ ನಿಮ್ಮನ್ನೂ ಅಳೆಯುವರು; ನಿಮಗೆ ಇನ್ನೂ ಅಧಿಕವಾಗಿ ಸೇರಿಸಿಕೊಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 “ನೀವು ಕೇಳುವುದನ್ನು ಎಚ್ಚರಿಕೆಯಿಂದ ಗಮನಿಸಿರಿ; ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು; ಇನ್ನೂ ಅಧಿಕವಾಗಿ ಕೊಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಮತ್ತು ಆತನು ಅವರಿಗೆ - ನೀವು ಕಿವಿಗೊಡುವ ವಿಷಯದಲ್ಲಿ ಎಚ್ಚರಿಕೆ. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು; ಇನ್ನೂ ಕೂಡಿಸಿ ಕೊಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಮತ್ತು ಯೇಸು ಅವರಿಗೆ, “ನೀವು ಕೇಳುವುದನ್ನು ಎಚ್ಚರಿಕೆಯಿಂದ ಗಮನಿಸಿರಿ; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು; ಇನ್ನೂ ಹೆಚ್ಚಾಗಿ ಸೇರಿಸಿಕೊಡಲಾಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ತನ್ನಾ ತೆನಿ “ತುಮಿ ಆಯ್ಕಲ್ಯಾಸಿ ತೆಕಾ ಧ್ಯಾನ್ ದಿವಾ! ತುಮಿ ದುಸ್ರ್ಯಾಕ್ನಿ ಖಲ್ಯಾ ಖಾಯ್ದ್ಯಾನ್ ನ್ಯಾಯ್ ಕರ್ತ್ಯಾಶಿ, ತ್ಯಾಚ್ ಖಾಯ್ದ್ಯಾನ್ ದೆವ್ ತುಮ್ಕಾ ನ್ಯಾಯ್ ಕರ್‍ತಾ-ಅನಿ ತೆಚೆನ್ಕಿ ಕಟಿನ್ ಮಾಪಾನ್ . ಅಧ್ಯಾಯವನ್ನು ನೋಡಿ |
ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.