Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:29 - ಪರಿಶುದ್ದ ಬೈಬಲ್‌

29 ತೆನೆಯು ಬಲಿತಾಗ ರೈತನು ಗಿಡವನ್ನು ಕೊಯ್ಯುವನು. ಇದನ್ನೇ ಸುಗ್ಗಿಕಾಲ ಎನ್ನುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆದರೆ ಫಲಮಾಗಿದಾಗ ಸುಗ್ಗಿಕಾಲ ಬಂದಿತೆಂದು ವ್ಯವಸಾಯಗಾರನು ಅದನ್ನು ಕೊಯ್ಯಲು ಕುಡುಗೋಲನ್ನು ಬಳಸುತ್ತಾನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಬೆಳೆಯು ಮಾಗಿದಾಗ ಸುಗ್ಗಿಯು ಬಂತೆಂದು ವ್ಯವಸಾಯಗಾರನು ಕುಡುಗೋಲನ್ನು ಬಳಸುತ್ತಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆದರೆ ಫಲಮಾಗಿದ ಕೂಡಲೆ ಅವನು ಸುಗ್ಗಿ ಕಾಲ ಬಂತೆಂದು ಕೊಯಿಸುತ್ತಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಬೆಳೆಯು ಮಾಗಿದ ಕೂಡಲೇ, ಅವನು ಕುಡುಗೋಲನ್ನು ಉಪಯೋಗಿಸುತ್ತಾನೆ. ಏಕೆಂದರೆ ಸುಗ್ಗಿಯು ಬಂದಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಖರೆ ಪಿಕ್ಕ್ ಪಿಕುನ್ ಯೆಲ್ಲ್ಯಾ ತನ್ನಾ, ತೆ ಪಿಕ್ಕ್ ಪಿಕುನ್ ಯೆಲಾ ಮನುನ್, ತೊ ಮಾನುಸ್ ಇಳೊ ಘೆವ್ನ್ ಕಾಪ್ತಾ, ಕಶ್ಯಾಕ್ ಮಟ್ಲ್ಯಾರ್, ತನ್ನಾ ಸುಗ್ಗಿಚೊ ಕಾಲ್ ಯೆಲ್ಲೊ ರ್‍ಹಾತಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:29
9 ತಿಳಿವುಗಳ ಹೋಲಿಕೆ  

ಬೆಳೆಯು ಪಕ್ವವಾಗಿದೆ; ಕುಡುಗೋಲನ್ನು ತನ್ನಿರಿ. ಬನ್ನಿ, ದ್ರಾಕ್ಷಿಯನ್ನು ಆಲೆಯಲ್ಲಿ ತುಳಿಯಿರಿ, ಯಾಕೆಂದರೆ ಆಲೆಯು ತುಂಬಿಹೋಗಿದೆ. ಪಿಪಾಯಿಗಳು ತುಂಬಿತುಳುಕುತ್ತಿವೆ, ಯಾಕೆಂದರೆ ಅವರ ದುಷ್ಟತ್ವವು ವಿಪರೀತವಾಗಿದೆ!


ಸುಗ್ಗಿಕಾಲದವರೆಗೆ ಹಣಜಿಯೂ ಗೋಧಿಯೂ ಒಟ್ಟಿಗೆ ಬೆಳೆಯಲಿ. ಸುಗ್ಗಿಕಾಲದ ಸಮಯದಲ್ಲಿ ನಾನು ಕೆಲಸದವರಿಗೆ, ಮೊದಲು ಹಣಜಿಗಳನ್ನು ಕೂಡಿಸಿ ಅದನ್ನು ಸುಡುವುದಕ್ಕಾಗಿ ಹೊರೆ ಕಟ್ಟಿ, ನಂತರ ಗೋಧಿಯನ್ನು ಕೂಡಿಸಿ ಅದನ್ನು ನನ್ನ ಕಣಜಕ್ಕೆ ತನ್ನಿರಿ ಎಂದು ಹೇಳುವೆನು’ ಎಂದು ಉತ್ತರಕೊಟ್ಟನು.”


ಸುಗ್ಗಿಕಾಲದವರೆಗೂ ಬೆಳೆದು ಬಲಿಯುವ ಗೋಧಿಯಂತೆ ನೀನಿರುವೆ. ಹೌದು, ನೀನು ವೃದ್ಧಾಪ್ಯದ ಕೊನೆಯವರೆಗೂ ಜೀವಿಸುವೆ.


ಭೂಮಿಯು ಮೊದಲು ಸಸಿಯನ್ನೂ ಅನಂತರ ಹೊಡೆಯನ್ನೂ ತರುವಾಯ ತೆನೆತುಂಬ ಕಾಳನ್ನೂ ತನ್ನಷ್ಟಕ್ಕೇ ತಾನೇ ಉತ್ಪತ್ತಿಮಾಡುತ್ತದೆ.


ನಂತರ ಮತ್ತೊಬ್ಬ ದೇವದೂತನು ಯಜ್ಞವೇದಿಕೆಯಿಂದ ಬಂದನು. ಅವನಿಗೆ ಬೆಂಕಿಯ ಮೇಲೆ ಅಧಿಕಾರವಿತ್ತು. ಅವನು ಹರಿತವಾದ ಕುಡುಗೋಲಿದ್ದ ದೇವದೂತನನ್ನು ಕರೆದು, “ನಿನ್ನ ಹರಿತವಾದ ಕುಡುಗೋಲನ್ನು ತೆಗೆದುಕೊಂಡು, ಭೂಮಿಯ ದ್ರಾಕ್ಷಿತೋಟದಿಂದ ದ್ರಾಕ್ಷಿಗೊಂಚಲುಗಳನ್ನು ಒಟ್ಟುಗೂಡಿಸು. ಭೂಮಿಯ ದ್ರಾಕ್ಷಿಯೆಲ್ಲಾ ಮಾಗಿವೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು