ಮಾರ್ಕ 4:38 - ಪರಿಶುದ್ದ ಬೈಬಲ್38 ಯೇಸುವು ದೋಣಿಯ ಹಿಂಭಾಗದಲ್ಲಿ ತಲೆದಿಂಬಿನ ಮೇಲೆ ತಲೆಯನ್ನಿಟ್ಟು ನಿದ್ರಿಸುತ್ತಿದ್ದನು. ಶಿಷ್ಯರು ಆತನ ಬಳಿಗೆ ಹೋಗಿ, ಆತನನ್ನು ಎಬ್ಬಿಸಿ, “ಗುರುವೇ, ನೀನು ನಮ್ಮ ಬಗ್ಗೆ ಚಿಂತಿಸುವುದಿಲ್ಲವೆ? ನಾವು ಮುಳುಗಿಹೋಗುತ್ತಿದ್ದೇವೆ!” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬನ್ನು ಒರಗಿ ನಿದ್ದೆಮಾಡುತ್ತಿದ್ದನು. ಅವರು ಆತನನ್ನು ಎಬ್ಬಿಸಿ, “ಗುರುವೇ, ನಾವು ಮುಳುಗಿಹೋಗುವುದರಲ್ಲಿ ನಿನಗೆ ಚಿಂತೆಯಿಲ್ಲವೇ” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಯೇಸುವಾದರೋ ದೋಣಿಯ ಹಿಂಭಾಗದಲ್ಲಿ ದಿಂಬನ್ನು ಒರಗಿ ನಿದ್ದೆ ಮಾಡುತ್ತಿದ್ದರು. ಶಿಷ್ಯರು ಅವರನ್ನು ಎಬ್ಬಿಸಿ, “ಗುರುವೇ, ನಾವು ಸಾಯುತ್ತಿದ್ದೇವೆ, ತಮಗೆ ಚಿಂತೆಯೇ ಇಲ್ಲವೆ?” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಆತನು ದೋಣಿಯ ಹಿಂಭಾಗದಲ್ಲಿ ತಲೆಗಿಂಬನ್ನು ಒರಗಿ ನಿದ್ದೆ ಮಾಡುತ್ತಿದ್ದನು. ಅವರು ಆತನನ್ನು ಎಬ್ಬಿಸಿ - ಗುರುವೇ, ನಾವು ಮುಳುಗಿಹೋಗುವದರಲ್ಲಿ ನಿನಗೆ ಚಿಂತೆಯಿಲ್ಲವೇ ಎಂದು ಕೇಳಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಯೇಸು ದೋಣಿಯ ಹಿಂಭಾಗದಲ್ಲಿ ದಿಂಬಿನ ಮೇಲೆ ಒರಗಿ ನಿದ್ದೆಮಾಡುತ್ತಿದ್ದರು. ಶಿಷ್ಯರು ಯೇಸುವನ್ನು ಎಬ್ಬಿಸಿ, “ಗುರುವೇ, ನಾವು ಮುಳುಗಿ ಸಾಯುತ್ತಿದ್ದೇವೆ. ನಿಮಗೆ ಚಿಂತೆಯಿಲ್ಲವೇ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್38 ಖರೆ ಜೆಜು, ಢೊನಿತ್, ಫಾಟಿಕ್ಡೆ ಉಶ್ಯಾ ವರ್‍ತಿ ಟಕ್ಲೆ ಥವ್ನ್ ಘೆವ್ನ್ ನಿಜಲ್ಲೊ. ಶಿಸಾನಿ ತೆಕಾ ಉಟ್ವುಲ್ಯಾನಿ, ಅನಿ “ಗುರುಜಿ, ಅಮಿ ಮರುನ್ ಗೆಲ್ಲ್ಯಾರ್‍ಬಿ, ತುಕಾ ಕಾಯ್ ಪರ್ವಾ ನಾ ಕಾಯ್?” ಮನುನ್ ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |
ಫರಿಸಾಯರು ಯೇಸುವನ್ನು ವಂಚಿಸುವುದಕ್ಕೆ ಕೆಲವರನ್ನು ಕಳುಹಿಸಿದರು. ಅವರಲ್ಲಿ ಕೆಲವರು ಫರಿಸಾಯರ ಹಿಂಬಾಲಕರಾಗಿದ್ದರು. ಇನ್ನು ಕೆಲವರು ಯೆಹೂದ್ಯರ ರಾಜಕೀಯ ಪಂಗಡಕ್ಕೆ ಸೇರಿದವರಾಗಿದ್ದರು. ಈ ಜನರು, “ಬೋಧಕನೇ, ನೀನು ಯಥಾರ್ಥವಂತನೆಂದು ನಾವು ಬಲ್ಲೆವು. ನೀನು ದೇವರ ಮಾರ್ಗದ ಕುರಿತು ಸತ್ಯವನ್ನೇ ಬೋಧಿಸುವೆ ಎಂಬುದು ನಮಗೆ ಗೊತ್ತಿದೆ. ಬೇರೆಯವರು ನಿನ್ನ ವಿಷಯವಾಗಿ ಏನೇ ಯೋಚಿಸಿದರೂ ನೀನು ಹೆದರುವುದಿಲ್ಲ. ನೀನು ಮುಖದಾಕ್ಷಿಣ್ಯ ಮಾಡುವುದಿಲ್ಲ.