ಮಾರ್ಕ 4:6 - ಪರಿಶುದ್ದ ಬೈಬಲ್6 ಆದರೆ ಸೂರ್ಯನು ಮೇಲೇರಿದಾಗ, ಆಳವಾದ ಬೇರಿಲ್ಲದ ಕಾರಣ ಆ ಸಸಿಗಳು ಒಣಗಿಹೋದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದರೆ ಬಿಸಿಲೇರಿದಾಗ ಬಾಡಿ, ಬೇರಿಲ್ಲದ ಕಾರಣ ಒಣಗಿ ಹೋದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಬಿಸಿಲೇರಿದಾಗ ಬಾಡಿದವು; ಆಳವಾಗಿ ಬೇರೂರಲು ಆಗದ ಕಾರಣ ಅವು ಒಣಗಿಹೋದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆದರೆ ಬಿಸಿಲೇರಿದಾಗ ಬಾಡಿ ಬೇರಿಲ್ಲದಕಾರಣ ಒಣಗಿಹೋದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದರೆ ಬಿಸಿಲೇರಿದಾಗ ಅವು ಬಾಡಿಹೋಗಿ, ಬೇರಿಲ್ಲದ ಕಾರಣ ಒಣಗಿಹೋದವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಸೂರ್ಯಾ ಉಗ್ವುನ್ ಯೆಲ್ಲ್ಯಾ ತನ್ನಾ, ತಿ ಝಾಡಾ ವಾಳುನ್ ಗೆಲಿ, ಕಶ್ಯಾಕ್ ಮಟ್ಲ್ಯಾರ್, ತೆಂಚಿ ಬೆರಾ ಭುತ್ತುರ್ ಜಾವ್ಕನತ್ತಿ. ತಸೆ ಮನುನ್, ತಿ ಝಾಡಾ, ವಾಳುನ್ ಗೆಲಿ. ಅಧ್ಯಾಯವನ್ನು ನೋಡಿ |
ನಿಮ್ಮ ಅನ್ಯೋನ್ಯತೆಯ ಭೋಜನದಲ್ಲಿ ಈ ಜನರು ಮುಳುಗಿಹೋದ ಬಂಡೆಗಳಂತಿದ್ದಾರೆ. ಅವರು ಭಯವಿಲ್ಲದೆ ನಿಮ್ಮ ಜೊತೆಯಲ್ಲಿ ತಿನ್ನುತ್ತಾರೆ. ಅವರು ತಮ್ಮ ಬಗ್ಗೆ ಮಾತ್ರ ಚಿಂತಿಸುವ ಕುರುಬರಾಗಿದ್ದಾರೆ. ಅವರು ನೀರಿಲ್ಲದ ಮೋಡಗಳಂತಿದ್ದಾರೆ. ಗಾಳಿಯು ಆ ಮೋಡಗಳನ್ನು ಬಡಿದುಕೊಂಡು ಹೋಗುವುದು. ಅವರು ಕಾಲಕ್ಕೆ ತಕ್ಕಂತೆ ಫಲಬಿಡದ ಮತ್ತು ಬೇರುಸಹಿತ ಕಿತ್ತುಬಂದು ಉರುಳಿಹೋದ ಮರಗಳಿಂತಿದ್ದಾರೆ.
ಯೆಹೋವನೇ, ನೀನೇ ನಮ್ಮ ಆಶ್ರಯವು. ಬಡವರಿಗೆ ನೀನೇ ಆಧಾರ. ಅವರ ಸಮಸ್ಯೆಗಳು ಅವರನ್ನು ಕಷ್ಟಕ್ಕೆ ಗುರಿಪಡಿಸುವವು. ಆದರೆ ನೀನು ಅವರನ್ನು ಸಂರಕ್ಷಿಸುವೆ. ಯೆಹೋವನೇ, ಒಂದು ಮನೆಯ ಜನರನ್ನು ಪ್ರವಾಹದಿಂದಲೂ, ಬಿಸಿಲಿನ ತಾಪದಿಂದಲೂ ಕಾಪಾಡುವಂತೆ ನೀನಿರುವೆ. ಮುಂದಿನ ತೊಂದರೆಗಳು ಬಿರುಗಾಳಿಯಂತೆಯೂ ಮಳೆಯಂತೆಯೂ ಇವೆ. ಮಳೆಯು ಗೋಡೆಗೆ ಬಡಿದು ಕೆಳಗೆ ಇಳಿಯುವದು. ಆದರೆ ಮನೆಯೊಳಗಿರುವವರಿಗೆ ಹಾನಿಯೇ ಆಗದು.