ಮಾರ್ಕ 5:19 - ಪರಿಶುದ್ದ ಬೈಬಲ್19 ಆದರೆ ಯೇಸು ಅವನನ್ನು ಕರೆದುಕೊಂಡು ಹೋಗಲು ಒಪ್ಪದೆ, “ನಿನ್ನ ಮನೆಗೂ ನಿನ್ನ ಸ್ನೇಹಿತರ ಬಳಿಗೂ ಹೋಗು. ಪ್ರಭುವು ನಿನಗೆ ಮಾಡಿದ ಒಳ್ಳೆಯದನ್ನೂ ಆತನು ನಿನಗೆ ತೋರಿದ ಕರುಣೆಯನ್ನೂ ಅವರಿಗೆ ತಿಳಿಸು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆದರೆ ಯೇಸು ಅವನ ಬೇಡಿಕೆಯನ್ನು ಒಪ್ಪದೆ ಅವನಿಗೆ, “ನೀನು ನಿನ್ನ ಮನೆಗೂ ನಿನ್ನ ಜನರ ಬಳಿಗೂ ಹೋಗಿ ಕರ್ತನು ನಿನ್ನಲ್ಲಿ ಕರುಣೆಯಿಟ್ಟು ನಿನಗೆ ಏನೇನು ಉಪಕಾರಗಳನ್ನು ಮಾಡಿದ್ದಾನೋ ಅದನ್ನು ಹೇಳು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಯೇಸು ಅದಕ್ಕೊಪ್ಪದೆ, “ನೀನು ನಿನ್ನ ಮನೆಗೂ ನಿನ್ನ ಸ್ವಜನರ ಬಳಿಗೂ ಹೋಗು. ಸರ್ವೇಶ್ವರ ನಿನಗೆ ಎಂಥಾ ಉಪಕಾರಮಾಡಿದ್ದಾರೆ, ಎಷ್ಟು ಕರುಣೆ ತೋರಿಸಿದ್ದಾರೆ ಎಂದು ಅವರಿಗೆ ವಿವರಿಸು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆದರೆ ಆತನು ಅವನನ್ನು ಇರಗೊಡದೆ ಅವನಿಗೆ - ನೀನು ನಿನ್ನ ಮನೆಗೂ ನಿನ್ನ ಜನರ ಬಳಿಗೂ ಹೋಗಿ ಸ್ವಾವಿುಯು ನಿನ್ನಲ್ಲಿ ಕರುಣೆಯಿಟ್ಟು ನಿನಗೆ ಎಂಥೆಂಥ ಉಪಕಾರಗಳನ್ನು ಮಾಡಿದ್ದಾನೋ ಅದನ್ನು ಹೇಳು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯೇಸು ಅದಕ್ಕೊಪ್ಪದೆ ಅವನಿಗೆ, “ನೀನು ಮನೆಗೆ ಹೋಗಿ ನಿನ್ನ ಜನರಿಗೆ ಕರ್ತದೇವರು ನಿನಗೆ ಮಾಡಿರುವ ಮಹಾಕಾರ್ಯಗಳನ್ನು ಮತ್ತು ನಿನ್ನನ್ನು ಹೇಗೆ ಕರುಣಿಸಿದ್ದಾರೆ ಎಂಬುದನ್ನು ತಿಳಿಸು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಖರೆ, ಜೆಜು ಕಬುಲ್ ಹೊವ್ಕ್ ನಾ, ತೆಕಾ “ತಿಯಾ ತುಜ್ಯಾ ಘರಾಕ್ ಜಾ, ತುಜ್ಯಾ ಘರ್‍ಚ್ಯಾ ಲೊಕಾಕ್ನಿ, ದೆವಾನ್ ಅಪ್ನಾಚ್ಯಾ ಮೊಟ್ಯಾ ದಯೆನ್, ತುಕಾ ಕಾಯ್ ಕರ್‍ಲ್ಯಾನ್, ಮನುನ್ ಸಾಂಗ್” ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |