Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:22 - ಪರಿಶುದ್ದ ಬೈಬಲ್‌

22 ಸಭಾಮಂದಿರದ ಅಧಿಕಾರಿಯೊಬ್ಬನು ಆ ಸ್ಥಳಕ್ಕೆ ಬಂದನು. ಅವನ ಹೆಸರು ಯಾಯಿರ. ಅವನು ಯೇಸುವನ್ನು ಕಂಡು, ಆತನ ಮುಂದೆ ಅಡ್ಡಬಿದ್ದು ನಮಸ್ಕರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಗ ಸಭಾಮಂದಿರದ ಅಧಿಕಾರಿಗಳಲ್ಲಿ ಒಬ್ಬನಾದ ಯಾಯೀರನೆಂಬವನು ಬಂದು ಯೇಸುವನ್ನು ಕಂಡು ಆತನ ಪಾದಗಳಿಗೆ ಬಿದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಪ್ರಾರ್ಥನಾಮಂದಿರದ ಅಧಿಕಾರಿಯೊಬ್ಬನು ಅಲ್ಲಿಗೆ ಬಂದನು. ಅವನ ಹೆಸರು ಯಾಯೀರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಗ ಸಭಾಮಂದಿರದ ಅಧಿಕಾರಿಗಳಲ್ಲಿ ಒಬ್ಬನಾದ ಯಾಯೀರನೆಂಬವನು ಬಂದು ಯೇಸುವನ್ನು ಕಂಡು ಆತನ ಪಾದಗಳಿಗೆ ಬಿದ್ದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯೇಸು ಸರೋವರದ ದಡದಲ್ಲಿದ್ದಾಗ ಸಭಾಮಂದಿರದ ಅಧಿಕಾರಿಗಳಲ್ಲಿ ಒಬ್ಬನಾದ ಯಾಯೀರನು ಅಲ್ಲಿಗೆ ಬಂದು ಯೇಸುವನ್ನು ಕಂಡು ಅವರ ಪಾದಕ್ಕೆ ಬಿದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಎಕ್ಲೊ ಸಿನಾಗೊಗಾಚೊ ಅದಿಕಾರ್‍ಯಾ ಹೊತ್ತೊ, ತೆಚೆ ನಾವ್ ಜಾಯಿರ್ ತೊ ಜೆಜು ಹೊತ್ತ್ಯಾಕ್ಡೆ ಯೆಲೊ, ಅನಿ ಜೆಜುಚ್ಯಾ ಪಾಂಯಾತ್ ಪಡ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:22
14 ತಿಳಿವುಗಳ ಹೋಲಿಕೆ  

ಯೇಸು ಸಬ್ಬತ್‌ದಿನದಲ್ಲಿ ವಾಸಿಮಾಡಿದ್ದರಿಂದ ಸಭಾಮಂದಿರದ ಅಧಿಕಾರಿ ಕೋಪಗೊಂಡು ಜನರಿಗೆ, “ಕೆಲಸಕ್ಕಾಗಿ ವಾರದಲ್ಲಿ ಆರು ದಿನಗಳಿವೆ. ಆ ದಿನಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ. ಸಬ್ಬತ್‌ದಿನದಲ್ಲಿ ವಾಸಿಮಾಡಿಸಿಕೊಳ್ಳಬಾರದು” ಎಂದು ಹೇಳಿದನು.


ಬಳಿಕ ಅವರೆಲ್ಲರೂ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಾಲಯದ ಮುಂದೆಯೇ ಹೊಡೆದರು. (ಸೋಸ್ಥೆನನು ಆಗ ಸಭಾಮಂದಿರದ ಅಧ್ಯಕ್ಷನಾಗಿದ್ದನು.) ಆದರೆ ಗಲ್ಲಿಯೋನ ಅದನ್ನು ತನ್ನ ಗಮನಕ್ಕೆ ತೆಗೆದುಕೊಳ್ಳಲಿಲ್ಲ.


ಕ್ರಿಸ್ಪನು ಸಭಾಮಂದಿರದ ಅಧ್ಯಕ್ಷನಾಗಿದ್ದನು. ಕ್ರಿಸ್ಪನು ಮತ್ತು ಅವನ ಮನೆಯಲ್ಲಿ ವಾಸವಾಗಿದ್ದ ಎಲ್ಲಾ ಜನರು ಪ್ರಭುವಿನಲ್ಲಿ ನಂಬಿಕೆಯಿಟ್ಟರು. ಕೊರಿಂಥದಲ್ಲಿ ಇತರ ಅನೇಕ ಜನರು ಪೌಲನಿಗೆ ಕಿವಿಗೊಟ್ಟರು ಮತ್ತು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.


ಮೋಶೆಯ ಧರ್ಮಶಾಸ್ತ್ರವನ್ನು ಮತ್ತು ಪ್ರವಾದಿಗಳ ಗ್ರಂಥಗಳನ್ನು ಓದಲಾಯಿತು. ಬಳಿಕ ಸಭಾಮಂದಿರದ ನಾಯಕರು ಪೌಲ ಬಾರ್ನಬರಿಗೆ, “ಸಹೋದರರೇ, ಇಲ್ಲಿರುವ ಜನರಿಗೆ ಸಹಾಯವಾಗುವಂತೆ ಏನನ್ನಾದರೂ ನೀವು ಹೇಳಬೇಕೆಂದಿದ್ದರೆ, ದಯವಿಟ್ಟು ಹೇಳಿ!” ಎಂಬ ಸಂದೇಶವನ್ನು ಕಳುಹಿಸಿದರು.


ಇದನ್ನು ಕಂಡ ಬೆಸ್ತರಿಗೆಲ್ಲಾ ವಿಸ್ಮಯವಾಯಿತು. ಸೀಮೋನ್ ಪೇತ್ರನಂತೂ ಯೇಸುವಿನ ಮುಂದೆ ಮೊಣಕಾಲೂರಿ “ಪ್ರಭುವೇ ನನ್ನನ್ನು ಬಿಟ್ಟುಹೋಗು, ನಾನು ಪಾಪಿಯಾಗಿದ್ದೇನೆ!” ಎಂದನು.


ತನಗೆ ಗುಣವಾಯಿತೆಂಬುದು ಆ ಸ್ತ್ರೀಗೆ ತಿಳಿದಿತ್ತು. ಆದ್ದರಿಂದ ಆಕೆ ಬಂದು, ಯೇಸುವಿನ ಪಾದಗಳ ಮುಂದೆ ಅಡ್ಡಬಿದ್ದು ನಡೆದ ಸಂಗತಿಯನ್ನೆಲ್ಲಾ ಹೇಳಿದಳು.


ನಾನೇ ಯೋಹಾನನು. ನಾನು ಇವುಗಳನ್ನೆಲ್ಲ ಕೇಳಿದೆನು ಮತ್ತು ನೋಡಿದೆನು. ನಾನು ಇವುಗಳನ್ನು ಕೇಳಿ, ಕಂಡಾಗ, ನನಗೆ ಇವುಗಳನ್ನೆಲ್ಲ ತೋರಿಸಿದ ದೇವದೂತನನ್ನು ಆರಾಧಿಸುವುದಕ್ಕಾಗಿ ಅವನ ಪಾದಗಳಿಗೆ ಅಡ್ಡಬಿದ್ದೆನು.


ದೆವ್ವವು ಅವನನ್ನು ಪದೇಪದೇ ವಶಪಡಿಸಿಕೊಳ್ಳುತ್ತಿತ್ತು. ಆ ಮನುಷ್ಯನನ್ನು ಸೆರೆಮನೆಗೆ ಹಾಕಿ ಕೈಕಾಲುಗಳನ್ನು ಸರಪಣಿಗಳಿಂದ ಕಟ್ಟಿದರೂ ಅವನು ಅವುಗಳನ್ನು ಕಿತ್ತೊಗೆದುಬಿಡುತ್ತಿದ್ದನು. ಅವನೊಳಗಿದ್ದ ದೆವ್ವವು ಅವನನ್ನು ಜನರಿಲ್ಲದ ಸ್ಥಳಗಳಿಗೆ ಬಲವಂತವಾಗಿ ಕೊಂಡೊಯ್ಯುತ್ತಿತ್ತು. ಯೇಸು ಆ ದೆವ್ವಕ್ಕೆ, “ಅವನನ್ನು ಬಿಟ್ಟು ಹೋಗು” ಎಂದು ಆಜ್ಞಾಪಿಸಿದನು. ಆ ಮನುಷ್ಯನು ಯೇಸುವಿನ ಮುಂದೆ ಅಡ್ಡಬಿದ್ದು ಗಟ್ಟಿಯಾದ ಸ್ವರದಿಂದ, “ಯೇಸುವೇ, ಮಹೋನ್ನತನಾದ ದೇವರ ಮಗನೇ, ನನ್ನಿಂದ ನಿನಗೇನಾಗಬೇಕಾಗಿದೆ? ದಯಮಾಡಿ ನನ್ನನ್ನು ದಂಡಿಸಬೇಡ!” ಎಂದು ಕೂಗಿದನು.


ಯೇಸು ಮತ್ತು ಈ ಶಿಷ್ಯರು ಸಭಾಮಂದಿರದ ಅಧಿಕಾರಿಯಾದ ಯಾಯಿರನ ಮನೆಗೆ ಹೋದರು. ಅಲ್ಲಿ ಅನೇಕ ಜನರು ಜೋರಾಗಿ ಅಳುತ್ತಿರುವುದನ್ನು ಯೇಸು ನೋಡಿದನು. ಅಲ್ಲಿ ಬಹಳ ಗದ್ದಲವಿತ್ತು.


ಅವರು ಆ ಮನೆಗೆ ಬಂದಾಗ, ಮಗುವನ್ನು ತಾಯಿ ಮರಿಯಳ ಬಳಿ ಕಂಡು, ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ಅಲ್ಲದೆ ತಾವು ಮಗುವಿಗಾಗಿ ತಂದಿದ್ದ ಕಾಣಿಕೆಗಳನ್ನು ತೆರೆದು ಚಿನ್ನ, ಧೂಪ ಮತ್ತು ಸುಗಂಧ ದ್ರವ್ಯಗಳನ್ನು ನೀಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು