Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:29 - ಪರಿಶುದ್ದ ಬೈಬಲ್‌

29 ಮುಟ್ಟಿದ ಕೂಡಲೆ, ಆಕೆಯ ರಕ್ತಸ್ರಾವ ನಿಂತುಹೋಯಿತು. ತನಗೆ ಗುಣವಾಯಿತೆಂಬುದು ಆಕೆಗೆ ಅರಿವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಮುಟ್ಟಿದ ಕೂಡಲೆ ಆಕೆಯ ರಕ್ತಸ್ರಾವವು ನಿಂತುಹೋದುದರಿಂದ ಆಕೆಯು, ನನ್ನನ್ನು ಕಾಡಿದ ರೋಗವು ಹೋಗಿ ನನಗೆ ಗುಣವಾಯಿತು ಎಂದು ತನ್ನ ಮನಸ್ಸಿನಲ್ಲಿ ತಿಳಿದುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅದನ್ನು ಮುಟ್ಟಿದಾಕ್ಷಣ ಅವಳ ರಕ್ತಸ್ರಾವ ನಿಂತುಹೋಯಿತು. ಕಾಡುತ್ತಿದ್ದ ವ್ಯಾಧಿಯಿಂದ ತಾನು ಗುಣಹೊಂದಿದ್ದೇನೆಂದು ಆಕೆಗೆ ಅರಿವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಗುಂಪಿನಲ್ಲಿ ಹಿಂದಿನಿಂದ ಬಂದು ಆತನ ಉಡುಪನ್ನು ಮುಟ್ಟಿದಳು. ಮುಟ್ಟಿದ ಕೂಡಲೆ ಆಕೆಗೆ ರಕ್ತಹರಿಯುವದು ನಿಂತುಹೋದದರಿಂದ ಆಕೆಯು - ನನ್ನನ್ನು ಕಾಡಿದ ರೋಗವು ಹೋಗಿ ನನಗೆ ಗುಣವಾಯಿತು ಎಂದು ತನ್ನೊಳಗೆ ತಿಳುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಕೂಡಲೇ ಆಕೆಯ ರಕ್ತಸ್ರಾವವು ನಿಂತಿತು ಮತ್ತು ರೋಗಬಾಧೆಯಿಂದ ತಾನು ಗುಣಹೊಂದಿದಳೆಂದು ಆಕೆಗೆ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ತೆನಿ, ಜೆಜುಚ್ಯಾ ಫಾಳ್‍ಯಾಕ್ನಿ ಹಾತ್‍ಲಾವಲ್ಲ್ಯಾ ತನ್ನಾಚ್, ತಿಚೆ, ರಗಾತ್‍ ಜಾತಲೆ, ಬಂದ್‍ಹೊಲೆ. ತಿಕಾ, ಅಪ್ನಿ ಆರಾಮ್ ಹೊವ್ನ್, ಹ್ಯಾ ಕಸ್ಟಾತ್ನಾ ಭಾಯ್ರ್ ಪಡ್ಲೊ, ಮನುನ್ ಕಳ್ಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:29
14 ತಿಳಿವುಗಳ ಹೋಲಿಕೆ  

ಯೇಸು ಆಕೆಗೆ, “ಮಗಳೇ, ನಿನ್ನ ನಂಬಿಕೆಯಿಂದಲೇ ನಿನಗೆ ವಾಸಿಯಾಯಿತು. ಸಮಾಧಾನದಿಂದ ಹೋಗು. ನಿನಗೆ ಇನ್ನು ಮೇಲೆ ಆ ಕಾಯಿಲೆಯ ಬಾಧೆ ಇರುವುದಿಲ್ಲ” ಎಂದು ಹೇಳಿದನು.


ಯೇಸು ಅನೇಕ ಜನರನ್ನು ಗುಣಪಡಿಸಿದನು. ಆದ್ದರಿಂದ ಕಾಯಿಲೆಯಾಗಿದ್ದ ಜನರೆಲ್ಲರೂ ಆತನನ್ನು ಮುಟ್ಟುವುದಕ್ಕಾಗಿ ಆತನ ಮೇಲೆ ಬೀಳುತ್ತಿದ್ದರು. ದೆವ್ವಗಳಿಂದ ಪೀಡಿತರಾಗಿದ್ದ ಕೆಲವು ಜನರು ಅಲ್ಲಿದ್ದರು.


ಆತನು ನಮ್ಮ ಪಾಪಗಳನ್ನೆಲ್ಲಾ ಕ್ಷಮಿಸುವನು; ನಮ್ಮ ಕಾಯಿಲೆಗಳನ್ನೆಲ್ಲಾ ವಾಸಿಮಾಡುವನು.


ನನ್ನ ದೇವರಾದ ಯೆಹೋವನೇ, ನಾನು ನಿನಗೆ ಪ್ರಾರ್ಥಿಸಿದಾಗ ನೀನು ನನ್ನನ್ನು ಗುಣಪಡಿಸಿದೆ.


ಅವರ ಒಡೆದ ಹೃದಯಗಳನ್ನು ಆತನು ವಾಸಿಮಾಡುವನು; ಅವರ ಗಾಯಗಳನ್ನು ಕಟ್ಟುವನು.


ಆತನು ಆಜ್ಞಾಪಿಸಲು ಜನರು ಗುಣಹೊಂದಿದರು. ಸಮಾಧಿಯಿಂದ ತಪ್ಪಿಸಿಕೊಂಡರು.


ಆತನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ಆತನ ದೃಷ್ಟಿಗೆ ಯೋಗ್ಯವಾದವುಗಳನ್ನು ಮಾಡಬೇಕು; ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಬೇಕು. ಆಗ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ಕಾಯಿಲೆಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನಾಗಿದ್ದೇನೆ” ಎಂದು ಹೇಳಿದನು.


“ಭೂಮಿಯು ಬಹಳ ಬರಡಾಗಿ ಅದರ ಮೇಲೆ ಬೆಳಗಳೇ ಬೆಳೆಯದಂತಾಗಬಹುದು, ಬಹುಶಃ ಘೋರವಾದ ವ್ಯಾಧಿಗಳು ಜನರಲ್ಲಿ ಹರಡಬಹುದು. ಬೆಳೆಯುವ ಬೆಳೆಗಳೆಲ್ಲ ಬಹುಶಃ ಕ್ರಿಮಿಕೀಟಗಳಿಂದ ನಾಶವಾಗಬಹುದು. ಇಲ್ಲವೆ ನಿನ್ನ ಜನರ ಮೇಲೆ ಕೆಲವು ನಗರಗಳಲ್ಲಿ ಅವರ ಶತ್ರುಗಳು ಆಕ್ರಮಣ ಮಾಡಬಹುದು. ನಿನ್ನ ಜನರಲ್ಲಿ ಅನೇಕರು ವ್ಯಾಧಿಗೆ ಒಳಗಾಗಬಹುದು.


“ಒಬ್ಬನು ಸ್ತ್ರೀಯನ್ನು ಅವಳ ತಿಂಗಳ ಮುಟ್ಟಿನ ಸಮಯದಲ್ಲಿ ಸಂಭೋಗ ಮಾಡಿದರೆ, ಅವರಿಬ್ಬರನ್ನೂ ಕುಲದಿಂದ ತೆಗೆದುಹಾಕಬೇಕು. ಯಾಕೆಂದರೆ ಅವನು ಅವಳ ಶೋಣಿತಸ್ಥಾನವನ್ನು ಬಯಲುಪಡಿಸಿದನು; ಅವಳು ಬಯಲುಪಡಿಸಿಕೊಂಡಳು.


ಅದೇ ಸಮಯದಲ್ಲಿ, ಯೇಸು ಅನೇಕ ಜನರನ್ನು ಅವರವರ ಕಾಯಿಲೆಗಳಿಂದ, ರೋಗಗಳಿಂದ ಗುಣಪಡಿಸಿದನು. ದೆವ್ವಗಳಿಂದ ಪೀಡಿತರಾಗಿದ್ದವರನ್ನು ಬಿಡಿಸಿದನು. ಅನೇಕ ಕುರುಡರಿಗೆ ದೃಷ್ಟಿಯನ್ನು ಕೊಟ್ಟನು.


ಹನ್ನೆರಡು ವರ್ಷಗಳಿಂದ ರಕ್ತಸ್ರಾವ ಕಾಯಿಲೆ ಹೊಂದಿದ್ದ ಒಬ್ಬ ಹೆಂಗಸು ಅಲ್ಲಿದ್ದಳು. ಆ ಹೆಂಗಸು ಯೇಸುವಿನ ಹಿಂದೆಯೇ ಬಂದು ಆತನ ಮೇಲಂಗಿಯ ತುದಿಯನ್ನು ಮುಟ್ಟಿದಳು.


ಆ ಸ್ತ್ರೀಯು, “ಆತನ ಉಡುಪನ್ನು ಮುಟ್ಟಿದರೆ ಸಾಕು ನಾನು ಗುಣಮುಖಳಾಗುತ್ತೇನೆ” ಎಂದುಕೊಂಡದ್ದರಿಂದ


“ಒಂದು ಮನೆಯಲ್ಲಿ ಹೊಸ ಕಲ್ಲುಗಳನ್ನು ಮತ್ತು ಮಣ್ಣನ್ನು ಹಾಕಿಸಿದ ನಂತರ ಯಾಜಕನು ಅದನ್ನು ಪರೀಕ್ಷಿಸಬೇಕು. ಬೂಷ್ಟು ಮನೆಯಲ್ಲಿ ಹರಡದಿದ್ದರೆ, ಯಾಜಕನು ಮನೆಯನ್ನು ಶುದ್ಧವೆಂದು ಪ್ರಕಟಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು