Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:42 - ಪರಿಶುದ್ದ ಬೈಬಲ್‌

42 ಕೂಡಲೇ ಆ ಬಾಲಕಿ ಎದ್ದುನಿಂತು ನಡೆಯಲಾರಂಭಿಸಿದಳು. ಆ ಬಾಲಕಿಗೆ ಹನ್ನೆರಡು ವರ್ಷ ವಯಸ್ಸಾಗಿತ್ತು. ಅವಳ ತಂದೆತಾಯಿಗಳು ಮತ್ತು ಶಿಷ್ಯರು ಅತ್ಯಾಶ್ಚರ್ಯಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಕೂಡಲೆ ಆ ಹುಡುಗಿ ಎದ್ದು ನಡೆದಾಡಿದಳು; ಆಕೆಯು ಹನ್ನೆರಡು ವರ್ಷ ವಯಸ್ಸಿನವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಅವಳು ತಟ್ಟನೆ ಎದ್ದು ನಡೆದಾಡತೊಡಗಿದಳು. ಅಲ್ಲಿದ್ದವರೆಲ್ಲರೂ ಆಶ್ಚರ್ಯಭರಿತರಾದರು. ಅವಳಿಗೆ ಹನ್ನೆರಡು ವರ್ಷ ವಯಸ್ಸು ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಕೂಡಲೆ ಆ ಹುಡುಗಿ ಎದ್ದು ನಡೆದಾಡಿದಳು; ಆಕೆಯು ಹನ್ನೆರಡು ವರುಷ ವಯಸ್ಸಿನವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಕೂಡಲೇ ಆ ಹುಡುಗಿ ಎದ್ದು ನಡೆದಾಡಿದಳು. ಆಕೆಗೆ ಹನ್ನೆರಡು ವಯಸ್ಸಾಗಿತ್ತು. ಎಲ್ಲರೂ ಬಹಳ ಆಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ತನ್ನಾ ತೆ ಚೆಡು ಉಟ್ಲೆ ಅನಿ ಫಿರುನ್-ಖೆಳುಕ್ ಲಾಗ್ಲೆ ಬಾರಾ ವರ್ಸಾಚೆ ಚೆಡು ಹೊತ್ತೆ ತೆ. ಹೆ ಬಗುನ್ ತೆನಿ ಅಜಾಪ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:42
7 ತಿಳಿವುಗಳ ಹೋಲಿಕೆ  

ಜನರು ನಿಜವಾಗಿಯೂ ಅತ್ಯಾಶ್ಚರ್ಯಗೊಂಡು, “ಯೇಸು ಎಲ್ಲವನ್ನೂ ಒಳ್ಳೆಯ ರೀತಿಯಲ್ಲಿ ಮಾಡುತ್ತಾನೆ. ಆತನು ಕಿವುಡರಿಗೆ ಕಿವಿ ಕೇಳಿಸುವಂತೆ ಮಾಡುತ್ತಾನೆ. ಮೂಕರು ಮಾತಾಡುವಂತೆ ಮಾಡುತ್ತಾನೆ” ಎಂದು ಹೇಳಿದರು.


ನಂತರ ಯೇಸು ತನ್ನ ಶಿಷ್ಯರಿದ್ದ ದೋಣಿಯೊಳಕ್ಕೆ ಹತ್ತಿದನು. ಆಗ ಗಾಳಿಯು ನಿಂತುಹೋಯಿತು. ಶಿಷ್ಯರಿಗೆ ಬಹಳ ಆಶ್ಚರ್ಯವಾಯಿತು.


ಶಿಷ್ಯರು ಬಹಳ ಭಯಪಟ್ಟು, “ಈತನು ಯಾರಿರಬಹುದು? ಗಾಳಿ ಮತ್ತು ನೀರು ಸಹ ಈತನ ಮಾತನ್ನು ಕೇಳುತ್ತವೆಯಲ್ಲಾ?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.


ಜನರೆಲ್ಲರೂ ದಿಗ್ಭ್ರಮೆಗೊಂಡು, “ಇದೇನು? ಹೊಸದೊಂದನ್ನು ಈತನು ಅಧಿಕಾರದಿಂದ ಉಪದೇಶಿಸುತ್ತಿದ್ದಾನೆ! ಈತನ ಆಜ್ಞೆಗೆ ದೆವ್ವಗಳೂ ವಿಧೇಯವಾಗುತ್ತಿವೆ” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.


ಯೇಸು ಆ ಬಾಲಕಿಯ ಕೈ ಹಿಡಿದು, ಅವಳಿಗೆ, “ತಲಿಥಾ ಕೂಮ್!” ಎಂದು ಹೇಳಿದನು. (ಅಂದರೆ “ಚಿಕ್ಕ ಹುಡುಗಿಯೇ, ಎದ್ದೇಳು ಎಂದು ನಾನು ಹೇಳುತ್ತಿದ್ದೇನೆ” ಎಂದರ್ಥ.)


ಈ ವಿಷಯವನ್ನು ಯಾರಿಗೂ ಹೇಳಕೂಡದೆಂದು ಯೇಸು ಆಕೆಯ ತಂದೆತಾಯಿಗಳಿಗೆ ಖಂಡಿತವಾಗಿ ಹೇಳಿ, “ಆ ಬಾಲಕಿಗೆ ಊಟ ಮಾಡಿಸಿರಿ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು