Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:43 - ಪರಿಶುದ್ದ ಬೈಬಲ್‌

43 ಈ ವಿಷಯವನ್ನು ಯಾರಿಗೂ ಹೇಳಕೂಡದೆಂದು ಯೇಸು ಆಕೆಯ ತಂದೆತಾಯಿಗಳಿಗೆ ಖಂಡಿತವಾಗಿ ಹೇಳಿ, “ಆ ಬಾಲಕಿಗೆ ಊಟ ಮಾಡಿಸಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಅವರೆಲ್ಲರೂ ಬಹಳ ಆಶ್ಚರ್ಯದಿಂದ ಬೆರಗಾದರು. ಆ ಮೇಲೆ ಆತನು ಅವರಿಗೆ, ಇದು ಯಾರಿಗೂ ತಿಳಿಯಬಾರದೆಂದು ಕಟ್ಟಪ್ಪಣೆ ಮಾಡಿದನು. ಆ ಹುಡುಗಿಗೆ ಊಟ ಮಾಡಲು ಏನಾದರೂ ಕೊಡಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಈ ವಿಷಯವನ್ನು ಬೇರೆ ಯಾರಿಗೂ ತಿಳಿಸಬಾರದೆಂದು ಯೇಸು ಅವರಿಗೆ ಕಟ್ಟಪ್ಪಣೆ ಮಾಡಿದರು. ಬಾಲಕಿಗೆ ತಿನ್ನಲು ಏನಾದರೂ ಕೊಡುವಂತೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಅವರು ಬಹಳ ಆಶ್ಚರ್ಯದಿಂದ ಬೆರಗಾದರು. ಆಮೇಲೆ ಆತನು ಅವರಿಗೆ - ಇದು ಯಾರಿಗೂ ತಿಳಿಯಬಾರದೆಂದು ಬಹು ಖಂಡಿತವಾಗಿ ಹೇಳಿ ಆ ಹುಡುಗಿಗೆ ಊಟಮಾಡಿಸಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಯೇಸು ಅವರಿಗೆ ನಡೆದದ್ದನ್ನು ಯಾರಿಗೂ ತಿಳಿಸಬಾರದು ಎಂದು ಬಹು ಖಂಡಿತವಾಗಿ ಹೇಳಿ ಹುಡುಗಿಗೆ ತಿನ್ನಲು ಏನಾದರೂ ಕೊಡಬೇಕೆಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ಮಾನಾ ಜೆಜುನ್ ಹಿ ಖಬರ್ ಕೊನಾಕ್ಬಿ ಸಾಂಗುನಕಾಸಿ ಮನುನ್ ತೆಂಕಾ ಖಡಕ್ ತಾಕಿತ್ ದಿಲ್ಯಾನ್ ಅನಿ “ತ್ಯಾ ಚೆಡ್ಬಾಕ್ ಕಾಯ್ ತರ್ ಖಾವ್ಕ್ ದಿವಾ”,ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:43
15 ತಿಳಿವುಗಳ ಹೋಲಿಕೆ  

ಯೇಸು ಅವನಿಗೆ, “ಇದು ಹೇಗಾಯಿತೆಂಬುದನ್ನು ಯಾರಿಗೂ ಹೇಳಬೇಡ. ಈಗ ನೀನು ಹೋಗಿ ಯಾಜಕನಿಗೆ ನಿನ್ನ ಮೈಯನ್ನು ತೋರಿಸು. ಗುಣಹೊಂದಿದವರು ಮೋಶೆಯ ಆಜ್ಞೆಗನುಸಾರವಾಗಿ ಕೊಡತಕ್ಕ ಕಾಣಿಕೆಯನ್ನು ಅರ್ಪಿಸು. ನೀನು ಗುಣವಾದದ್ದಕ್ಕೆ ಅದು ಸಾಕ್ಷಿಯಾಗಿರುವುದು” ಎಂದು ಹೇಳಿದನು.


ಈ ಸಂಗತಿಯನ್ನು ತಿಳಿಸಕೂಡದೆಂದು ಯೇಸು ಜನರಿಗೆ ಆಜ್ಞಾಪಿಸಿದನು. ತನ್ನ ಬಗ್ಗೆ ಇತರ ಜನರಿಗೆ ತಿಳಿಸಕೂಡದಂತೆ ಯೇಸು ಯಾವಾಗಲೂ ಆಜ್ಞಾಪಿಸುತ್ತಿದ್ದನು. ಆದರೂ ಜನರು ಆತನ ಬಗ್ಗೆ ಇನ್ನೂ ಹೆಚ್ಚಾಗಿ ಹಬ್ಬಿಸಿದರು.


ಯೇಸು ಅವನಿಗೆ, “ನಾನು ನಿನ್ನನ್ನು ಗುಣಪಡಿಸಿದೆನೆಂದು ಯಾರಿಗೂ ಹೇಳದೆ, ನೇರವಾಗಿ ಯಾಜಕನ ಬಳಿಗೆ ಹೋಗಿ ಮೈ ತೋರಿಸು. ನೀನು ಗುಣಹೊಂದಿರುವುದರಿಂದ ಮೋಶೆಯ ಆಜ್ಞಾನುಸಾರವಾಗಿ ದೇವರಿಗೆ ಕಾಣಿಕೆಯನ್ನು ಅರ್ಪಿಸು. ನಿನಗೆ ಗುಣವಾಯಿತು ಎಂಬುದಕ್ಕೆ ಇದು ಜನರಿಗೆ ಸಾಕ್ಷಿಯಾಗಿರುವುದು” ಎಂದು ಎಚ್ಚರಿಕೆ ನೀಡಿ ಕಳುಹಿಸಿಬಿಟ್ಟನು.


ಕೂಡಲೇ ಅವರಿಗೆ ದೃಷ್ಟಿ ಬಂದಿತು. “ಈ ವಿಷಯವನ್ನು ಯಾರಿಗೂ ಹೇಳಬಾರದು” ಎಂದು ಯೇಸು ಅವರಿಗೆ ಎಚ್ಚರಿಕೆ ನೀಡಿದನು.


“ಮನುಷ್ಯರಿಂದ ಬರುವ ಹೊಗಳಿಕೆಯು ನನಗೆ ಬೇಕಾಗಿಲ್ಲ.


ಬಾಲಕಿಯ ತಂದೆತಾಯಿಗಳು ಬೆರಗಾದರು. ಈ ಘಟನೆಯ ಬಗ್ಗೆ ಯಾರಿಗೂ ತಿಳಿಸಬಾರದೆಂದು ಯೇಸು ಅವರಿಗೆ ಆಜ್ಞಾಪಿಸಿದನು.


ಯೇಸು ಅವನಿಗೆ, “ನಿನಗೆ ಹೇಗೆ ಗುಣವಾಯಿತು ಎಂಬುದರ ಬಗ್ಗೆ ಯಾರಿಗೂ ಹೇಳದೆ ಯಾಜಕನ ಬಳಿಗೆ ಹೋಗಿ ನಿನ್ನ ಮೈಯನ್ನು ತೋರಿಸಿ ಮೋಶೆಯ ನಿಯಮಗಳಿಗನುಸಾರವಾಗಿ ಕಾಣಿಕೆಯನ್ನು ದೇವರಿಗೆ ಸಮರ್ಪಿಸು. ನಿನಗೆ ವಾಸಿಯಾಯಿತೆಂಬುದಕ್ಕೆ ಇದೇ ಜನರಿಗೆಲ್ಲಾ ಸಾಕ್ಷಿಯಾಗಿರುವುದು” ಎಂದು ಹೇಳಿದನು. ಆದರೆ ಯೇಸುವಿನ ಸುದ್ದಿಯು ಹೆಚ್ಚೆಚ್ಚಾಗಿ ಹಬ್ಬಿತು.


ಆದರೆ ಯೇಸು ತಾನು ಯಾರೆಂಬುದನ್ನು ಜನರಿಗೆ ತಿಳಿಸಬಾರದೆಂದು ಅವುಗಳಿಗೆ ಖಂಡಿತವಾಗಿ ಆಜ್ಞಾಪಿಸಿದನು.


ಬೆಟ್ಟದಿಂದ ಇಳಿದು ಬರುತ್ತಿರುವಾಗ ಯೇಸು ತನ್ನ ಶಿಷ್ಯರಿಗೆ, “ನೀವು ಬೆಟ್ಟದ ಮೇಲೆ ಕಂಡ ದರ್ಶನವನ್ನು ಈಗ ಯಾರಿಗೂ ಹೇಳದೆ ಮನುಷ್ಯಕುಮಾರನು ಸತ್ತು ಜೀವಂತವಾಗಿ ಎದ್ದುಬಂದ ಮೇಲೆ ತಿಳಿಸಿರಿ” ಎಂದು ಆಜ್ಞಾಪಿಸಿದನು.


ಆದರೆ ಯೇಸುವು ಎಲ್ಲಾ ಜನರಿಗೆ ಕಾಣಿಸಿಕೊಳ್ಳಲಿಲ್ಲ. ದೇವರಿಂದ ಮೊದಲೇ ಸಾಕ್ಷಿಗಳಾಗಿ ಆಯ್ಕೆಗೊಂಡಿದ್ದವರು ಮಾತ್ರ ಆತನನ್ನು ಕಂಡರು! ನಾವೇ ಆ ಸಾಕ್ಷಿಗಳು! ಯೇಸು ಜೀವಂತವಾಗಿ ಎದ್ದುಬಂದ ಮೇಲೆ ನಾವು ಆತನೊಂದಿಗೆ ಊಟ ಮಾಡಿದೆವು ಮತ್ತು ಪಾನ ಮಾಡಿದೆವು.


ಯೇಸು ಅವರ ಸಂಗಡ ಕುಳಿತುಕೊಂಡು ಸ್ವಲ್ಪ ರೊಟ್ಟಿಯನ್ನು ತೆಗೆದುಕೊಂಡನು. ಆತನು ಆಹಾರಕ್ಕಾಗಿ ದೇವರಿಗೆ ಸೋತ್ರಮಾಡಿ ಅದನ್ನು ಮುರಿದು ಅವರಿಗೆ ಕೊಟ್ಟನು.


ಕೂಡಲೇ ಆ ಬಾಲಕಿ ಎದ್ದುನಿಂತು ನಡೆಯಲಾರಂಭಿಸಿದಳು. ಆ ಬಾಲಕಿಗೆ ಹನ್ನೆರಡು ವರ್ಷ ವಯಸ್ಸಾಗಿತ್ತು. ಅವಳ ತಂದೆತಾಯಿಗಳು ಮತ್ತು ಶಿಷ್ಯರು ಅತ್ಯಾಶ್ಚರ್ಯಗೊಂಡರು.


ಯೇಸು ಮತ್ತು ಆ ಶಿಷ್ಯರು ಹಿಂತಿರುಗಿ ಬೆಟ್ಟದಿಂದ ಕೆಳಗಿಳಿದು ಬರುತ್ತಿರುವಾಗ, ಆತನು ಅವರಿಗೆ, “ನೀವು ಬೆಟ್ಟದ ಮೇಲೆ ನೋಡಿದ ಸಂಗತಿಗಳ ಬಗ್ಗೆ ಯಾರಿಗೂ ಹೇಳಬೇಡಿ. ಮನುಷ್ಯಕುಮಾರನು ಸತ್ತು ಜೀವಂತವಾಗಿ ಎದ್ದುಬರುವವರೆಗೆ ಕಾದುಕೊಂಡಿರಿ” ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು