Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:14 - ಪರಿಶುದ್ದ ಬೈಬಲ್‌

14 ಯೇಸು ಪ್ರಸಿದ್ಧನಾಗಿದ್ದುದರಿಂದ ರಾಜನಾದ ಹೆರೋದನಿಗೆ ಯೇಸುವಿನ ವಿಷಯ ತಿಳಿಯಿತು. ಕೆಲವು ಜನರು, “ಇವನು (ಯೇಸು) ಸ್ನಾನಿಕನಾದ ಯೋಹಾನ. ಇವನು ಮತ್ತೆ ಬದುಕಿಬಂದಿದ್ದಾನೆ. ಆದಕಾರಣವೇ ಈ ಅದ್ಭುತಕಾರ್ಯಗಳನ್ನು ಮಾಡಲು ಶಕ್ತನಾಗಿದ್ದಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅಷ್ಟರಲ್ಲಿ ಅರಸನಾದ ಹೆರೋದನು ಯೇಸುವಿನ ಹೆಸರು ಪ್ರಸಿದ್ಧಿಗೆ ಬಂದಿರುವ ವಿಷಯ ಕೇಳಿದನು ಮತ್ತು ಜನರು ಆತನ ವಿಷಯದಲ್ಲಿ, “ಸ್ನಾನಿಕನಾದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ; ಆದುದರಿಂದ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿ ಈತನಲ್ಲಿ ಇದೆ” ಎಂದು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇಷ್ಟರಲ್ಲಿ ಯೇಸುಸ್ವಾಮಿಯ ಹೆಸರು ಮನೆಮಾತಾಯಿತು. ಅದು ಹೆರೋದ ಅರಸನ ಕಿವಿಗೂ ಬಿತ್ತು. ಯೇಸುವಿನ ವಿಚಾರವಾಗಿ ಕೆಲವರು, “ಮಡಿದ ಸ್ನಾನಿಕ ಯೊವಾನ್ನನೇ ಮರಳಿ ಜೀವಂತವಾಗಿ ಬಂದಿದ್ದಾನೆ; ಆದುದರಿಂದಲೇ ಮಹತ್ಕಾರ್ಯಗಳನ್ನು ಮಾಡುವ ಶಕ್ತಿ ಇವನಿಗಿದೆ,” ಎನ್ನುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಮತ್ತು ಅರಸನಾದ ಹೆರೋದನು [ಯೇಸುವಿನ ಸುದ್ದಿಯನ್ನು] ಕೇಳಿದನು. ಯಾಕಂದರೆ ಆತನ ಹೆಸರು ಪ್ರಸಿದ್ಧವಾಯಿತು, ಮತ್ತು ಜನರು ಆತನ ವಿಷಯದಲ್ಲಿ - ಸ್ನಾನಿಕನಾದ ಯೋಹಾನನೇ ತಿರಿಗಿ ಬದುಕಿಬಂದಿದ್ದಾನೆ; ಆದದರಿಂದ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿಗಳು ಅವನಲ್ಲಿ ಅವೆ ಎಂದು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೇಸುವಿನ ಹೆಸರು ಪ್ರಸಿದ್ಧಿಗೆ ಬಂದಿದ್ದರಿಂದ ಅರಸನಾದ ಹೆರೋದನಿಗೆ ಈ ವಿಷಯ ತಿಳಿಯಿತು. “ಈತನು ಸ್ನಾನಿಕನಾದ ಯೋಹಾನನೇ, ಸತ್ತವರೊಳಗಿಂದ ಅವನು ತಿರುಗಿ ಬದುಕಿ ಬಂದಿದ್ದಾನೆ. ಆದ್ದರಿಂದಲೇ ಈತನಲ್ಲಿ ಅದ್ಭುತಕಾರ್ಯಗಳನ್ನು ನಡೆಸುವ ಶಕ್ತಿಗಳಿವೆ,” ಎಂದು ಕೆಲವರು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಹೆರೊದ್ ರಾಜಾನ್ ಹೆಚ್ಯಾ ವಿಶಯಾತ್ ಆಯ್ಕ್ಲ್ಯಾನ್, ಕಶ್ಯಾಕ್ ಮಟ್ಲ್ಯಾರ್ ಜೆಜುಚಿ ಖಬರ್ ಸಗ್ಳ್ಯಾಕ್ಡೆ ಫರ್ಗಟಲ್ಲಿ. ಥೊಡೆಜಾನಾ “ಬಾಲ್ತಿಮ್‍ ದಿತಲೊ ಜುವಾಂವ್ ಮರಲ್ಲೊ ಅನಿ ಝಿತ್ತೊ ಹೊವ್ನ್ ಯೆಲಾ! ತಸೆ ಮನುನ್ ತೆಕಾ ಅಜಾಪಾ ಕರ್‍ತಲೊ ಬಳ್ ಹಾಯ್” ಮನುಲಾಗಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:14
16 ತಿಳಿವುಗಳ ಹೋಲಿಕೆ  

ಪ್ರಭುವಿನ ಉಪದೇಶವು ಮಕೆದೋನಿಯ ಮತ್ತು ಅಖಾಯದಲ್ಲಿ ನಿಮ್ಮಿಂದ ಪ್ರಚಾರವಾಯಿತು. ಇದಲ್ಲದೆ ದೇವರ ಮೇಲಿನ ನಿಮ್ಮ ನಂಬಿಕೆಯು ಎಲ್ಲಾ ಕಡೆಗಳಲ್ಲಿಯೂ ತಿಳಿದುಬಂದಿತು. ಆದುದರಿಂದ ನಿಮ್ಮ ನಂಬಿಕೆಯ ಬಗ್ಗೆ ಏನೂ ಹೇಳಬೇಕಾಗಿಲ್ಲ.


ಆ ಸಮಯದಲ್ಲಿ ಕೆಲವು ಫರಿಸಾಯರು ಯೇಸುವಿನ ಬಳಿಗೆ ಬಂದು, “ಇಲ್ಲಿಂದ ಹೋಗಿ ಅಡಗಿಕೊ! ಹೆರೋದನು ನಿನ್ನನ್ನು ಕೊಲ್ಲಬೇಕೆಂದಿದ್ದಾನೆ!” ಎಂದು ಹೇಳಿದರು.


ಚಕ್ರವರ್ತಿಯಾದ ತಿಬೇರಿಯಸ್ ಸೀಸರನ ಆಳ್ವಿಕೆಯ ಹದಿನೈದನೇ ವರ್ಷ ಅದಾಗಿತ್ತು. ಆಗ, ಪೊಂತ್ಯ ಪಿಲಾತನು ಜುದೇಯ ಪ್ರಾಂತ್ಯಕ್ಕೂ ಹೆರೋದನು ಗಲಿಲಾಯಕ್ಕೂ ಹೆರೋದನ ಸಹೋದರನಾದ ಫಿಲಿಪ್ಪನು ಇತುರೆಯ ಮತ್ತು ತ್ರಕೋನಿತಿ ಪ್ರಾಂತ್ಯಗಳಿಗೂ ಲೂಸನ್ಯನು ಅಬಿಲೇನೆ ಪ್ರಾಂತ್ಯಕ್ಕೂ ಅಧಿಪತಿಯಾಗಿದ್ದರು.


ಅದಕ್ಕೆ ಶಿಷ್ಯರು, “ಕೆಲವರು ನಿನ್ನನ್ನು, ‘ಸ್ನಾನಿಕ ಯೋಹಾನ’ ಎಂದು ಹೇಳುತ್ತಾರೆ. ಇನ್ನು ಕೆಲವರು ‘ಎಲೀಯ’ ಎಂದು ಹೇಳುತ್ತಾರೆ. ಇನ್ನು ಕೆಲವು ಜನರು ನಿನ್ನನ್ನು, ‘ಪ್ರವಾದಿಗಳಲ್ಲಿ ಒಬ್ಬನು’ ಎನ್ನುತ್ತಾರೆ” ಎಂದು ಉತ್ತರಿಸಿದರು.


ಅವನು ಅಲ್ಲಿಂದ ಹೋಗಿ ಯೇಸುವೇ ತನ್ನನ್ನು ಗುಣಪಡಿಸಿದನೆಂದು ಜನರೆಲ್ಲರಿಗೆ ತಿಳಿಸಿದನು. ಈ ಸುದ್ದಿಯು ಎಲ್ಲೆಡೆ ಹರಡಿದ್ದರಿಂದ ಆತನು ಬಹಿರಂಗವಾಗಿ ಊರೊಳಗೆ ಹೋಗಲು ಸಾಧ್ಯವಾಗದೆ ಏಕಾಂತವಾದ ಸ್ಥಳಗಳಲ್ಲಿ ವಾಸಿಸಬೇಕಾಯಿತು. ಆದರೂ ಎಲ್ಲಾ ಕಡೆಗಳಿಂದ ಜನರು ಯೇಸುವಿದ್ದಲ್ಲಿಗೆ ಬರುತ್ತಿದ್ದರು.


ಯೇಸುವಿನ ಸುದ್ದಿಯು ಗಲಿಲಾಯ ಪ್ರದೇಶದ ಎಲ್ಲೆಡೆಯಲ್ಲಿಯೂ ಹರಡಿತು.


ಆದರೆ ಆ ಕುರುಡರು ಅಲ್ಲಿಂದ ಹೊರಟುಹೋಗಿ ಯೇಸುವಿನ ಸುದ್ದಿಯನ್ನು ಆ ಪ್ರದೇಶದ ಸುತ್ತಮುತ್ತಲೆಲ್ಲಾ ಹಬ್ಬಿಸಿದರು.


ಜೆರುಸಲೇಮಿನಲ್ಲಿ ವಿಜ್ಞಾನಿಗಳು ರೂಪಿಸಿದ ಯಂತ್ರಗಳನ್ನು ಉಜ್ಜೀಯನು ತಯಾರಿಸಿದನು. ಇವುಗಳನ್ನು ಪೌಳಿಗೋಡೆಯ ಮೇಲೆ ಇರಿಸಿದನು. ಇವು ಬಾಣಗಳನ್ನೂ ದೊಡ್ಡ ಕಲ್ಲುಗಳನ್ನೂ ವೈರಿಗಳ ಮೇಲೆ ಹಾರಿಸಬಲ್ಲವಾಗಿದ್ದವು. ಉಜ್ಜೀಯನು ತುಂಬಾ ಪ್ರಸಿದ್ಧಿ ಹೊಂದಿದ್ದನು. ಬಹುದೂರದ ತನಕ ಅವನ ಹೆಸರು ಹಬ್ಬಿತು. ಅವನು ದೇವರ ವಿಶೇಷ ಸಹಾಯ ಪಡೆದುಕೊಂಡು ಬಲಿಷ್ಠನಾದನು.


ಅಮ್ಮೋನಿಯರೂ ಉಜ್ಜೀಯನಿಗೆ ಕಪ್ಪಕಾಣಿಕೆಯನ್ನು ತಂದುಕೊಟ್ಟರು. ಉಜ್ಜೀಯನು ಬಲಿಷ್ಠನಾಗಿದ್ದುದರಿಂದ ಅವನ ಹೆಸರು ಎಲ್ಲಾ ಕಡೆಗಳಲ್ಲಿ ಈಜಿಪ್ಟಿನ ಮೇರೆಯ ತನಕ ಪ್ರಸಿದ್ಧಿ ಹೊಂದಿತು.


ಅದಕ್ಕೆ ಶಿಷ್ಯರು, “ಕೆಲವು ಜನರು ನಿನ್ನನ್ನು ‘ಸ್ನಾನಿಕನಾದ ಯೋಹಾನ’ ಎನ್ನುತ್ತಾರೆ. ಇನ್ನು ಕೆಲವರು, ‘ಎಲೀಯ’ ಎನ್ನುತ್ತಾರೆ. ಮತ್ತೆ ಕೆಲವರು, ‘ಪೂರ್ವಕಾಲದ ಪ್ರವಾದಿಗಳಲ್ಲಿ ಒಬ್ಬನು ಜೀವಂತವಾಗಿ ಎದ್ದುಬಂದಿದ್ದಾನೆ’ ಎನ್ನುತ್ತಾರೆ” ಎಂದು ಉತ್ತರಿಸಿದರು.


ಇದಲ್ಲದೆ, ದೇವರು ಅದ್ಭುತಕಾರ್ಯಗಳಿಂದ, ಸೂಚಕಕಾರ್ಯಗಳಿಂದ, ನಾನಾ ವಿಧವಾದ ಮಹತ್ಕಾರ್ಯಗಳಿಂದ ಮತ್ತು ಪವಿತ್ರಾತ್ಮನ ವರಗಳನ್ನು ತನ್ನ ಇಷ್ಟಾನುಸಾರವಾಗಿ ದಯಪಾಲಿಸುವುದರ ಮೂಲಕ ಅದನ್ನು ಸ್ಥಿರಪಡಿಸಿದನು.


ಯೇಸುವಿನ ಕುರಿತಾದ ಈ ಸುದ್ದಿಯು ಜುದೇಯದಲ್ಲಿಯೂ ಅದರ ಸುತ್ತಮುತ್ತಲಿನ ಎಲ್ಲಾ ಸ್ಥಳಗಳಲ್ಲಿಯೂ ಹಬ್ಬಿಕೊಂಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು