ಮಾರ್ಕ 6:17 - ಪರಿಶುದ್ದ ಬೈಬಲ್17 ಯೋಹಾನನನ್ನು ಬಂಧಿಸಲು ತನ್ನ ಸೈನಿಕರಿಗೆ ಹೆರೋದನೇ ಆಜ್ಞಾಪಿಸಿದ್ದನು. ಅಂತೆಯೇ ಅವರು ಯೋಹಾನನನ್ನು ಸೆರೆಯಲ್ಲಿ ಹಾಕಿದ್ದರು. ಹೆರೋದನು ತನ್ನ ಪತ್ನಿಯಾಗಿ ಇಟ್ಟುಕೊಂಡಿದ್ದ ಹೆರೋದ್ಯಳ ನಿಮಿತ್ತ ಹೀಗೆ ಮಾಡಿದ್ದನು. ಹೆರೋದ್ಯಳು ಹೆರೋದನ ಸಹೋದರನಾದ ಫಿಲಿಪ್ಪನ ಪತ್ನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಹೆರೋದನು ತಾನೇ ಕಳುಹಿಸಿ ಯೋಹಾನನನ್ನು ಹಿಡಿದು ಬಂಧಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು. ಹೆರೋದ್ಯಳ ನಿಮಿತ್ತ ಹಾಗೆ ಮಾಡಿದ್ದನು; ಏಕೆಂದರೆ ಅವನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿ ಹೆರೋದ್ಯಳನ್ನು ಮದುವೆಯಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಹೆರೋದನು ತಾನು ಇಟ್ಟುಕೊಂಡಿದ್ದ ಹೆರೋದಿಯಳ ನಿಮಿತ್ತ ಯೊವಾನ್ನನನ್ನು ಸೆರೆಹಿಡಿಸಿ ಬಂಧನದಲ್ಲಿರಿಸಿದ್ದನು. ಹೆರೋದಿಯಳು ಹೆರೋದನ ಸಹೋದರ ಫಿಲಿಪ್ಪನ ಧರ್ಮಪತ್ನಿ. ಆದರೂ ಹೆರೋದನು ಆಕೆಯನ್ನು ಹೆಂಡತಿಯಾಗಿ ಇಟ್ಟುಕೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಹೆರೋದನು ತಾನು ಇಟ್ಟುಕೊಂಡಿದ್ದ ಹೆರೋದ್ಯಳ ನಿವಿುತ್ತ ಯೋಹಾನನನ್ನು ಹಿಡಿತರಿಸಿ ಸೆರೆಯಲ್ಲಿ ಕಟ್ಟಿ ಹಾಕಿಸಿದ್ದನು. ಆ ಹೆರೋದ್ಯಳು ಹೆರೋದನ ಅಣ್ಣನಾದ ಫಿಲಿಪ್ಪನ ಹೆಂಡತಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಏಕೆಂದರೆ, ಯೋಹಾನನನ್ನು ಬಂಧಿಸಿ ಸೆರೆಮನೆಗೆ ಹಾಕಬೇಕೆಂದು ಹೆರೋದನು ತಾನೇ ಕಳುಹಿಸಿದ್ದನು. ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿ ಹೆರೋದ್ಯಳನ್ನು ಮದುವೆ ಮಾಡಿಕೊಂಡದ್ದರಿಂದ ಅವನು ಹೀಗೆ ಮಾಡಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಹೆರೊದಾನ್ ಅಪ್ನಿಚ್ ಜುವಾಂವಾಕ್ ಧರುನ್ ಬಂದಿಖಾನ್ಯಾತ್ ಘಾಲುಕ್ ಸಾಂಗಟಲ್ಲ್ಯಾನ್. ಹೆರೊದಿಯಾಸಾಕ್ ಲಾಗುನ್ ತೆನಿ ಅಶೆ ಕರ್‍ತಲೆ ಪಡ್ಲೆ. ತಿ ಅಪ್ಲ್ಯಾ ಭಾವಾಚಿ-ಫಿಲಿಪ್ಪಾಚಿ ಬಾಯ್ಕೊ! ಜಾಲ್ಯಾರ್‍ಬಿ ತೊ ತಿಚೆಕ್ಡೆ ಲಗಿನ್ ಹೊಲ್ಲೊ, ಅಧ್ಯಾಯವನ್ನು ನೋಡಿ |