Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:34 - ಪರಿಶುದ್ದ ಬೈಬಲ್‌

34 ಯೇಸು ಅಲ್ಲಿಗೆ ಬಂದಾಗ, ಅನೇಕ ಜನರು ತನಗಾಗಿ ಕಾಯುತ್ತಿರುವುದನ್ನು ನೋಡಿದನು. ಅವರು ಕುರುಬನಿಲ್ಲದ ಕುರಿಗಳಂತೆ ಇರುವುದನ್ನು ಕಂಡು ದುಃಖಗೊಂಡು ಅವರಿಗೆ ಅನೇಕ ಸಂಗತಿಗಳನ್ನು ಉಪದೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ನೋಡಿ ಇವರು ಕುರುಬನಿಲ್ಲದ ಕುರಿಗಳ ಹಾಗಿದ್ದಾರಲ್ಲಾ ಎಂದು ಕನಿಕರಪಟ್ಟು ಅವರಿಗೆ ಅನೇಕ ವಿಷಯಗಳನ್ನು ಕುರಿತು ಬೋಧಿಸಲಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಯೇಸು ದೋಣಿಯಿಂದ ಇಳಿದಾಗ ಅಲ್ಲಿ ದೊಡ್ಡ ಜನಸಮೂಹವೇ ಸೇರಿತ್ತು. ಆ ಜನರು ಕುರುಬನಿಲ್ಲದ ಕುರಿಗಳಂತಿರುವುದನ್ನು ಕಂಡು ಯೇಸುವಿನ ಮನ ಕರಗಿತು; ಅನೇಕ ವಿಷಯಗಳನ್ನು ಕುರಿತು ಅವರಿಗೆ ಉಪದೇಶವಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಆತನು ಹೊರಗೆ ಬಂದು ಬಹುಜನರ ಗುಂಪನ್ನು ಕಂಡು ಇವರು ಕುರುಬನಿಲ್ಲದ ಕುರಿಗಳ ಹಾಗಿದ್ದಾರಲ್ಲಾ ಎಂದು ಕನಿಕರಪಟ್ಟು ಅವರಿಗೆ ಬಹಳ ಉಪದೇಶ ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ಕಂಡು ಅವರ ಮೇಲೆ ಕನಿಕರಪಟ್ಟರು. ಏಕೆಂದರೆ ಅವರು ಕುರುಬನಿಲ್ಲದ ಕುರಿಗಳಂತಿದ್ದರು. ಆಗ ಯೇಸು ಅವರಿಗೆ ಅನೇಕ ವಿಷಯಗಳನ್ನು ಕುರಿತು ಬೋಧಿಸಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಢೊನಿತ್ನಾ ಉತ್ರುನ್ ಯೆತಾನಾ ಜೆಜುನ್ ಹ್ಯೊ ಮೊಟೊ ಲೊಕಾಂಚೊ ತಾಂಡೊ ಬಗಟ್ಲ್ಯಾನ್. ತೆಂಚೊ ತೆಕಾ ಪಾಪ್ ದಿಸ್ಲೊ,ಕಶ್ಯಾಕ್ ಮಟ್ಲ್ಯಾರ್ ತೆನಿ ರಾಕ್ವಾಲಿನಸಲ್ಲ್ಯಾ ಬಕ್ರ್ಯಾಂಚ್ಯಾ ಬಾಸೆನ್ ಹೊತ್ತೆ,ತಸೆ ಮನುನ್ ತೊ ತೆಂಕಾ ಸುಮಾರ್ ವಿಶಯ್ ಶಿಕ್ವುಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:34
19 ತಿಳಿವುಗಳ ಹೋಲಿಕೆ  

ನೋವಿನಿಂದ ನರಳುತ್ತಿದ್ದ ಮತ್ತು ಅಸಹಾಯಕರಾಗಿದ್ದ ಅನೇಕ ಜನರನ್ನು ಯೇಸು ನೋಡಿ ದುಃಖಪಟ್ಟನು. ಕುರುಬನಿಲ್ಲದ ಕುರಿಗಳಂತೆ ಅವರಿದ್ದರು.


ಅವನು ಅವರನ್ನು ಯುದ್ಧದಲ್ಲಿ ಮುನ್ನಡೆಸುವವನೂ ಸೈನ್ಯದ ಯೋಜನೆಗಳನ್ನು ರೂಪಿಸುವವನೂ ಆಗಿರಲಿ. ಆಗ ಯೆಹೋವನ ಸಮೂಹವು ಕುರುಬನಿಲ್ಲದ ಕುರಿಯಂತಾಗುವುದಿಲ್ಲ.”


ಆದರೆ ಯೇಸು ಅಲ್ಲಿಗೆ ಹೋದದ್ದು ಜನರಿಗೆ ತಿಳಿಯಿತು. ಅವರು ಆತನನ್ನು ಹಿಂಬಾಲಿಸಿದರು. ಯೇಸು ಅವರನ್ನು ಸ್ವಾಗತಿಸಿ ದೇವರ ರಾಜ್ಯದ ಬಗ್ಗೆ ಅವರಿಗೆ ತಿಳಿಸಿದನು; ಕಾಯಿಲೆಯ ಜನರನ್ನು ವಾಸಿಮಾಡಿದನು.


ಜನರು ಭವಿಷ್ಯವನ್ನು ತಿಳಿಯುವುದಕ್ಕೆ ತಮ್ಮ ಸಣ್ಣ ಬೊಂಬೆಗಳನ್ನೋ ಮಂತ್ರಜಾಲವನ್ನೋ ಉಪಯೋಗಿಸುವರು. ಆದರೆ ಅವೆಲ್ಲಾ ನಿಷ್ಪ್ರಯೋಜಕ. ಆ ಜನರು ದರ್ಶನವನ್ನು ನೋಡುವರು ಮತ್ತು ಕನಸುಗಳ ಬಗ್ಗೆ ಹೇಳುವರು. ಆದರೆ ಅವುಗಳೆಲ್ಲಾ ನಿಷ್ಪ್ರಯೋಜಕ ಸುಳ್ಳುಗಳಾಗಿವೆ. ಆದ್ದರಿಂದ ಜನರು ಸಹಾಯಕ್ಕಾಗಿ ಕೂಗುತ್ತಾ ಅತ್ತಿಂದಿತ್ತ ತಿರುಗಾಡುವ ಕುರಿಗಳಂತಿದ್ದಾರೆ. ಅವುಗಳನ್ನು ನಡಿಸಲು ಕುರುಬರೇ ಇಲ್ಲ.


“ನನ್ನ ಜನರು ತಪ್ಪಿಸಿಕೊಂಡ ಕುರಿಗಳಂತಿದ್ದಾರೆ. ಅವರ ಕುರುಬರು ಅವರನ್ನು ತಪ್ಪು ದಾರಿಗೆ ಎಳೆದಿದ್ದಾರೆ. ಅವರ ನಾಯಕರುಗಳು ಅವರನ್ನು ಬೆಟ್ಟಗಳಲ್ಲಿ ಅಲೆಯುವಂತೆ ಮಾಡಿದ್ದಾರೆ. ಅವರ ವಿಶ್ರಾಂತಿಸ್ಥಾನವನ್ನು ಅವರು ಮರೆತುಬಿಟ್ಟಿದ್ದಾರೆ.


“ಇಸ್ರೇಲಿನ ಜನರೆಲ್ಲರೂ ಬೆಟ್ಟಪ್ರದೇಶಗಳಲ್ಲಿ ಚದರಿರುವದನ್ನು ಕಂಡೆನು. ಅವರು ಕುರುಬನಿಲ್ಲದ ಕುರಿಗಳಂತಿದ್ದರು. ಕರ್ತನು ಹೇಳಿದ್ದೇನೆಂದರೆ, ‘ಅವರಿಗೆ ನಾಯಕರಿಲ್ಲ, ಆದ್ದರಿಂದ ಸುರಕ್ಷಿತವಾಗಿ ಮನೆಗೆ ಹಿಂದಿರುಗಲಿ’” ಎಂದು ಹೇಳಿದನು.


ಮೀಕಾಯೆಹು, “ಮುಂದೆ ಸಂಭವಿಸುವುದು ನನಗೆ ಕಾಣುತ್ತಿದೆ. ಇಸ್ರೇಲಿನ ಸೈನ್ಯವು ಬೆಟ್ಟಗಳ ಮೇಲೆ ಚೆಲ್ಲಾಪಿಲ್ಲಿಯಾಗಿ ಕುರುಬನಿಲ್ಲದ ಕುರಿಗಳಂತಾಗಿದೆ. ಯೆಹೋವನು ಹೇಳುವುದು ಇದನ್ನೇ, ‘ಈ ಜನರಿಗೆ ನಾಯಕನಿಲ್ಲ. ಅವರು ಯುದ್ಧಮಾಡದೆ, ಮನೆಗೆ ಹೋಗಬೇಕು’” ಎಂದು ಹೇಳಿದನು.


ನಮ್ಮ ಪ್ರಧಾನ ಯಾಜಕನಾಗಿರುವ ಯೇಸು ನಮ್ಮ ದೌರ್ಬಲ್ಯವನ್ನು ಅರ್ಥಮಾಡಿಕೊಳ್ಳಲು ಸಮರ್ಥನಾಗಿದ್ದಾನೆ. ಆತನು ಈ ಲೋಕದಲ್ಲಿ ಜೀವಿಸಿದ್ದಾಗ, ಸರ್ವವಿಷಯಗಳಲ್ಲಿ ನಮ್ಮಂತೆಯೇ ಶೋಧನೆಗೆ ಗುರಿಯಾದರೂ ಪಾಪಮಾಡಲಿಲ್ಲ.


ಯೇಸು ಅಲ್ಲಿಗೆ ಬಂದಾಗ, ಜನರು ಗುಂಪುಗುಂಪಾಗಿ ನೆರೆದಿರುವುದನ್ನು ಕಂಡು ಅವರಿಗಾಗಿ ದುಃಖಪಟ್ಟು ಕಾಯಿಲೆಯವರನ್ನು ಗುಣಪಡಿಸಿದನು.


ಈ ಕಾರಣದಿಂದಲೇ ಆತನು ಎಲ್ಲಾ ವಿಧದಲ್ಲಿಯೂ ತನ್ನ ಸಹೋದರ ಸಹೋದರಿಯರಿಗೆ ಸಮಾನನಾಗಬೇಕಾಯಿತು. ದೇವರ ಸೇವೆಯಲ್ಲಿ ಆತನು ಜನರಿಗೆ ಕರುಣೆಯುಳ್ಳವನೂ ನಂಬಿಗಸ್ತನೂ ಆದ ಪ್ರಧಾನ ಯಾಜಕನಾದನು. ಹೀಗೆ ಆತನು ಜನರ ಪಾಪಗಳಿಗೆ ಕ್ಷಮೆಯನ್ನು ತರಲು ಸಾಧ್ಯವಾಯಿತು.


ಯೇಸು ತನ್ನ ಶಿಷ್ಯರನ್ನು ಕರೆದು, “ನಾನು ಈ ಜನರಿಗಾಗಿ ದುಃಖಪಡುತ್ತೇನೆ. ಇವರು ಮೂರು ದಿನಗಳಿಂದ ನನ್ನ ಜೊತೆಯಲ್ಲಿದ್ದಾರೆ. ಈಗ ಇವರಿಗೆ ಊಟಕ್ಕೆ ಏನೂ ಇಲ್ಲ. ಇವರನ್ನು ಹಸಿವಿನಿಂದ ಕಳುಹಿಸಿಬಿಡುವುದಕ್ಕೆ ನನಗೆ ಮನಸ್ಸಿಲ್ಲ. ಇವರು ಮನೆಗೆ ಹೋಗುತ್ತಿರುವಾಗ ಬಳಲಿಹೋಗಬಹುದು” ಎಂದು ಹೇಳಿದನು.


ಆಗ ಗಾಯಗೊಂಡ ಜಿಂಕೆಯಂತೆ ಬಾಬಿಲೋನು ಓಡಿಹೋಗುವದು. ಅವರು ಕುರುಬನಿಲ್ಲದ ಕುರಿಗಳಂತೆ ಚದರಿ ಹೋಗುವರು. ಪ್ರತಿಯೊಬ್ಬನು ಹಿಂದಿರುಗಿ ತನ್ನ ದೇಶಕ್ಕೂ ತನ್ನ ಜನರ ಬಳಿಗೂ ಓಡುವನು.


“‘ಈಗ ಆ ಮಂದೆಯು ಚದರಿಹೋಗಿದೆ. ಯಾಕೆಂದರೆ ಅವುಗಳಿಗೆ ಕುರುಬರಿಲ್ಲ. ಅವುಗಳು ಕಾಡುಪ್ರಾಣಿಗಳಿಗೆ ಆಹಾರವಾದವು. ಆದ್ದರಿಂದ ಅವು ಚದರಿಹೋದವು.


ಆದರೆ ಅವರು ಹೋಗುತ್ತಿರುವುದನ್ನು ಅನೇಕ ಜನರು ನೋಡಿದರು. ಆತನು ಯೇಸುವೆಂಬುದು ಅವರಿಗೆ ತಿಳಿದಿತ್ತು. ಆದ್ದರಿಂದ ಆತನು ಹೋಗುತ್ತಿರುವ ಸ್ಥಳಕ್ಕೆ ಎಲ್ಲಾ ಊರುಗಳಿಂದ ಜನರು ಓಡಿಹೋಗಿ, ಆತನು ಅಲ್ಲಿಗೆ ಬರುವುದಕ್ಕೆ ಮುಂಚೆಯೇ ಅಲ್ಲಿದ್ದರು.


ಅಂದು ಬಹಳ ಹೊತ್ತಾಯಿತು. ಯೇಸುವಿನ ಶಿಷ್ಯರು ಆತನ ಬಳಿಗೆ ಬಂದು, “ಈ ಸ್ಥಳದಲ್ಲಿ ಯಾರೂ ವಾಸಿಸುತ್ತಿಲ್ಲ. ಈಗಾಗಲೇ ಬಹಳ ಹೊತ್ತಾಗಿದೆ.


ಇನ್ನೊಂದು ಸಮಯದಲ್ಲಿ ಯೇಸುವಿನ ಜೊತೆಯಲ್ಲಿ ಅನೇಕ ಜನರಿದ್ದರು. ಆ ಜನರ ಬಳಿ ಊಟಕ್ಕೆ ಏನೂ ಇರಲಿಲ್ಲ. ಆದ್ದರಿಂದ ಯೇಸು ತನ್ನ ಶಿಷ್ಯರನ್ನು ಕರೆದು,


“ನಾನು ಈ ಜನರಿಗಾಗಿ ಕನಿಕರಪಡುತ್ತೇನೆ. ಇವರು ಮೂರು ದಿನಗಳಿಂದ ನನ್ನ ಜೊತೆಯಲ್ಲಿದ್ದಾರೆ. ಇವರ ಬಳಿ ಊಟಕ್ಕೆ ಏನೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು