ಮಾರ್ಕ 6:37 - ಪರಿಶುದ್ದ ಬೈಬಲ್37 ಆದರೆ ಯೇಸು, “ನೀವೇ ಅವರಿಗೆ ಊಟ ಕೊಡಿ” ಎಂದು ಉತ್ತರಕೊಟ್ಟನು. ಶಿಷ್ಯರು ಯೇಸುವಿಗೆ, “ಈ ಜನರಿಗೆಲ್ಲ ಬೇಕಾಗುವಷ್ಟು ರೊಟ್ಟಿಯನ್ನು ನಾವು ಎಲ್ಲಿಂದ ತರೋಣ! ಅವರಿಗೆ ಬೇಕಾಗುವಷ್ಟು ರೊಟ್ಟಿಯನ್ನು ಕೊಂಡುಕೊಂಡು ಬರಬೇಕಾದರೆ ನಮಗೆ ಇನ್ನೂರು ದಿನಾರಿ ನಾಣ್ಯ ಗಳಾದರೂ ಬೇಕು!” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಅದಕ್ಕೆ ಯೇಸು, “ನೀವೇ ಅವರಿಗೆ ಊಟಕ್ಕೇನಾದರೂ ಕೊಡಿರಿ” ಎಂದು ಉತ್ತರಕೊಟ್ಟನು. ಅದಕ್ಕವರು, “ನಾವು ಹೋಗಿ ಇನ್ನೂರು ದಿನಾರಿ ನಾಣ್ಯಗಳ ಬೆಲೆಯಷ್ಟು ರೊಟ್ಟಿಯನ್ನು ಕೊಂಡುಕೊಂಡು ಅವರಿಗೆ ಊಟ ಕೊಡಬೇಕೋ?” ಎಂದು ಹೇಳಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಆಗ ಯೇಸು, “ನೀವೇ ಅವರಿಗೆ ಊಟಕ್ಕೇನಾದರೂ ಕೊಡಿ,” ಎಂದರು. ಅದಕ್ಕೆ ಶಿಷ್ಯರು, “ನಾವು ಹೋಗಿ ಇನ್ನೂರು ದೆನಾರಿ ನಾಣ್ಯಗಳ ಬೆಲೆಯಷ್ಟು ರೊಟ್ಟಿಯನ್ನು ಕೊಂಡುತಂದು ಅವರಿಗೆ ಊಟಕ್ಕೆ ಬಡಿಸೋಣವೇನು?” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ನೀವೇ ಅವರಿಗೆ ಊಟಕ್ಕೆ ಕೊಡಿರಿ ಎಂದು ಉತ್ತರಕೊಟ್ಟನು. ಅದಕ್ಕವರು - ನಾವು ಹೋಗಿ ಇನ್ನೂರು ಹಣಕ್ಕೆ ರೊಟ್ಟಿಯನ್ನು ಕೊಂಡುಕೊಂಡು ಅವರಿಗೆ ಊಟಕ್ಕೆ ಕೊಡಬೇಕೋ? ಎಂದು ಕೇಳಲು ಆತನು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಆದರೆ ಯೇಸು, “ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ,” ಎಂದರು. ಶಿಷ್ಯರು, “ನಾವು ಹೋಗಿ ಅವರಿಗೆ ಊಟಕ್ಕಾಗಿ ಆರು ತಿಂಗಳ ಸಂಬಳದಷ್ಟು ಖರ್ಚುಮಾಡಿ, ಆಹಾರವನ್ನು ಕೊಂಡುಕೊಂಡು ಬರಬೇಕೆ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್37 ತನ್ನಾ ಜೆಜುನ್ “ತುಮಿಚ್ ತೆಂಕಾ ಜೆವಾನ್ ದಿವಾ ಮಟ್ಲ್ಯಾನ್. ತನ್ನಾ ತೆನಿ” ದೊನ್ಸೆ ಚಾಂದಿಚ್ಯಾ ಪೈಸ್ಯಾನಿ ತೆಂಕಾ ಖವ್ಕ್ ಬಾಕ್ರಿಯಾ ಹಾನುನ್ ದಿವ್ಚ್ಯೆ ಕಾಯ್? ಮಟ್ಲ್ಯಾನಿ ಅಧ್ಯಾಯವನ್ನು ನೋಡಿ |