Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:38 - ಪರಿಶುದ್ದ ಬೈಬಲ್‌

38 ಯೇಸು ಶಿಷ್ಯರಿಗೆ, “ಈಗ ನಿಮ್ಮ ಬಳಿಯಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿ” ಎಂದು ಹೇಳಿದನು. ಶಿಷ್ಯರು ಹೋಗಿ ರೊಟ್ಟಿಗಳನ್ನು ಎಣಿಸಿ ಬಂದು, “ನಮ್ಮ ಬಳಿ ಐದು ರೊಟ್ಟಿಗಳಿವೆ ಮತ್ತು ಎರಡು ಮೀನುಗಳಿವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಆತನು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿ” ಅಂದನು. ಅವರು ವಿಚಾರಿಸಿಕೊಂಡು ಬಂದು, “ನಮ್ಮಲ್ಲಿ ಐದು ರೊಟ್ಟಿ ಮತ್ತು ಎರಡು ಮೀನುಗಳಿವೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಯೇಸು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿಕೊಂಡು ಬನ್ನಿ,” ಎಂದರು. ಅವರು ವಿಚಾರಿಸಿಕೊಂಡು ಬಂದು, “ನಮ್ಮಲ್ಲಿ ಐದು ರೊಟ್ಟಿ ಮತ್ತು ಎರಡು ಮೀನುಗಳಿವೆ,” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿಕೊಂಡು ಬನ್ನಿ ಅಂದನು. ಅವರು ತಿಳುಕೊಂಡು ಬಂದು - ಐದು ರೊಟ್ಟಿ ಎರಡು ಮೀನು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಯೇಸು ಅವರಿಗೆ, “ನಿಮ್ಮ ಬಳಿಯಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿರಿ,” ಎಂದು ಕೇಳಿದರು. ಅವರು ವಿಚಾರಿಸಿ, “ಐದು ರೊಟ್ಟಿ ಮತ್ತು ಎರಡು ಮೀನುಗಳಿವೆ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ತನ್ನಾ ಜೆಜುನ್ “ತುಮ್ಚ್ಯಾಕ್ಡೆ ಕವ್ಡಿ ಭಾಕ್ರಿಯಾ ಹಾತ್? ಮನುನ್ ಜಾವ್ನ್ ಬಗಾ” ಮಟ್ಲ್ಯಾನ್. ತೆನಿ ಬಗುನ್ ಯೆವ್ನ್“ಅಮ್ಚ್ಯಾಕ್ಡೆ ಪಾಂಚ್ ಭಾಕ್ರಿಯಾ ಅನಿ ದೊನ್ ಮಾಸೊಳ್ಯಾ ಹಾತ್” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:38
7 ತಿಳಿವುಗಳ ಹೋಲಿಕೆ  

ಯೇಸು, “ನಿಮ್ಮ ಬಳಿ ಎಷ್ಟು ರೊಟ್ಟಿಗಳಿವೆ?” ಎಂದು ಅವರನ್ನು ಕೇಳಿದನು. ಅದಕ್ಕೆ ಶಿಷ್ಯರು, “ನಮ್ಮ ಬಳಿ ಏಳು ರೊಟ್ಟಿಗಳಿವೆ” ಎಂದು ಉತ್ತರಿಸಿದರು.


ಆತನು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಕೇಳಿದನು. ಶಿಷ್ಯರು, “ನಮ್ಮಲ್ಲಿ ಏಳು ರೊಟ್ಟಿಗಳಿವೆ ಮತ್ತು ಕೆಲವು ಸಣ್ಣ ಮೀನುಗಳಿವೆ” ಎಂದರು.


ಅಂದ್ರೆಯನು, “ಇಲ್ಲಿರುವ ಒಬ್ಬ ಹುಡುಗನ ಬಳಿ ಜವೆಗೋಧಿಯ ಐದು ರೊಟ್ಟಿಗಳಿವೆ ಮತ್ತು ಎರಡು ಚಿಕ್ಕ ಮೀನುಗಳಿವೆ. ಆದರೆ ಅವು ಈ ಜನಸಮೂಹಕ್ಕೆ ಸಾಕಾಗುವುದಿಲ್ಲ” ಎಂದು ಹೇಳಿದನು.


ಆದರೆ ಯೇಸು ಅಪೊಸ್ತಲರಿಗೆ, “ನೀವೇ ಅವರಿಗೆ ಸ್ವಲ್ಪ ಆಹಾರ ಕೊಡಿರಿ” ಎಂದು ಹೇಳಿದನು. ಅದಕ್ಕೆ ಅಪೊಸ್ತಲರು, “ನಮ್ಮಲ್ಲಿ ಕೇವಲ ಐದು ರೊಟ್ಟಿ ಮತ್ತು ಎರಡು ಮೀನುಗಳಿವೆ. ನಾವೇ ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡುಕೊಳ್ಳಬೇಕೇ?” ಎಂದು ಕೇಳಿದರು.


ಆದರೆ ಯೇಸು, “ನೀವೇ ಅವರಿಗೆ ಊಟ ಕೊಡಿ” ಎಂದು ಉತ್ತರಕೊಟ್ಟನು. ಶಿಷ್ಯರು ಯೇಸುವಿಗೆ, “ಈ ಜನರಿಗೆಲ್ಲ ಬೇಕಾಗುವಷ್ಟು ರೊಟ್ಟಿಯನ್ನು ನಾವು ಎಲ್ಲಿಂದ ತರೋಣ! ಅವರಿಗೆ ಬೇಕಾಗುವಷ್ಟು ರೊಟ್ಟಿಯನ್ನು ಕೊಂಡುಕೊಂಡು ಬರಬೇಕಾದರೆ ನಮಗೆ ಇನ್ನೂರು ದಿನಾರಿ ನಾಣ್ಯ ಗಳಾದರೂ ಬೇಕು!” ಎಂದು ಹೇಳಿದರು.


ಆಗ ಯೇಸು ಶಿಷ್ಯರಿಗೆ, “ಹಸಿರು ಹುಲ್ಲಿನ ಮೇಲೆ ಸಾಲುಸಾಲಾಗಿ ಕುಳಿತುಕೊಳ್ಳಲು ಜನರಿಗೆ ತಿಳಿಸಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು