Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 7:25 - ಪರಿಶುದ್ದ ಬೈಬಲ್‌

25 ಯೇಸು ಅಲ್ಲಿರುವನೆಂಬುದು ಒಬ್ಬ ಸ್ತ್ರೀಗೆ ತಿಳಿಯಿತು. ಅವಳ ಕಿರಿಯ ಮಗಳಿಗೆ ದೆವ್ವ ಹಿಡಿದಿತ್ತು. ಆದ್ದರಿಂದ ಆ ಸ್ತ್ರೀಯು ಯೇಸುವಿನ ಬಳಿಗೆ ಬಂದು, ಆತನ ಪಾದಗಳ ಮುಂದೆ ಅಡ್ಡಬಿದ್ದು ನಮಸ್ಕರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಕೂಡಲೆ ಒಬ್ಬ ಹೆಂಗಸು ಆತನ ಸುದ್ದಿಯನ್ನು ಕೇಳಿ ಬಂದು ಆತನ ಪಾದಕ್ಕೆ ಬಿದ್ದಳು. ಆಕೆಯ ಮಗಳಿಗೆ ದೆವ್ವ ಹಿಡಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಹೊರನಾಡಾದ ಸಿರಿಯ ದೇಶದ ಫೆನಿಷ್ಯ ಪ್ರಾಂತ್ಯಕ್ಕೆ ಸೇರಿದ ಗ್ರೀಕ್ ಮಹಿಳೆ ಒಬ್ಬಳು ಅವರ ವಿಷಯವನ್ನು ಕೇಳಿ, ಒಡನೆ ಅಲ್ಲಿಗೆ ಬಂದು ಅವರ ಪಾದಕ್ಕೆರಗಿದಳು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಕೂಡಲೆ ಒಬ್ಬ ಹೆಂಗಸು ಆತನ ಸುದ್ದಿಯನ್ನು ಕೇಳಿ ಬಂದು ಆತನ ಪಾದಕ್ಕೆ ಬಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಹೀಗೆ ಯೇಸುವಿನ ವಿಷಯ ತಿಳಿದ ಕೂಡಲೇ, ಅಶುದ್ಧಾತ್ಮಪೀಡಿತಳಾಗಿದ್ದ ಒಬ್ಬ ಚಿಕ್ಕ ಹುಡುಗಿಯ ತಾಯಿ ಬಂದು ಅವರ ಪಾದಕ್ಕೆ ಬಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಎಕ್ ಬಾಯ್ಕೊಮನ್ಸಿಚ್ಯಾ ಲೆಕಿಕ್ ಗಿರೊಲಾಗಲ್ಲೊ, ಜೆಜು ತ್ಯಾ ಘರಾತ್ ಅಸಲ್ಲೆ ತಿಕಾ ಕಳ್ಳೆ, ತಸೆ ಮನುನ್ ತಿ ತನ್ನಾಚ್ ಜೆಜುಕ್ಡೆ ಯೆಲಿ ಅನಿ ತೆಚ್ಯಾ ಪಾಂಯಾತ್ ಪಡ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 7:25
10 ತಿಳಿವುಗಳ ಹೋಲಿಕೆ  

ಆ ಸ್ಥಳದಿಂದ ಕಾನಾನ್ಯಳಾದ ಒಬ್ಬ ಸ್ತ್ರೀ ಯೇಸುವಿನ ಬಳಿಗೆ ಬಂದು, “ಪ್ರಭುವೇ, ದಾವೀದನ ಮಗನೇ, ದಯವಿಟ್ಟು ನನಗೆ ಕರುಣೆ ತೋರು! ನನ್ನ ಮಗಳಲ್ಲಿ ದೆವ್ವ ಸೇರಿಕೊಂಡಿದೆ ಮತ್ತು ಆಕೆ ಬಹಳ ಸಂಕಟಪಡುತ್ತಿದ್ದಾಳೆ” ಎಂದು ಗಟ್ಟಿಯಾಗಿ ಕೂಗಿಕೊಂಡಳು.


ಅವನು ಯೇಸುವಿನ ಪಾದಗಳಿಗೆ ಅಡ್ಡಬಿದ್ದು ಆತನಿಗೆ ವಂದನೆ ಸಲ್ಲಿಸಿದನು. (ಅವನು ಸಮಾರ್ಯದವನು, ಯೆಹೂದ್ಯನಲ್ಲ.)


ತನಗೆ ಗುಣವಾಯಿತೆಂಬುದು ಆ ಸ್ತ್ರೀಗೆ ತಿಳಿದಿತ್ತು. ಆದ್ದರಿಂದ ಆಕೆ ಬಂದು, ಯೇಸುವಿನ ಪಾದಗಳ ಮುಂದೆ ಅಡ್ಡಬಿದ್ದು ನಡೆದ ಸಂಗತಿಯನ್ನೆಲ್ಲಾ ಹೇಳಿದಳು.


ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಮೊಣಕಾಲೂರಿ ಆತನಿಗೆ, “ನೀನು ಇಷ್ಟಪಟ್ಟರೆ, ನನ್ನನ್ನು ಗುಣಪಡಿಸಬಲ್ಲೆ” ಎಂದು ಬೇಡಿಕೊಂಡನು.


ಯೇಸು ಆ ಸ್ಥಳವನ್ನು ಬಿಟ್ಟು ಟೈರ್ ಪಟ್ಟಣದ ಸುತ್ತಮುತ್ತಲಿನ ಪ್ರದೇಶಕ್ಕೆ ಹೋದನು. ಯೇಸು ಅಲ್ಲಿ ಒಂದು ಮನೆಯೊಳಕ್ಕೆ ಹೋದನು. ತಾನು ಅಲ್ಲಿರುವುದು ಅಲ್ಲಿಯ ಜನರಿಗೆ ತಿಳಿಯಬಾರದೆಂಬುದು ಆತನ ಅಪೇಕ್ಷೆಯಾಗಿತ್ತು. ಆದರೆ ಯೇಸುವಿಗೆ ಅಡಗಿಕೊಳ್ಳಲಿಕ್ಕಾಗಲಿಲ್ಲ.


ಅವಳು ಸಿರಿಯ ಪ್ರದೇಶದ ಪೊಯಿನಿಕ್ಯದಲ್ಲಿ ಹುಟ್ಟಿದ್ದಳು ಮತ್ತು ಗ್ರೀಕಳಾಗಿದ್ದಳು. ಆ ಸ್ತ್ರೀಯು ತನ್ನ ಮಗಳಲ್ಲಿರುವ ದೆವ್ವವನ್ನು ಹೊರಗಟ್ಟಬೇಕೆಂದು ಯೇಸುವಿನಲ್ಲಿ ಬೇಡಿಕೊಂಡಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು