Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 7:28 - ಪರಿಶುದ್ದ ಬೈಬಲ್‌

28 ಆ ಸ್ತ್ರೀಯು, “ಅದು ನಿಜ ಪ್ರಭು. ಆದರೆ ಮಕ್ಕಳು ತಿನ್ನದೆ ಬಿಟ್ಟ ಆಹಾರದ ಚೂರುಗಳನ್ನು ಮೇಜಿನ ಕೆಳಗಿರುವ ನಾಯಿಗಳು ತಿನ್ನಬಹುದಲ್ಲವೇ?” ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆದರೆ ಅದಕ್ಕೆ ಆಕೆಯು, “ಹೌದು ಕರ್ತನೇ, ಮೇಜಿನ ಕೆಳಗಿರುವ ನಾಯಿಮರಿಗಳಂತೂ ಮಕ್ಕಳ ಕೈಯಿಂದ ಬೀಳುವ ರೊಟ್ಟೀತುಂಡುಗಳನ್ನು ತಿನ್ನುತ್ತವಲ್ಲಾ” ಎಂದು ಉತ್ತರಕೊಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅದಕ್ಕೆ ಆಕೆ, “ಅದು ನಿಜ ಸ್ವಾಮೀ; ಆದರೂ ಮಕ್ಕಳು ತಿಂದುಬಿಟ್ಟ ಚೂರುಪಾರುಗಳನ್ನು ಮೇಜಿನ ಕೆಳಗಿರುವ ನಾಯಿಗಳು ತಿನ್ನುತ್ತವಲ್ಲವೆ?” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅದಕ್ಕೆ ಆಕೆಯು - ಸ್ವಾಮೀ, ಆ ಮಾತು ನಿಜವೇ; ಮೇಜಿನ ಕೆಳಗಿರುವ ನಾಯಿಮರಿಗಳಂತೂ ಮಕ್ಕಳ ಕೈಯಿಂದ ಬೀಳುವ ರೊಟ್ಟೀತುಂಡುಗಳನ್ನು ತಿನ್ನುತ್ತವಲ್ಲಾ ಎಂದು ಉತ್ತರಕೊಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅದಕ್ಕೆ ಆಕೆಯು ಯೇಸುವಿಗೆ, “ಹೌದು ಸ್ವಾಮೀ, ಆದರೆ ಮೇಜಿನ ಕೆಳಗಿರುವ ನಾಯಿಮರಿಗಳು ಮಕ್ಕಳ ಕೈಯಿಂದ ಕೆಳಗೆ ಬೀಳುವ ರೊಟ್ಟಿತುಂಡುಗಳನ್ನು ತಿನ್ನುತ್ತವಲ್ಲಾ?” ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ತನ್ನಾ ತ್ಯಾ ಬಾಯ್ಕೊಮನ್ಸಿನ್ “ತೆ ಖರೆ ಮಾಜ್ಯಾ ಧನಿಯಾ, ಖರೆ ಪೊರಾ ಖಾತಾನಾ ಪಡಲ್ಲೆ ಭಾಕ್ರಿಚೆ ತುಕ್ಡೆ ತರ್ಬಿ ಕುತ್ರಿ ಖಾತ್ಯಾತ್ ನ್ಹಯ್!” ಮನುನ್ ಉತ್ತರ್ ದಿಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 7:28
15 ತಿಳಿವುಗಳ ಹೋಲಿಕೆ  

ಏಕೆಂದರೆ ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಯಾವ ವ್ಯತ್ಯಾಸವೂ ಇಲ್ಲ. ಎಲ್ಲರಿಗೂ ಒಬ್ಬನೇ ಪ್ರಭು. ತನ್ನಲ್ಲಿ ನಂಬಿಕೆಯಿಡುವ ಜನರೆಲ್ಲರಿಗೆ ಪ್ರಭುವು ಅನೇಕ ಆಶೀರ್ವಾದಗಳನ್ನು ಕೊಡುತ್ತಾನೆ.


ದೇವರು ಕೇವಲ ಯೆಹೂದ್ಯರ ದೇವರಲ್ಲ. ಆತನು ಯೆಹೂದ್ಯರಲ್ಲದವರಿಗೂ ಸಹ ದೇವರಾಗಿದ್ದಾನೆ.


ದೂರದೇಶದಲ್ಲಿರುವ ಜನರೇ, ನೀವು ಸುಳ್ಳುದೇವರನ್ನು ಅವಲಂಬಿಸುವದನ್ನು ನಿಲ್ಲಿಸಿರಿ. ನನ್ನನ್ನು ಹಿಂಬಾಲಿಸಿ ರಕ್ಷಣೆ ಹೊಂದಿರಿ. ನಾನೇ ದೇವರು, ಬೇರೆ ದೇವರುಗಳೇ ಇಲ್ಲ. ನಾನೊಬ್ಬನೇ ದೇವರು.


ಯೆಹೋವನು ನನಗೆ ಹೇಳಿದ್ದೇನೆಂದರೆ: “ನನ್ನ ಸೇವಕನಾದ ಯಾಕೋಬನ ಕುಲಗಳನ್ನು ಮೇಲೆತ್ತಿ ಇಸ್ರೇಲಿನ ಅಳಿದುಳಿದವರನ್ನು ಪುನಃಸ್ಥಾಪಿಸುವೆ. ಆದರೆ ನಿನಗೆ ಇನ್ನೊಂದು ಕೆಲಸವಿದೆ. ಅದು ಇದಕ್ಕಿಂತಲೂ ಮಹತ್ತಾದದ್ದು. ನಾನು ನಿನ್ನನ್ನು ಎಲ್ಲಾ ಜನಾಂಗಗಳಿಗೆ ಬೆಳಕನ್ನಾಗಿ ಮಾಡುವೆನು. ಲೋಕದ ಎಲ್ಲಾ ಜನರನ್ನು ರಕ್ಷಿಸಲು ನೀನು ನನ್ನ ಮಾರ್ಗವಾಗುವೆ.”


ನೀನು ಕೈಯನ್ನು ತೆರೆದು ಜೀವಿಗಳ ಅವಶ್ಯಕತೆಗಳನ್ನೆಲ್ಲಾ ಪೂರೈಸುವೆ.


ದೇವಜನರಲ್ಲಿ ನಾನೇ ಅತ್ಯಲ್ಪನು. ಕ್ರಿಸ್ತನ ಐಶ್ವರ್ಯವನ್ನು ಕುರಿತಾದ ಸುವಾರ್ತೆಯನ್ನು ನಾನು ಯೆಹೂದ್ಯರಲ್ಲದವರಿಗೆ ತಿಳಿಸಬೇಕೆಂದು ದೇವರು ನನಗೆ ಈ ಕೃಪಾವರವನ್ನು ಕೊಟ್ಟನು. ಆ ಐಶ್ವರ್ಯವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ.


ಆಗ ನೀವು ಪರಲೋಕದಲ್ಲಿರುವ ನಿಮ್ಮ ತಂದೆಯ ನಿಜವಾದ ಮಕ್ಕಳಾಗುವಿರಿ. ನಿಮ್ಮ ತಂದೆಯು ಒಳ್ಳೆಯವರಿಗಾಗಿ ಮತ್ತು ಕೆಟ್ಟವರಿಗಾಗಿ ಸೂರ್ಯನನ್ನು ಉದಯಿಸುತ್ತಾನೆ ಮತ್ತು ಮಳೆಯನ್ನು ಸುರಿಸುತ್ತಾನೆ.


ಆ ಸ್ತ್ರೀಯು, “ಹೌದು ಪ್ರಭುವೇ, ಆದರೂ ನಾಯಿಗಳು ತಮ್ಮ ಯಜಮಾನರ ಮೇಜಿನಿಂದ ಬೀಳುವ ಆಹಾರದ ತುಂಡುಗಳನ್ನು ತಿನ್ನುತ್ತವೆಯಲ್ಲಾ” ಎಂದಳು.


ಯೇಸು ಆ ಸ್ತ್ರೀಗೆ, “ಮಕ್ಕಳಿಗೆ ಕೊಡುವ ರೊಟ್ಟಿಯನ್ನು ತೆಗೆದುಕೊಂಡು ನಾಯಿಗಳಿಗೆ ಕೊಡುವುದು ಸರಿಯಲ್ಲ. ತಮಗೆ ಬೇಕಾದುದನ್ನು ಮಕ್ಕಳು ಮೊದಲು ತಿನ್ನಲಿ” ಎಂದು ಹೇಳಿದನು.


ಆಗ ಯೇಸು ಆ ಸ್ತ್ರೀಗೆ, “ನೀನು ಒಳ್ಳೆಯ ಉತ್ತರ ಕೊಟ್ಟೆ. ಹೋಗು, ನಿನ್ನ ಮಗಳನ್ನು ದೆವ್ವವು ಬಿಟ್ಟುಹೋಗಿದೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು