ಮಾರ್ಕ 7:5 - ಪರಿಶುದ್ದ ಬೈಬಲ್5 ಫರಿಸಾಯರು ಮತ್ತು ಧರ್ಮೋಪದೇಶಕರು ಯೇಸುವಿಗೆ, “ನಮ್ಮ ಪಿತೃಗಳ ಸಂಪ್ರದಾಯವನ್ನು ನಿನ್ನ ಶಿಷ್ಯರು ಅನುಸರಿಸದೆ ಅಶುದ್ಧವಾದ ಕೈಗಳಿಂದ ಆಹಾರವನ್ನು ತಿನ್ನುವುದೇಕೆ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆದುದರಿಂದ ಫರಿಸಾಯರೂ ಶಾಸ್ತ್ರಿಗಳೂ ಯೇಸುವನ್ನು, “ನಿನ್ನ ಶಿಷ್ಯರು ಹಿರಿಯರ ಆಚಾರಗಳನ್ನೇಕೆ ಅನುಸರಿಸುವುದಿಲ್ಲ? ಅಶುದ್ಧವಾದ ಕೈಗಳಿಂದಲೇ ಅವರು ಊಟಮಾಡುತ್ತಿದ್ದಾರಲ್ಲಾ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆದುದರಿಂದ ಫರಿಸಾಯರೂ ಧರ್ಮಶಾಸ್ತ್ರಿಗಳೂ, “ನಿನ್ನ ಶಿಷ್ಯರು ಪೂರ್ವಜರಿಂದ ಬಂದ ಆಚಾರಗಳನ್ನೇಕೆ ಅನುಸರಿಸುವುದಿಲ್ಲ? ಅಶುದ್ಧವಾದ ಕೈಗಳಿಂದಲೇ ಅವರು ಊಟಮಾಡುತ್ತಿದ್ದಾರಲ್ಲಾ?" ಎಂದು ಯೇಸುವನ್ನು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆತನನ್ನು - ನಿನ್ನ ಶಿಷ್ಯರು ಹಿರಿಯರಿಂದ ಬಂದ ಸಂಪ್ರದಾಯದಂತೆ ಯಾಕೆ ನಡೆದುಕೊಳ್ಳುವದಿಲ್ಲ? ಮೈಲಿಗೆಯ ಕೈಯಿಂದ ಯಾಕೆ ಆಹಾರ ತೆಗೆದುಕೊಳ್ಳುತ್ತಾರೆ ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆದ್ದರಿಂದ ಫರಿಸಾಯರು ಮತ್ತು ನಿಯಮ ಬೋಧಕರು, “ನಿನ್ನ ಶಿಷ್ಯರು ಪೂರ್ವಿಕರ ಸಂಪ್ರದಾಯದ ಪ್ರಕಾರ ಏಕೆ ನಡೆಯುವುದಿಲ್ಲ? ಅವರು ಮೈಲಿಗೆಯಾದ ಕೈಗಳಿಂದ ಊಟಮಾಡುತ್ತಾರಲ್ಲಾ?” ಎಂದು ಯೇಸುವನ್ನು ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ತೆಚೆ ಸಾಟ್ನಿ ಫಾರಿಜೆವಾನಿ ಅನಿ ಶಾಸ್ತರಾ ಶಿಕ್ವುತಲ್ಯಾನಿ ಜೆಜುಕ್ಡೆ ಯೆವ್ನ್ “ತುಜಿ ಶಿಸಾ ಅದ್ಲ್ಯಾ ಲೊಕಾನಿ ಕರಲ್ಲ್ಯಾ ಖಾಯ್ದ್ಯಾ ಪರ್ಕಾರ್ ಚಲಿನಸ್ತಾನಾ ಮ್ಹೆಳ್ಕ್ಯಾ ಹಾತಾನಿ ಜೆವಾನ್ ಕರ್‍ತ್ಯಾತ್ ಕಶ್ಯಾಕ್?” ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |
ನೀನು ಅವರನ್ನು ನಿನ್ನೊಂದಿಗೆ ಕರೆದುಕೊಂಡು ಹೋಗಿ ಅವರ ಶುದ್ಧಾಚಾರದ ಸಂಪ್ರದಾಯದಲ್ಲಿ ಭಾಗವಹಿಸು. ಅವರ ಖರ್ಚುವೆಚ್ಚನ್ನೆಲ್ಲ ಕೊಡು. ಬಳಿಕ ಅವರು ತಮ್ಮ ತಲೆಬೋಳಿಸಿಕೊಳ್ಳಲಿ. ನೀನು ಹೀಗೆ ಮಾಡಿದರೆ, ನಿನ್ನ ಬಗ್ಗೆ ಅವರು ಕೇಳಿದ ಸಂಗತಿಗಳು ಸತ್ಯವಲ್ಲವೆಂದು ಅವರೆಲ್ಲರಿಗೂ ಮನದಟ್ಟಾಗುವುದು. ಸ್ವತಃ ನೀನೇ ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯನಾಗುತ್ತಿರುವುದನ್ನು ಅವರೆಲ್ಲರೂ ಕಣ್ಣಾರೆ ಕಾಣುವರು.