ಯೇಸು ಹೇಳಿದ್ದೇನೆಂದರೆ: “ಖೊರಾಜಿನೇ, ನಿನ್ನ ಗತಿಯನ್ನು ಏನು ಹೇಳಲಿ? ಬೆತ್ಸಾಯಿದವೇ, ನಿನ್ನ ಗತಿಯನ್ನು ಏನು ಹೇಳಲಿ! ನಾನು ನಿಮ್ಮಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆನು. ಅದೇ ಅದ್ಭುತಕಾರ್ಯಗಳನ್ನು ಟೈರ್, ಸೀದೋನ್‌ಗಳಲ್ಲಿ ಮಾಡಿದ್ದರೆ, ಅವುಗಳ ಜನರು ಬಹಳ ಕಾಲದ ಹಿಂದೆಯೇ ತಮ್ಮ ಜೀವಿತವನ್ನು ಬದಲಾಯಿಸಿಕೊಳ್ಳುತ್ತಿದ್ದರು; ತಮ್ಮ ಪಾಪಗಳಿಗಾಗಿ ದುಃಖಪಟ್ಟು ಗೋಣಿತಟ್ಟನ್ನು ಕಟ್ಟಿಕೊಳ್ಳುತ್ತಿದ್ದರು; ಮೈಮೇಲೆ ಬೂದಿಯನ್ನು ಹಾಕಿಕೊಳ್ಳುತ್ತಿದ್ದರು.
ಆಗ ಯೇಸು ತನ್ನ ಶಿಷ್ಯರಿಗೆ ದೋಣಿಯೊಳಕ್ಕೆ ಹೋಗಲು ತಿಳಿಸಿದನು. ಸರೋವರದ ಆಚೆಯ ದಡದಲ್ಲಿದ್ದ ಬೆತ್ಸಾಯಿದಕ್ಕೆ ಹೋಗಬೇಕೆಂತಲೂ ಸ್ವಲ್ಪ ಸಮಯದ ನಂತರ ತಾನು ಬರುವುದಾಗಿಯೂ ಯೇಸು ಅವರಿಗೆ ಹೇಳಿ ಅವರನ್ನು ಕಳುಹಿಸಿದನು. ತಮ್ಮತಮ್ಮ ಮನೆಗಳಿಗೆ ಹೋಗುವಂತೆ ಜನರಿಗೆ ತಿಳಿಸುವುದಕ್ಕಾಗಿ ಯೇಸು ಅಲ್ಲಿ ಉಳಿದುಕೊಂಡನು.
“ಕೊರಾಜಿನೇ, ಬೆತ್ಸಾಯಿದವೇ, ನಿಮ್ಮ ಗತಿಯನ್ನು ಏನು ಹೇಳಲಿ! ನಿಮ್ಮಲ್ಲಿ ನಾನು ಅನೇಕ ಸೂಚಕಕಾರ್ಯಗಳನ್ನು ಮಾಡಿದೆನು. ಅದೇ ಸೂಚಕ ಕಾರ್ಯಗಳು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ನಡೆದಿದ್ದರೆ, ಅವುಗಳ ಜನರು ಬಹಳ ಹಿಂದೆಯೇ, ತಮ್ಮ ಜೀವಿತಗಳನ್ನು ಮಾರ್ಪಡಿಸಿಕೊಂಡು, ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು, ಗೋಣಿತಟ್ಟನ್ನು ಧರಿಸಿಕೊಂಡು, ಬೂದಿಯನ್ನು ಬಳಿದುಕೊಳ್ಳುತ್ತಿದ್ದರು.
ಅಪೊಸ್ತಲರು ಸುವಾರ್ತಾ ಪ್ರಯಾಣದಿಂದ ಹಿಂತಿರುಗಿ ಬಂದು, ತಾವು ಮಾಡಿದ ಸಂಗತಿಗಳನ್ನು ಯೇಸುವಿಗೆ ತಿಳಿಸಿದರು. ಆಗ ಆತನು ಅವರನ್ನು ಬೆತ್ಸಾಯಿದ ಊರಿನ ಸಮೀಪಕ್ಕೆ ಪ್ರತ್ಯೇಕವಾಗಿ ಕರೆದುಕೊಂಡು ಹೋದನು. ಅಲ್ಲಿ ಯೇಸು ಮತ್ತು ಆತನ ಅಪೊಸ್ತಲರನ್ನು ಬಿಟ್ಟು ಬೇರೆ ಯಾರೂ ಇರಲಿಲ್ಲ.
ಯೇಸು ಅನೇಕ ಜನರನ್ನು ಗುಣಪಡಿಸಿದನು. ಆದ್ದರಿಂದ ಕಾಯಿಲೆಯಾಗಿದ್ದ ಜನರೆಲ್ಲರೂ ಆತನನ್ನು ಮುಟ್ಟುವುದಕ್ಕಾಗಿ ಆತನ ಮೇಲೆ ಬೀಳುತ್ತಿದ್ದರು. ದೆವ್ವಗಳಿಂದ ಪೀಡಿತರಾಗಿದ್ದ ಕೆಲವು ಜನರು ಅಲ್ಲಿದ್ದರು.