ಮಾರ್ಕ 8:23 - ಪರಿಶುದ್ದ ಬೈಬಲ್23 ಆಗ ಯೇಸು ಆ ಕುರುಡನ ಕೈ ಹಿಡಿದುಕೊಂಡು, ಅವನನ್ನು ಊರಿನಿಂದ ಹೊರಕ್ಕೆ ಕರೆದುಕೊಂಡು ಹೋದನು. ನಂತರ ಯೇಸು ಅವನ ಕಣ್ಣುಗಳಲ್ಲಿ ಉಗುಳಿ ಅವನ ಮೇಲೆ ತನ್ನ ಕೈಗಳನ್ನಿಟ್ಟು, “ಈಗ ನಿನಗೆ ಕಾಣುತ್ತದೆಯೋ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆತನು ಕುರುಡನ ಕೈ ಹಿಡಿದು ಊರ ಹೊರಗೆ ಕರೆದುಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳು ಹಚ್ಚಿ, ಅವನ ಮೇಲೆ ತನ್ನ ಕೈಗಳನ್ನಿಟ್ಟು, “ನಿನಗೆ ಏನಾದರೂ ಕಾಣುತ್ತದೆಯೋ?” ಎಂದು ಅವನನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಯೇಸು ಕುರುಡನ ಕೈಹಿಡಿದು, ಅವನನ್ನು ಊರ ಹೊರಗೆ ಕರೆದೊಯ್ದರು. ಅವನ ಮೇಲೆ ಕೈಯಿಟ್ಟು, “ನಿನಗೆ ಏನಾದರೂ ಕಾಣುತ್ತಿದೆಯೇ?’ ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆತನು ಕುರುಡನ ಕೈ ಹಿಡುಕೊಂಡು ಊರ ಹೊರಕ್ಕೆ ಕರಕೊಂಡು ಹೋಗಿ ಅವನ ಕಣ್ಣುಗಳಲ್ಲಿ ಉಗುಳಿ ಅವನ ಮೇಲೆ ಕೈಯಿಟ್ಟು - ನಿನಗೇನಾದರೂ ಕಾಣುತ್ತದೋ? ಎಂದು ಅವನನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಯೇಸು ಆ ಕುರುಡನ ಕೈಹಿಡಿದು ಊರ ಹೊರಗೆ ಕರೆದುಕೊಂಡು ಹೋಗಿ, ಅವನ ಕಣ್ಣುಗಳ ಮೇಲೆ ಉಗುಳಿ ಅವನ ಮೇಲೆ ತಮ್ಮ ಕೈಯಿಟ್ಟು, “ನಿನಗೆ ಏನಾದರೂ ಕಾಣುತ್ತದೋ?” ಎಂದು ಅವನನ್ನು ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ತನ್ನಾ ಜೆಜುನ್ ತ್ಯಾ ಕುಡ್ಡ್ಯಾಕ್ ಹಾತ್ ಧರುನ್ ಗಾಂವಾಂಚ್ಯಾ ಭಾಯ್ರ್ ಘೆವ್ನ್ ಗೆಲ್ಯಾನ್ ಅನಿ ತೆಚ್ಯಾ ಡೊಳ್ಯಾ ವೈನಿ ಥುಕುನ್ ತೆಚ್ಯಾ ವರ್‍ತಿ ಹಾತ್ ಥವ್ಲ್ಯಾನ್, ಅನಿ “ಅತ್ತಾ ತುಕಾ ದಿಸುಕ್ ಲಾಗ್ಲಾ ಕಾಯ್ ನಾ?” ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |
ಬೆಂಕಿಯಲ್ಲಿ ಪುಟಹಾಕಿದ ಅಪ್ಪಟ ಚಿನ್ನವನ್ನು ನೀನು ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ಸಲಹೆ ನೀಡುತ್ತೇನೆ. ಆಗ ನೀನು ನಿಜವಾಗಿಯೂ ಶ್ರೀಮಂತನಾಗಲು ಸಾಧ್ಯ. ನಾನು ನಿನಗೆ ಹೇಳುವುದೇನೆಂದರೆ: ಬಿಳಿವಸ್ತ್ರಗಳನ್ನು ಕೊಂಡುಕೊ. ಆಗ ನೀನು ನಾಚಿಕೆಕರವಾದ ನಿನ್ನ ಬೆತ್ತಲೆಯನ್ನು ಮುಚ್ಚಿಕೊಳ್ಳಲು ಸಾಧ್ಯವಾಗುವುದು. ನೀನು ನಿನ್ನ ಕಣ್ಣುಗಳಿಗೆ ಹಚ್ಚಲು ಔಷಧಿಯನ್ನು ಕೊಂಡುಕೊಳ್ಳಬೇಕೆಂತಲೂ ನಾನು ನಿನಗೆ ಹೇಳುತ್ತೇನೆ. ಆಗ ನಿನಗೆ ನಿಜವಾಗಿಯೂ ದೃಷ್ಟಿ ಬರುವುದು.