31 ನಂತರ ಯೇಸು ತನ್ನ ಶಿಷ್ಯರಿಗೆ ಉಪದೇಶಿಸುತ್ತಾ “ಮನುಷ್ಯಕುಮಾರನು ಅನೇಕ ಕಷ್ಟಗಳನ್ನು ಅನುಭವಿಸಬೇಕಾಗುತ್ತದೆ. ಹಿರಿಯ ಯೆಹೂದ್ಯನಾಯಕರು, ಮಹಾಯಾಜಕರು ಮತ್ತು ಧರ್ಮೋಪದೇಶಕರು ಆತನನ್ನು ತಿರಸ್ಕರಿಸಿ ಕೊಲ್ಲುವರು. ಆದರೆ ಮೂರನೆಯ ದಿನದಲ್ಲಿ ಆತನು ಸತ್ತವರೊಳಗಿಂದ ಜೀವಂತವಾಗಿ ಎದ್ದುಬರುತ್ತಾನೆ” ಎಂದು ಹೇಳಿದನು.
31 ಇದಲ್ಲದೆ ಆತನು, ಮನುಷ್ಯಕುಮಾರನು ಬಹು ಕಷ್ಟಗಳನ್ನು ಅನುಭವಿಸಿ ಹಿರಿಯರಿಂದಲೂ, ಮುಖ್ಯಯಾಜಕರಿಂದಲೂ, ಶಾಸ್ತ್ರಿಗಳಿಂದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರಬೇಕಾಗಿದೆ ಎಂದು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದನು.
31 ಈ ಘಟನೆಯ ಬಳಿಕ ಯೇಸುಸ್ವಾಮಿ, “ನರಪುತ್ರನು ಕಠಿಣವಾದ ಯಾತನೆಯನ್ನು ಅನುಭವಿಸಬೇಕಾಗಿದೆ. ಸಭಾಪ್ರಮುಖರಿಂದಲೂ ಪ್ರಧಾನ ಯಾಜಕರಿಂದಲೂ ಧರ್ಮಶಾಸ್ತ್ರಿಗಳಿಂದಲೂ ಆತನು ತಿರಸ್ಕೃತನಾಗಿ ಕೊಲ್ಲಲ್ಪಡುವನು; ಆದರೆ ಮೂರನೇ ದಿನ ಪುನರುತ್ಥಾನ ಹೊಂದುವನು,” ಎಂದು ತಮ್ಮ ಶಿಷ್ಯರಿಗೆ ಮುಚ್ಚುಮರೆಯಿಲ್ಲದೆ ಬೋಧಿಸಲಾರಂಭಿಸಿದರು.
31 ಇದಲ್ಲದೆ ಆತನು - ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಮಹಾಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕೃತವಾಗಿ ಕೊಲ್ಲಲ್ಪಟ್ಟು ಮೂರು ದಿನದ ಮೇಲೆ ಜೀವಿತನಾಗಿ ಎದ್ದು ಬರಬೇಕಾಗಿದೆ ಎಂದು ಉಪದೇಶಮಾಡುವದಕ್ಕೆ ಪ್ರಾರಂಭಮಾಡಿದನು.
31 ಮನುಷ್ಯಪುತ್ರನಾದ ನಾನು ಅನೇಕ ಬಾಧೆಗಳನ್ನು ಅನುಭವಿಸಿ, ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ನಿಯಮ ಬೋಧಕರಿಂದಲೂ ತಿರಸ್ಕೃತನಾಗಿ ಕೊಲೆಗೆ ಗುರಿಯಾಗಿ ಮೂರು ದಿವಸಗಳಾದ ಮೇಲೆ ಜೀವಂತವಾಗಿ ಎದ್ದು ಬರುವುದು ಅವಶ್ಯ ಎಂದು ಅವರಿಗೆ ಬೋಧಿಸಲಾರಂಭಿಸಿದರು.
“ಆ ಯೆಹೂದ್ಯರಿಂದ ತಿರಸ್ಕೃತನಾದವನೇ ಈ ಮೋಶೆ. ಅವರು ಅವನಿಗೆ, ‘ನಿನ್ನನ್ನು ನಮ್ಮ ಅಧಿಪತಿ ಎಂದಾಗಲಿ ನ್ಯಾಯಾಧೀಶ ಎಂದಾಗಲಿ ನಿನಗೆ ಯಾರಾದರೂ ಹೇಳಿದರೇ?’ ಎಂದು ಪ್ರಶ್ನಿಸಿದ್ದರು. ಆದರೆ ದೇವರು ಅಧಿಪತಿಯನ್ನಾಗಿಯೂ ವಿಮೋಚಕನನ್ನಾಗಿಯೂ ಕಳುಹಿಸಿದ್ದು ಆ ಮೋಶೆಯನ್ನೇ. ದೇವರು ತನ್ನ ದೂತನ ಮೂಲಕವಾಗಿ ಮೋಶೆಯನ್ನು ಕಳುಹಿಸಿದನು. ಉರಿಯುವ ಪೊದೆಯಲ್ಲಿ ಮೋಶೆಯು ಕಂಡದ್ದು ಈ ದೇವದೂತನನ್ನೇ.
ಯೇಸು ಅವರಿಗೆ, “ಖಂಡಿತವಾಗಿಯೂ ನೀವು ಇದನ್ನು ಪವಿತ್ರ ಗ್ರಂಥದಲ್ಲಿ ಓದಿದ್ದೀರಿ: ‘ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು. ಪ್ರಭುವು ಇದನ್ನು ಮಾಡಿದನು. ಇದು ನಮಗೆ ಆಶ್ಚರ್ಯಕರವಾಗಿದೆ.’
ಪ್ರವಾದಿಯಾದ ಯೋನನು ಮೂರು ದಿವಸ ಹಗಲಿರುಳು ಒಂದು ದೊಡ್ಡ ಮೀನಿನ ಹೊಟ್ಟೆಯಲ್ಲಿ ಹೇಗಿದ್ದನೋ ಅದೇ ರೀತಿಯಲ್ಲಿ ಮನುಷ್ಯಕುಮಾರನು ಸಮಾಧಿಯಲ್ಲಿ ಮೂರು ದಿನ ಹಗಲಿರುಳು ಇರುವನು. ಇದಲ್ಲದೆ ಬೇರೆ ಯಾವ ಸೂಚಕಕಾರ್ಯವನ್ನು ಅವರಿಗೆ ತೋರಿಸಲಾಗುವುದಿಲ್ಲ.
ಯೇಸು ಅವರಿಗೆ, “ನಾನು ಮೊದಲು ನಿಮ್ಮ ಸಂಗಡ ಇದ್ದುದನ್ನು ಜ್ಞಾಪಕಮಾಡಿಕೊಳ್ಳಿರಿ. ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿ ಪ್ರವಾದಿಗಳ ಗ್ರಂಥಗಳಲ್ಲಿ, ಕೀರ್ತನೆಗಳಲ್ಲಿ ಬರೆದಿರುವ ಪ್ರತಿಯೊಂದು ಸಂಗತಿಯೂ ನೆರವೇರಬೇಕಾಗಿದೆ ಎಂದು ನಾನು ಹೇಳಿದೆನು” ಅಂದನು.
ಜನರು ಆತನನ್ನು ಪರಿಹಾಸ್ಯ ಮಾಡಿದರು. ಆತನ ಸ್ನೇಹಿತರು ಆತನನ್ನು ತೊರೆದರು. ಆತನು ನೋವಿನಿಂದ ಬಳಲಿದನು. ಆತನು ಕಾಯಿಲೆಯಿಂದ ಬಾಧಿತನಾಗಿದ್ದನು. ಜನರು ಆತನ ಕಡೆಗೆ ನೋಡಲೂ ಇಲ್ಲ. ನಾವು ಆತನನ್ನು ಗಮನಕ್ಕೆ ತರಲೇ ಇಲ್ಲ.
ಆದರೆ ಇಂದು ನೀವು ನಿಮ್ಮ ದೇವರನ್ನು ತಿರಸ್ಕರಿಸಿರುವಿರಿ. ನಿಮ್ಮ ದೇವರು ನಿಮ್ಮನ್ನು ಕಷ್ಟಗಳಿಂದ ಮತ್ತು ಸಮಸ್ಯೆಗಳಿಂದ ರಕ್ಷಿಸುತ್ತಾನೆ. ಆದರೆ ನೀವು, ‘ಇಲ್ಲ, ನಮ್ಮನ್ನಾಳಲು ನಮಗೊಬ್ಬ ರಾಜನು ಬೇಕು’ ಎಂದು ಕೇಳಿದಿರಿ. ಈಗ ಬನ್ನಿ, ನೀವು, ನಿಮ್ಮ ಕುಲಗಳ ಮತ್ತು ಗೋತ್ರಗಳ ಸಮೇತವಾಗಿ ಯೆಹೋವನ ಸಮ್ಮುಖದಲ್ಲಿ ನಿಲ್ಲಿರಿ” ಎಂದು ಹೇಳಿದನು.