Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 8:36 - ಪರಿಶುದ್ದ ಬೈಬಲ್‌

36 ಒಬ್ಬನು ಪ್ರಪಂಚವನ್ನೆಲ್ಲಾ ಸಂಪಾದಿಸಿಕೊಂಡು ತನ್ನ ಆತ್ಮವನ್ನೇ ನಷ್ಟಪಡಿಸಿಕೊಂಡರೆ ಅದರಿಂದ ಅವನಿಗೆ ಪ್ರಯೋಜನವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನ ಸ್ವಂತ ಪ್ರಾಣವನ್ನೇ ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಒಬ್ಬನು ಪ್ರಪಂಚವನ್ನೆಲ್ಲಾ ಗೆದ್ದು, ಪ್ರಾಣವನ್ನೇ ಕಳೆದುಕೊಂಡರೆ ಅದರಿಂದ ಬರುವ ಲಾಭವಾದರೂ ಏನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಪ್ರಾಣನಷ್ಟಪಟ್ಟರೆ ಅವನಿಗೆ ಪ್ರಯೋಜನವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತಮ್ಮ ಸ್ವಂತ ಆತ್ಮವನ್ನೇ ನಷ್ಟಪಡಿಸಿಕೊಂಡರೆ ಅವರಿಗೆ ಲಾಭವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಕೊನ್ ತರ್ ಎಕ್ಲ್ಯಾನ್ ಹಿ ಸಗ್ಳಿ ದುನಿಯಾಚ್ ಜಿಕುನ್ ಘೆವ್ನ್, ಅಪ್ನಾಚೊ ಅತ್ಮೊಚ್ ನಾಸ್ ಕರುನ್ ಘೆಟ್ಲ್ಯಾರ್ ತೆಕಾ ಕಾಯ್ ಫಾಯ್ದೊ ಹೊಲ್ಯಾ ಸರ್ಕೆ ಹೊಲೆ? ಕಾಯ್ಬಿ ಫಾಯ್ದೊ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 8:36
17 ತಿಳಿವುಗಳ ಹೋಲಿಕೆ  

ಒಬ್ಬನು ಪ್ರಪಂಚವನ್ನೆಲ್ಲಾ ಗಳಿಸಿಕೊಂಡು ತನ್ನ ಆತ್ಮವನ್ನೇ ಕಳೆದುಕೊಂಡರೆ ಅದರಿಂದ ಅವನಿಗೇನು ಪ್ರಯೋಜನ? ಮನುಷ್ಯನು ತನ್ನ ಆತ್ಮವನ್ನು ಕೊಂಡುಕೊಳ್ಳಲು ಏನನ್ನು ತಾನೇ ಕೊಡಬಲ್ಲನು?


ಅವರು ಸಾಯುವಾಗ ತಮ್ಮೊಂದಿಗೆ ಏನನ್ನೂ ತೆಗೆದುಕೊಂಡು ಹೋಗಲಾರರು. ಅವರ ವೈಭವವು ಅವರೊಂದಿಗೆ ಹೋಗಲಾರದು.


ಒಬ್ಬನು ಇಡೀ ಲೋಕವನ್ನೇ ಸಂಪಾದಿಸಿಕೊಂಡು, ತನ್ನನ್ನೇ ಕೆಡಿಸಿಕೊಂಡರೆ ಅಥವಾ ನಷ್ಟಪಡಿಸಿಕೊಂಡರೆ ಅದರಿಂದ ಅವನಿಗೆ ಲಾಭವೇನು?


ನೀವು ದುಷ್ಕೃತ್ಯಗಳನ್ನು ಮಾಡಿದಿರಿ. ಈಗ ನೀವು ಆ ಕಾರ್ಯಗಳ ವಿಷಯದಲ್ಲಿ ನಾಚಿಕೆಪಡುತ್ತೀರಿ. ಆ ಕಾರ್ಯಗಳು ನಿಮಗೆ ಸಹಾಯ ಮಾಡಿದವೇ? ಇಲ್ಲ. ಆ ಕಾರ್ಯಗಳು ಆತ್ಮಿಕ ಮರಣವನ್ನು ಮಾತ್ರ ಉಂಟುಮಾಡುತ್ತವೆ.


ನೀವು, “ದೇವರಾದ ಯೆಹೋವನನ್ನು ಆರಾಧಿಸುವುದು ನಿಷ್ಪ್ರಯೋಜಕ. ಆತನ ಕಟ್ಟಳೆಗಳನ್ನು ನಾವು ಅನುಸರಿಸಿದೆವು. ಆದರೆ ಅದರಲ್ಲಿ ನಮಗೇನೂ ಲಾಭವಾಗಲಿಲ್ಲ. ಸಮಾಧಿಯಲ್ಲಿ ಜನರು ರೋದಿಸುವ ಹಾಗೆ ನಮ್ಮ ಪಾಪಗಳಿಗಾಗಿ ನಾವು ರೋದಿಸಿದೆವು. ಆದರೆ ಅದರಿಂದ ನಮಗೇನೂ ಸಹಾಯವಾಗಲಿಲ್ಲ.


ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ! ಎಂಬಂತೆ ಮನುಷ್ಯನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೆ ತನ್ನ ಸರ್ವಸ್ವವನ್ನೂ ಕೊಡುವನು.


“ಯಾವನೂ ದೇವರಿಗೆ ಸಹಾಯಮಾಡಲಾರನು. ಮಹಾ ಜ್ಞಾನಿಯು ಸಹ ದೇವರಿಗೆ ಉಪಯುಕ್ತನಾಗಲಾರನು.


ತನ್ನ ಪ್ರಾಣವನ್ನು ಕಾಪಾಡಿಕೊಳ್ಳಲು ಇಚ್ಛಿಸುವವನು ಅದನ್ನು ಕಳೆದುಕೊಳ್ಳುತ್ತಾನೆ. ನನಗಾಗಿ ಹಾಗೂ ಸುವಾರ್ತೆಗಾಗಿ ತನ್ನ ಪ್ರಾಣವನ್ನು ಕೊಡುವ ಪ್ರತಿಯೊಬ್ಬನೂ ತನ್ನ ಪ್ರಾಣವನ್ನು ನಿರಂತರವಾಗಿ ಕಾಪಾಡಿಕೊಳ್ಳುತ್ತಾನೆ.


ಒಬ್ಬನು ತನ್ನ ಆತ್ಮವನ್ನು ಕೊಂಡುಕೊಳ್ಳಲು ಸಾಧ್ಯವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು