ಎಪಿಕೊರಿಯಾ ಮತ್ತು ಸ್ತೋಯಿಕ ತತ್ವಶಾಸ್ತ್ರಜ್ಞರಲ್ಲಿ ಕೆಲವರು ಅವನೊಂದಿಗೆ ವಾದಿಸಿದರು. ಅವರಲ್ಲಿ ಕೆಲವರು, “ಈ ಮನುಷ್ಯನಿಗೆ ತಾನು ಯಾವುದರ ಬಗ್ಗೆ ಮಾತಾಡುತ್ತಿದ್ದೇನೆ ಎಂಬುದೇ ನಿಜವಾಗಿಯೂ ತಿಳಿದಿಲ್ಲ. ಅವನು ಏನು ಹೇಳಲು ಪ್ರಯತ್ನಿಸುತ್ತಿದ್ದಾನೆ?” ಎಂದರು. ಯೇಸುವು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದಿದ್ದಾನೆ ಎಂಬ ಸುವಾರ್ತೆಯನ್ನು ಪೌಲನು ಅವರಿಗೆ ಹೇಳುತ್ತಿದ್ದನು. ಆದ್ದರಿಂದ ಅವರು, “ಕೆಲವು ಬೇರೆ ದೇವರುಗಳ ಬಗ್ಗೆ ಅವನು ನಮಗೆ ಹೇಳುತ್ತಿರುವಂತೆ ತೋರುತ್ತಿದೆ” ಎಂದರು.
ಯೇಸುವಿನ ಶಿಷ್ಯರು ಆ ಸಮಯದಲ್ಲಿ ಇದನ್ನು ಅರ್ಥಮಾಡಿಕೊಳ್ಳಲಿಲ್ಲ. ಆದರೆ ಯೇಸು ಮಹಿಮಾಪದವಿಗೆ ಏರಿಹೋದ ನಂತರ, ಈ ಸಂಗತಿಗಳು ಆತನ ವಿಷಯವಾಗಿ ಬರೆಯಲ್ಪಟ್ಟಿವೆ ಎಂಬುದನ್ನು ಶಿಷ್ಯರು ಅರ್ಥಮಾಡಿಕೊಂಡರು; ಮತ್ತು ತಾವು ಆತನಿಗಾಗಿ ಮಾಡಿದ ಕಾರ್ಯಗಳನ್ನು ಜ್ಞಾಪಿಸಿಕೊಂಡರು.
ಯೇಸು ಮತ್ತು ಆ ಶಿಷ್ಯರು ಹಿಂತಿರುಗಿ ಬೆಟ್ಟದಿಂದ ಕೆಳಗಿಳಿದು ಬರುತ್ತಿರುವಾಗ, ಆತನು ಅವರಿಗೆ, “ನೀವು ಬೆಟ್ಟದ ಮೇಲೆ ನೋಡಿದ ಸಂಗತಿಗಳ ಬಗ್ಗೆ ಯಾರಿಗೂ ಹೇಳಬೇಡಿ. ಮನುಷ್ಯಕುಮಾರನು ಸತ್ತು ಜೀವಂತವಾಗಿ ಎದ್ದುಬರುವವರೆಗೆ ಕಾದುಕೊಂಡಿರಿ” ಎಂದು ಆಜ್ಞಾಪಿಸಿದನು.