Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:13 - ಪರಿಶುದ್ದ ಬೈಬಲ್‌

13 ಎಲೀಯನು ಈಗಾಗಲೇ ಬಂದಿದ್ದಾನೆಂದು ನಾನು ನಿಮಗೆ ಹೇಳುತ್ತೇನೆ ಮತ್ತು ಜನರು ತಮ್ಮ ಮನಸ್ಸಿಗೆ ಬಂದಂತೆ ಅವನಿಗೆ ಕೇಡನ್ನು ಮಾಡಿದರು. ಅವನಿಗೆ ಹೀಗಾಗುವುದೆಂದು ಪವಿತ್ರಗ್ರಂಥದಲ್ಲಿ ಮೊದಲೇ ಬರೆದಿತ್ತು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೆ ನಾನು ನಿಮಗೆ ಹೇಳುವುದೇನಂದರೆ; ಎಲೀಯನು ಬಂದನು ಮತ್ತು ಆತನ ವಿಷಯವಾಗಿ ಬರೆದಿರುವ ಪ್ರಕಾರ ಜನರು ತಮ್ಮ ಮನಸ್ಸಿಗೆ ಬಂದಂತೆ ಅವನಿಗೆ ಮಾಡಿದರು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆದರೆ ನಾನು ನಿಮಗೆ ಹೇಳುವುದೇನೆಂದರೆ, ‘ಎಲೀಯನು ಬಂದಾಗಿದೆ; ಆತನ ವಿಷಯವಾಗಿ ಮೊದಲೇ ಬರೆದಿರುವಂತೆ ಜನರು ತಮ್ಮ ಇಚ್ಛಾನುಸಾರ ಆತನನ್ನು ಹಿಂಸಿಸಿದ್ದೂ ಆಗಿದೆ’,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದರೆ ನಾನು ನಿಮಗೆ ಹೇಳುವದೇನಂದರೆ - ಎಲೀಯನು ಬಂದನು; ಮತ್ತು ಅವನ ವಿಷಯವಾಗಿ ಬರೆದಿರುವ ಪ್ರಕಾರ ಜನರು ತಮ್ಮ ಮನಸ್ಸಿಗೆ ಬಂದಂತೆ ಅವನಿಗೆ ಮಾಡಿದರು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೆ, ಎಲೀಯನು ನಿಜವಾಗಿಯೂ ಬಂದನು. ಅವನ ವಿಷಯವಾಗಿ ಬರೆದಿರುವಂತೆ ಜನರು ತಮ್ಮ ಮನಸ್ಸಿಗೆ ಬಂದ ಹಾಗೆ ಅವನಿಗೆ ಮಾಡಿದರು ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಮಿಯಾ ತುಮ್ಕಾ ಸಾಂಗ್ತಾ, “ಎಲಿಯಾ ಅದ್ದಿಚ್ ಯೆವ್ನ್ ಹೊಲೊ, ಖರೆ ಲೊಕಾನಿ ಪವಿತ್ರ್ ಪುಸ್ತಕಾತ್ ಸಾಂಗಲ್ಲ್ಯಾ ಸರ್ಕೆ ಅಪ್ನಾಚ್ಯಾ ಮನಾಕ್ ಯೆತಾ ತವ್ಡ್ಯಾ ಬುರ್ಶ್ಯಾ ರಿತಿನ್ ತೆಕಾ ಚಾಲ್ವುಲ್ಯಾನಿ.” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:13
9 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರವನ್ನು ಮತ್ತು ಪ್ರವಾದಿಗಳು ಹೇಳಿದ್ದನ್ನು ನೀವು ನಂಬುವುದಾದರೆ ಈ ಯೋಹಾನನೇ ಎಲೀಯನು. ಅವನು ಬರುತ್ತಾನೆಂದು ಧರ್ಮಶಾಸ್ತ್ರವೂ ಹೇಳಿದೆ.


ಜೀವಸಿದ್ದ ಪ್ರವಾದಿಗಳಲ್ಲಿ ಪ್ರತಿಯೊಬ್ಬರನ್ನೂ ನಿಮ್ಮ ಪಿತೃಗಳು ಹಿಂಸಿಸಿದರು. ನೀತಿವಂತನೊಬ್ಬನು (ಕ್ರಿಸ್ತನು) ಬರುತ್ತಾನೆಂದು ಬಹುಕಾಲದ ಹಿಂದೆಯೇ ಆ ಪ್ರವಾದಿಗಳು ತಿಳಿಸಿದ್ದರು. ಆದರೆ ನಿಮ್ಮ ಪಿತೃಗಳು ಆ ಪ್ರವಾದಿಗಳನ್ನು ಕೊಂದುಹಾಕಿದರು. ಈಗ ನೀವು ನೀತಿವಂತನಿಗೆ ವಿರುದ್ಧವಾಗಿ ತಿರುಗಿ ಆತನನ್ನು ಕೊಂದುಹಾಕಿದಿರಿ.


ಅವನು ಪ್ರಭುವಿಗೆ ಮುಂದೂತನಾಗಿ ಹೋಗುವನು. ಅವನು ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿರುವನು; ತಂದೆ ಮತ್ತು ಮಕ್ಕಳ ನಡುವೆ ಸಮಾಧಾನವನ್ನು ಉಂಟುಮಾಡುವನು; ಅವಿಧೇಯರಾದ ಅನೇಕರನ್ನು ನೀತಿವಂತರ ಜ್ಞಾನದ ಕಡೆಗೆ ನಡೆಸುವನು; ಜನರನ್ನು ಪ್ರಭುವಿನ ಆಗಮನಕ್ಕೆ ಸಿದ್ಧಪಡಿಸುವನು” ಎಂದು ಹೇಳಿದನು.


ಯೇಸು ಅವರಿಗೆ, “ಎಲೀಯನೇ ಮೊದಲು ಬರಬೇಕೆಂದು ಅವರು ಹೇಳುವುದು ಸರಿ. ಎಲೀಯನು ಎಲ್ಲವನ್ನು ಸರಿಪಡಿಸುತ್ತಾನೆ. ಆದರೆ ಮನುಷ್ಯಕುಮಾರನು ಬಹಳ ಸಂಕಟವನ್ನು ಅನುಭವಿಸುವನೆಂತಲೂ ಜನರು ಆತನನ್ನು ಹೀನೈಸುವರೆಂತಲೂ ಪವಿತ್ರಗ್ರಂಥವು ಏಕೆ ಹೇಳುತ್ತದೆ?


ನಂತರ ಯೇಸು, ಪೇತ್ರ, ಯಾಕೋಬ ಮತ್ತು ಯೋಹಾನ ಇತರ ಶಿಷ್ಯರ ಬಳಿಗೆ ಹೋದರು. ಆ ಶಿಷ್ಯರ ಸುತ್ತಲೂ ಅನೇಕ ಜನರು ನೆರೆದಿದ್ದರು. ಧರ್ಮೋಪದೇಶಕರು ಅವರೊಡನೆ ವಾದ ಮಾಡುತ್ತಾ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು