ಫರಿಸಾಯರು ಮತ್ತು ಹೆರೋದ್ಯರು ಯೇಸುವಿನ ಬಳಿಗೆ ಬಂದು, ಆತನಿಗೆ, “ಉಪದೇಶಕನೇ, ನೀನು ಯಥಾರ್ಥನೆಂಬುದು ನಮಗೆ ತಿಳಿದಿದೆ. ನಿನ್ನ ಬಗ್ಗೆ ಜನರು ಏನು ಯೋಚಿಸುತ್ತಾರೆಂಬುದರ ಬಗ್ಗೆ ನಿನಗೆ ಹೆದರಿಕೆಯಿಲ್ಲ. ಜನರೆಲ್ಲರೂ ನಿನಗೆ ಒಂದೇ. ಮತ್ತು ನೀನು ದೇವರ ಮಾರ್ಗವನ್ನು ಕುರಿತು ಸತ್ಯವನ್ನೇ ಉಪದೇಶಿಸುತ್ತಿರುವೆ ಎಂದು ನಮಗೆ ಗೊತ್ತಿದೆ. ಆದ್ದರಿಂದ ನಮಗೆ ಹೇಳು: ಸೀಸರನಿಗೆ ತೆರಿಗೆ ಕೊಡುವುದು ಸರಿಯೋ? ಅಥವಾ ತಪ್ಪೋ? ನಾವು ತೆರಿಗೆಗಳನ್ನು ಕೊಡಬೇಕೇ ಅಥವಾ ಕೊಡಬಾರದೇ?” ಎಂದರು.
ಯೇಸುವನ್ನು ಕುರಿತು ಯೋಚಿಸಿರಿ. ಪಾಪಪೂರಿತವಾದ ಜನರು ಆತನ ವಿರುದ್ಧವಾಗಿ ಕೆಟ್ಟದ್ದನ್ನು ಮಾಡುವಾಗ ಆತನು ತಾಳ್ಮೆಯಿಂದ ಇದ್ದನು. ಅದೇ ರೀತಿ ನೀವೂ ತಾಳ್ಮೆಯಿಂದಿರಬೇಕು ಮತ್ತು ಧೈರ್ಯಗೆಡಬಾರದು.
ಎಲೀಯನು ಈಗಾಗಲೇ ಬಂದಿದ್ದಾನೆಂದು ನಾನು ನಿಮಗೆ ಹೇಳುತ್ತೇನೆ ಮತ್ತು ಜನರು ತಮ್ಮ ಮನಸ್ಸಿಗೆ ಬಂದಂತೆ ಅವನಿಗೆ ಕೇಡನ್ನು ಮಾಡಿದರು. ಅವನಿಗೆ ಹೀಗಾಗುವುದೆಂದು ಪವಿತ್ರಗ್ರಂಥದಲ್ಲಿ ಮೊದಲೇ ಬರೆದಿತ್ತು” ಎಂದು ಉತ್ತರಿಸಿದನು.