ಮಾರ್ಕ 9:18 - ಪರಿಶುದ್ದ ಬೈಬಲ್18 ಆ ದೆವ್ವವು ಅವನ ಮೇಲೆ ಆಕ್ರಮಣ ಮಾಡಿದಾಗಲೆಲ್ಲಾ ಅವನನ್ನು ನೆಲಕ್ಕೆ ಕೆಡವುತ್ತದೆ. ನನ್ನ ಮಗನು ಬಾಯಿಂದ ನೊರೆ ಸುರಿಸುತ್ತಾ ಹಲ್ಲುಗಳನ್ನು ಕಟಕಟನೆ ಕಡಿಯುತ್ತಾನೆ ಮತ್ತು ಬಹಳ ಬಿರುಸಾಗುತ್ತಾನೆ. ಅವನನ್ನು ಆ ದೆವ್ವದಿಂದ ಬಿಡಿಸುವಂತೆ ನಾನು ನಿನ್ನ ಶಿಷ್ಯರನ್ನು ಕೇಳಿಕೊಂಡೆನು. ಆದರೆ ಅವರಿಗೆ ಸಾಧ್ಯವಾಗಲಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅದು ಎಲ್ಲಿ ಅವನ ಮೇಲೆ ಬಂದರೂ ಅವನನ್ನು ನೆಲಕ್ಕೆ ಕೆಡವುತ್ತದೆ; ಆಗ ಅವನು ನೊರೆಸುರಿಸುತ್ತಾನೆ, ಕರಕರನೆ ಹಲ್ಲು ಕಡಿಯುತ್ತಾನೆ ಮತ್ತು ಮರಗಟ್ಟಿದವನಂತೆ ಆಗುತ್ತಾನೆ. ಅದನ್ನು ಬಿಡಿಸಬೇಕೆಂದು ನಿನ್ನ ಶಿಷ್ಯರಿಗೆ ಕೇಳಿಕೊಂಡೆನು, ಆದರೆ ಅವರ ಕೈಯಿಂದ ಆಗದೆಹೋಯಿತು” ಎಂದು ಉತ್ತರ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅವನಿಗೆ ಒಂದು ಮೂಕದೆವ್ವ ಹಿಡಿದಿದೆ. ಅವನ ಮೇಲೆ ಅದು ಬಂದಾಗಲೆಲ್ಲಾ ಅವನನ್ನು ನೆಲಕ್ಕೆ ಅಪ್ಪಳಿಸುತ್ತದೆ. ಅವನು ನೊರೆಕಾರುತ್ತಾ ಹಲ್ಲು ಕಡಿದುಕೊಳ್ಳುತ್ತಾನೆ. ಆಗ ಅವನ ದೇಹವೆಲ್ಲಾ ಮರಗಟ್ಟಿದಂತಾಗುತ್ತದೆ. ಆ ದೆವ್ವವನ್ನು ಬಿಡಿಸಬೇಕೆಂದು ತಮ್ಮ ಶಿಷ್ಯರನ್ನು ಕೇಳಿಕೊಂಡೆ. ಆದರೆ, ಅದು ಅವರಿಂದಾಗಲಿಲ್ಲ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅವನಿಗೊಂದು ಮೂಗದೆವ್ವ ಹಿಡಿದದೆ; ಅದು ಎಲ್ಲಿ ಅವನ ಮೇಲೆ ಬಂದರೂ ಅವನನ್ನು ಕೆಡವುತ್ತದೆ; ಆಗ ಅವನು ನೊರೆ ಸುರಿಸುತ್ತಾ ಕರಕರನೆ ಹಲ್ಲು ಕಡಿಯುತ್ತಾ ಕುಂದಿ ಹೋಗುತ್ತಾನೆ. ಅದನ್ನು ಬಿಡಿಸಬೇಕೆಂದು ನಿನ್ನ ಶಿಷ್ಯರಿಗೆ ಹೇಳಿಕೊಂಡೆ; ಅವರ ಕೈಯಿಂದ ಆಗದೆಹೋಯಿತು ಎಂದು ಉತ್ತರ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅಶುದ್ಧಾತ್ಮವು ಅವನನ್ನು ಹಿಡಿದುಕೊಂಡಾಗಲೆಲ್ಲಾ ಅವನನ್ನು ಒದ್ದಾಡಿಸುತ್ತದೆ. ಅವನು ನೊರೆ ಕಾರುತ್ತಾ ತನ್ನ ಹಲ್ಲು ಕಡಿದು ಸೆಟೆದುಕೊಂಡು ಬೀಳುತ್ತಾನೆ. ಅದನ್ನು ಬಿಡಿಸಬೇಕೆಂದು ನಾನು ನಿನ್ನ ಶಿಷ್ಯರಿಗೆ ಹೇಳಿದೆನು. ಆದರೆ ಅದು ಅವರಿಂದ ಆಗಲಿಲ್ಲ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ತೊ ಗಿರೊ ತೆಕಾ ಅಂಗಾತ್ ಚಡಲ್ಲ್ಯಾ ತನ್ನಾ ತೆಕಾ ಜಿಮ್ನಿಕ್ ಪಾಡ್ವುತಾ, ತೊ ತೊಂಡಾತ್ನಾ ಫೆನ್ ಕಾಡ್ತಾ ಅನಿ ಕಟ್ಕಟ್ ದಾತಾ ಚಾವ್ತಾ, ತೆಚೆ ಆಂಗ್ ಶೆಡ್ದುನ್ ಘಟ್ ಹೊತಾ. ತ್ಯಾ ಗಿರ್‍ಯಾಕ್ ಕಾಡಾ ಮನುನ್ ತುಜ್ಯಾ ಶಿಸಾಕ್ನಿ ಮಿಯಾ ಸಾಂಗ್ಲೊ, ಖರೆ ತೆ ತೆಂಚೆನ್ ಹೊವ್ಕ್ ನಾ ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |