Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:25 - ಪರಿಶುದ್ದ ಬೈಬಲ್‌

25 ಅಲ್ಲಿ ನಡೆಯುತ್ತಿರುವುದನ್ನು ನೋಡಲು ಜನರೆಲ್ಲರೂ ಓಡಿಬರುತ್ತಿರುವುದನ್ನು ಕಂಡ ಯೇಸು, ಆ ದೆವ್ವಕ್ಕೆ, “ಎಲೈ ಕಿವುಡು ಮೂಕ ದೆವ್ವವೇ, ಈ ಹುಡುಗನಿಂದ ಹೊರಗೆ ಬರುವಂತೆಯೂ ಇವನೊಳಗೆ ಇನ್ನೆಂದಿಗೂ ಪ್ರವೇಶಿಸದಂತೆಯೂ ನಾನು ನಿನಗೆ ಆಜ್ಞಾಪಿಸುತ್ತೇನೆ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಗ ಯೇಸು ಜನರ ಗುಂಪು ಓಡಿಬರುವುದನ್ನು ಕಂಡು ಆ ದೆವ್ವವನ್ನು ಗದರಿಸಿ, “ಎಲೈ, ಕಿವುಡಾದ ಮೂಗದೆವ್ವವೇ, ಇವನನ್ನು ಬಿಟ್ಟು ಹೋಗು; ಇನ್ನೆಂದಿಗೂ ಇವನೊಳಗೆ ಪ್ರವೇಶಿಸಕೂಡದೆಂದು ನಾನು ನಿನಗೆ ಅಪ್ಪಣೆಕೊಡುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಜನಸಂದಣಿ ಬೆಳೆಯುತ್ತಿರುವುದನ್ನು ಕಂಡ ಯೇಸು, ಆ ದೆವ್ವವನ್ನು ಗದರಿಸಿ, “ಎಲೈ, ಕಿವುಡು ಮೂಕ ದೆವ್ವವೇ, ಇವನನ್ನು ಬಿಟ್ಟು ತೊಲಗು; ಇನ್ನೆಂದಿಗೂ ಇವನೊಳಗೆ ಪ್ರವೇಶಿಸಕೂಡದೆಂದು ನಿನಗೆ ಆಜ್ಞಾಪಿಸುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆಗ ಯೇಸು ಜನರ ಗುಂಪು ಓಡಿಬರುವದನ್ನು ಕಂಡು ಆ ದೆವ್ವವನ್ನು ಗದರಿಸಿ - ಎಲೇ, ಕಿವುಡಾದ ಮೂಗದೆವ್ವವೇ, ಇವನನ್ನು ಬಿಟ್ಟುಹೋಗು; ಇನ್ನು ಮುಂದೆ ಹಿಡಿಯಬೇಡವೆಂದು ನಾನು ನಿನಗೆ ಅಪ್ಪಣೆಕೊಡುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಜನರು ಕೂಡಿಕೊಂಡು ಓಡಿಬರುವುದನ್ನು ಯೇಸು ಕಂಡು, ಆ ಅಶುದ್ಧಾತ್ಮವನ್ನು ಗದರಿಸಿ ಅದಕ್ಕೆ, “ಮೂಕ ಮತ್ತು ಕಿವುಡಾದ ಆತ್ಮವೇ, ನೀನು ಅವನೊಳಗಿಂದ ಹೊರಗೆ ಬಾ, ಇನ್ನೆಂದಿಗೂ ಅವನೊಳಗೆ ಸೇರಬಾರದೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಲೊಕಾಂಚೊ ತಾಂಡೊ ಅಪ್ನಾಕ್ಡೆ ಯೆವ್ನ್ ಜಮ್ತಲೆ ಜೆಜುನ್ ಬಗಟ್ಲ್ಯಾನ್. ತಸೆ ಮನುನ್ ತೆನಿ ತ್ಯಾ ಗಿರ್‍ಯಾಕ್ “ಯೆ, ಬೊಲಿನಸಿ ಸರ್ಕೆ ಅನಿ ಆಯ್ಕಿನಸಿ ಸರ್ಕೆ ಕರ್‍ತಲ್ಯಾ ಗಿರ್‍ಯಾ, ಹ್ಯಾ ಪೊರಾತ್ನಾ ಭಾಯ್ರ್ ಪಡ್ ಅನಿ ಕನ್ನಾಬಿ ತೆಚ್ಯಾ ಭುತ್ತುರ್ ಜವ್ನಕೊ!” ಮನುನ್ ತಾಕಿತ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:25
17 ತಿಳಿವುಗಳ ಹೋಲಿಕೆ  

ಹೀಗೆ ಆಕೆ ಅನೇಕ ದಿನಗಳವರೆಗೆ ಮಾಡಿದಳು. ಇದರಿಂದ ಬೇಸರಗೊಂಡ ಪೌಲನು ಹಿಂತಿರುಗಿ, ಆ ಆತ್ಮಕ್ಕೆ, “ಅವಳನ್ನು ಬಿಟ್ಟು ಹೋಗಬೇಕೆಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಆಜ್ಞಾಪಿಸುತ್ತೇನೆ!” ಎಂದು ಹೇಳಿದನು. ಆ ಕೂಡಲೇ ಆ ಆತ್ಮವು ಹೊರಬಂದಿತು.


ಆ ಹುಡುಗನು ಬರುತ್ತಿದ್ದಾಗ, ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿತು. ಹುಡುಗನು ತನ್ನ ಸ್ವಾಧೀನ ಕಳೆದುಕೊಂಡನು. ಆಗ ಯೇಸು ದೆವ್ವವನ್ನು ಗದರಿಸಿ ಆ ಹುಡುಗನನ್ನು ಗುಣಪಡಿಸಿದನು. ಬಳಿಕ ಅವನನ್ನು ಅವನ ತಂದೆಗೆ ಒಪ್ಪಿಸಿಕೊಟ್ಟನು.


ಆ ಜನರು ಯೇಸುವನ್ನು ನೋಡಿದಾಗ ಬಹಳ ಆಶ್ಚರ್ಯಪಟ್ಟು ಆತನನ್ನು ಸ್ವಾಗತಿಸಲು ಆತನ ಬಳಿಗೆ ಬಂದರು.


ಯೇಸು ಬಾಲಕನಲ್ಲಿದ್ದ ದೆವ್ವಕ್ಕೆ ಬಲವಾಗಿ ಗದರಿಸಲು ದೆವ್ವವು ಅವನನ್ನು ಬಿಟ್ಟುಹೋಯಿತು. ಅವನಿಗೆ ಆ ಕ್ಷಣದಲ್ಲೇ ಗುಣವಾಯಿತು.


ಪ್ರಧಾನ ದೇವದೂತನಾದ ಮಿಕಾಯೇಲನೂ ಸಹ ಹೀಗೆ ಮಾಡಲಿಲ್ಲ. ಮೋಶೆಯ ದೇಹವು ಯಾರಿಗೆ ಸೇರಬೇಕೆಂಬುದರ ಬಗ್ಗೆ ಮಿಕಾಯೇಲನು ಸೈತಾನನ ಬಗ್ಗೆ ದೂಷಣೆ ಮಾಡಲು ಧೈರ್ಯಗೊಳ್ಳದೆ, “ಪ್ರಭುವು ನಿನ್ನನ್ನು ದಂಡಿಸುತ್ತಾನೆ” ಎಂದು ಹೇಳಿದನು.


ಒಮ್ಮೆ ಯೇಸು ಮೂಕದೆವ್ವದಿಂದ ಪೀಡಿತನಾಗಿದ್ದ ಒಬ್ಬನನ್ನು ಬಿಡಿಸುತ್ತಿದ್ದನು. ಆ ದೆವ್ವವು ಅವನನ್ನು ಬಿಟ್ಟು ಹೊರಗೆ ಬಂದಾಗ ಅವನು ಮಾತಾಡಿದನು. ಇದನ್ನು ಕಂಡ ಜನರು ಬೆರಗಾದರು.


ಅನೇಕ ಜನರೊಳಗಿಂದ ದೆವ್ವಗಳು, “ನೀನು ದೇವಕುಮಾರ” ಎಂದು ಆರ್ಭಟಿಸುತ್ತಾ ಬಿಟ್ಟುಹೋದವು. ಆದರೆ ಯೇಸು ಆ ದೆವ್ವಗಳಿಗೆ, “ಮಾತಾಡಕೂಡದೆಂದು” ಬಲವಾಗಿ ಆಜ್ಞಾಪಿಸಿದನು. ಯೇಸುವೇ “ಕ್ರಿಸ್ತ”ನೆಂದು ದೆವ್ವಗಳಿಗೆ ತಿಳಿದಿತ್ತು.


ಆದರೆ ಯೇಸು ಆ ದೆವ್ವಕ್ಕೆ, “ಸುಮ್ಮನಿರು! ಇವನನ್ನು ಬಿಟ್ಟು ಹೊರಗೆ ಬಾ!” ಎಂದು ಆಜ್ಞಾಪಿಸಿದನು. ದೆವ್ವವು ಅವನನ್ನು ಜನರೆಲ್ಲರ ಎದುರಿನಲ್ಲಿಯೇ ಕೆಡವಿ ಯಾವ ಕೇಡೂ ಮಾಡದೆ ಬಿಟ್ಟು ಹೋಯಿತು.


ಆಗ ಯೆಹೋವನ ದೂತನು ಹೇಳಿದ್ದೇನೆಂದರೆ, “ಯೆಹೋವನು ನಿನ್ನನ್ನು ಖಂಡಿಸಲಿ ಮತ್ತು ಟೀಕೆ ಮಾಡಲಿ. ಯೆಹೋವನು ತನ್ನ ವಿಶೇಷ ನಗರವನ್ನಾಗಿ ಜೆರುಸಲೇಮನ್ನು ಆರಿಸಿಕೊಂಡಿದ್ದಾನೆ. ಆ ನಗರವನ್ನು ಆತನೇ ಕಾಪಾಡಿದನು. ಬೆಂಕಿಯಿಂದ ಎಳೆದುತೆಗೆದ ಕೊಳ್ಳಿಯಂತೆ ಆತನು ಅದನ್ನು ಕಾಪಾಡಿದನು.”


ಆಗ ಕೆಲವು ಜನರು ಒಬ್ಬನನ್ನು ಯೇಸುವಿನ ಬಳಿಗೆ ತಂದರು. ಅವನಲ್ಲಿ ದೆವ್ವವಿದ್ದುದರಿಂದ ಅವನು ಕುರುಡನಾಗಿದ್ದನು ಮತ್ತು ಮೂಕನಾಗಿದ್ದನು. ಯೇಸು ಆ ಮನುಷ್ಯನನ್ನು ಗುಣಪಡಿಸಿದ್ದರಿಂದ ಮಾತನಾಡುವುದಕ್ಕೂ ನೋಡುವುದಕ್ಕೂ ಸಾಧ್ಯವಾಯಿತು.


ಆ ಹುಡುಗನ ತಂದೆಯು ಸಂತೋಷದಿಂದ, “ನಾನು ನಂಬುತ್ತೇನೆ. ಇನ್ನೂ ಹೆಚ್ಚಾಗಿ ನಂಬಲು ನನಗೆ ಸಹಾಯ ಮಾಡು” ಎಂದನು.


ಆ ದೆವ್ವವು ಅರಚಿತು. ಅದು ಆ ಹುಡುಗನನ್ನು ಮತ್ತೆ ನೆಲದ ಮೇಲೆ ಬೀಳಿಸಿ, ಒದ್ದಾಡಿಸಿ ಹೊರಬಂದಿತು. ಆ ಹುಡುಗನು ಸತ್ತವನಂತೆ ಬಿದ್ದಿದ್ದನು. ಅನೇಕ ಜನರು, “ಅವನು ಸತ್ತುಹೋದನು” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು