Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:32 - ಪರಿಶುದ್ದ ಬೈಬಲ್‌

32 ಆದರೆ ಯೇಸು ಹೇಳಿದ್ದು ಶಿಷ್ಯರಿಗೆ ಅರ್ಥವಾಗಲಿಲ್ಲ. ಮತ್ತು ಅದರ ಅರ್ಥವನ್ನು ಕೇಳುವುದಕ್ಕೂ ಅವರು ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆದರೆ ಅವರು ಆ ಮಾತನ್ನು ಗ್ರಹಿಸಲಿಲ್ಲ ಮತ್ತು ಆತನನ್ನು ಕೇಳುವುದಕ್ಕೆ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆದರೆ ಯೇಸು ಹೇಳಿದ ಈ ಮಾತುಗಳನ್ನು ಶಿಷ್ಯರು ಅರ್ಥಮಾಡಿಕೊಳ್ಳಲಿಲ್ಲ. ಅವುಗಳ ಬಗ್ಗೆ ಪ್ರಶ್ನಿಸಲು ಸಹ ಅಂಜಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅವರು ಆ ಮಾತನ್ನು ಗ್ರಹಿಸಲಿಲ್ಲ, ಆದರೆ ಆತನನ್ನು ಕೇಳುವದಕ್ಕೆ ಅಂಜಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆದರೆ ಅವರಲ್ಲಿ ಆ ಮಾತನ್ನು ಯಾರೂ ಗ್ರಹಿಸಲಿಲ್ಲ. ಯೇಸುವನ್ನು ಕೇಳುವುದಕ್ಕೂ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಖರೆ ಶಿಸಾಕ್ನಿ ತೆಚ್ಯಾ ಗೊಸ್ಟಿಯಾ ಅರ್‍ತುಚ್ ಹೊವ್ಕ್‌ನ್ಯಾತ್, ಜಾಲ್ಯಾರ್‍ಬಿ ಜೆಜುಕ್ ಹ್ಯಾ ಗೊಸ್ಟಿಯಾಂಚೊ ಅರ್ತ್‍ ಕಾಯ್ ಮನುನ್ ಇಚಾರುಕ್ ತೆಂಕಾ ಧೈರೊ ಹೊವ್ಕ್‌ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:32
12 ತಿಳಿವುಗಳ ಹೋಲಿಕೆ  

ಅಪೊಸ್ತಲರು ಇದನ್ನು ಗ್ರಹಿಸಿಕೊಳ್ಳಲು ಪ್ರಯತ್ನಿಸಿದರೂ ಅವರಿಗೆ ಸಾಧ್ಯವಾಗಲಿಲ್ಲ, ಏಕೆಂದರೆ ಅದರ ಅರ್ಥವು ಅವರಿಗೆ ಮರೆಯಾಗಿತ್ತು.


ಆದರೆ ಯೇಸುವಿನ ಈ ಮಾತುಗಳು ಶಿಷ್ಯರಿಗೆ ಅರ್ಥವಾಗಲಿಲ್ಲ. ಏಕೆಂದರೆ ಅವುಗಳ ಅರ್ಥವು ಅವರಿಗೆ ಮರೆಯಾಗಿತ್ತು. ಆದರೂ ಯೇಸು ಹೇಳಿದ್ದರ ಬಗ್ಗೆ ಆತನನ್ನು ಕೇಳುವದಕ್ಕೆ ಶಿಷ್ಯರು ಭಯಪಟ್ಟರು.


ಆದರೆ ಆತನ ಮಾತು ಅವರಿಗೆ ಅರ್ಥವಾಗಲಿಲ್ಲ.


ಶಿಷ್ಯರು ಇದರ ಬಗ್ಗೆ ತನ್ನನ್ನು ಕೇಳಬೇಕೆಂದಿದ್ದಾರೆ ಎಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು, “‘ಸ್ವಲ್ಪಕಾಲವಾದ ಬಳಿಕ ನೀವು ನನ್ನನ್ನು ಕಾಣುವುದಿಲ್ಲ. ಆದರೆ ಅನಂತರ ಸ್ವಲ್ಪಕಾಲವಾದ ಬಳಿಕ ನನ್ನನ್ನು ನೋಡುವಿರಿ’ ಎಂದು ನಾನು ಹೇಳಿದ್ದರ ಅರ್ಥವೇನೆಂದು ನೀವು ಒಬ್ಬರನ್ನೊಬ್ಬರು ಕೇಳುತ್ತಿದ್ದೀರಾ?


ಯೇಸುವಿನ ಶಿಷ್ಯರು ಆ ಸಮಯದಲ್ಲಿ ಇದನ್ನು ಅರ್ಥಮಾಡಿಕೊಳ್ಳಲಿಲ್ಲ. ಆದರೆ ಯೇಸು ಮಹಿಮಾಪದವಿಗೆ ಏರಿಹೋದ ನಂತರ, ಈ ಸಂಗತಿಗಳು ಆತನ ವಿಷಯವಾಗಿ ಬರೆಯಲ್ಪಟ್ಟಿವೆ ಎಂಬುದನ್ನು ಶಿಷ್ಯರು ಅರ್ಥಮಾಡಿಕೊಂಡರು; ಮತ್ತು ತಾವು ಆತನಿಗಾಗಿ ಮಾಡಿದ ಕಾರ್ಯಗಳನ್ನು ಜ್ಞಾಪಿಸಿಕೊಂಡರು.


ಆದ್ದರಿಂದ ಆ ಶಿಷ್ಯರು ಈ ಸಂಗತಿಗಳನ್ನು ಯಾರಿಗೂ ತಿಳಿಸಲಿಲ್ಲ. ಆದರೆ “ಸತ್ತು ಜೀವಂತವಾಗಿ ಎದ್ದುಬರುವುದು” ಎಂದರೇನು? ಎಂದು ತಮ್ಮತಮ್ಮಲ್ಲಿಯೇ ಚರ್ಚಿಸಿದರು.


ಆ ಸಮಯದಲ್ಲಿ ಆತನ ಶಿಷ್ಯರು ಹಿಂತಿರುಗಿ ಬಂದರು. ಯೇಸು ಒಬ್ಬ ಸ್ತ್ರೀಯೊಂದಿಗೆ ಮಾತಾಡುತ್ತಿರುವುದನ್ನು ನೋಡಿ ಅವರು ಆಶ್ಚರ್ಯಗೊಂಡರು. ಆದರೆ, “ನಿನಗೇನು ಬೇಕು?” ಎಂದಾಗಲಿ “ನೀನು ಆಕೆಯೊಂದಿಗೆ ಏಕೆ ಮಾತಾಡುತ್ತಿರುವೆ?” ಎಂದಾಗಲಿ ಅವರಲ್ಲಿ ಒಬ್ಬರೂ ಕೇಳಲಿಲ್ಲ.


ಬಳಿಕ ಯೇಸು ಪವಿತ್ರ ಗ್ರಂಥವನ್ನು ತನ್ನ ಶಿಷ್ಯರಿಗೆ ವಿವರಿಸಿದನು. ತನ್ನ ಬಗ್ಗೆ ಬರೆದಿರುವ ಸಂಗತಿಗಳನ್ನು ಅರ್ಥಮಾಡಿಕೊಳ್ಳಲು ಅವರಿಗೆ ಸಹಾಯ ಮಾಡಿದನು.


ನಂತರ ಹನ್ನೊಂದು ಜನ ಶಿಷ್ಯರು ಊಟ ಮಾಡುತ್ತಿರುವಾಗ, ಯೇಸು ಅವರಿಗೆ ಕಾಣಿಸಿಕೊಂಡನು. ಶಿಷ್ಯರಲ್ಲಿ ಕೊಂಚ ನಂಬಿಕೆ ಇದ್ದುದರಿಂದ ಯೇಸು ಅವರನ್ನು ಖಂಡಿಸಿದನು. ಏಕೆಂದರೆ, ಯೇಸು ಸಾವಿನಿಂದ ಎದ್ದುಬಂದಿದ್ದಾನೆಂದು ದೃಢವಾಗಿ ಹೇಳಿದ ಮಾತನ್ನು ಅವರು ನಂಬಲಿಲ್ಲ.


ಆದರೆ ಯೇಸು ತನ್ನ ಶಿಷ್ಯರ ಕಡೆಗೆ ನೋಡಿ, ಪೇತ್ರನಿಗೆ, “ಸೈತಾನನೇ, ನನ್ನಿಂದ ತೊಲಗಿಹೋಗು! ನಿನ್ನ ಆಲೋಚನೆ ಮನುಷ್ಯರದೇ ಹೊರತು ದೇವರದಲ್ಲ” ಎಂದು ಗದರಿಸಿದನು.


ಯೇಸು, “ನಿಮಗೂ ಅರ್ಥವಾಗುವುದಿಲ್ಲವೇ? ಒಬ್ಬ ವ್ಯಕ್ತಿಯ ಒಳಗೆ ಹೋಗುವ ಯಾವ ಪದಾರ್ಥವೂ ಅವನನ್ನು ಅಶುದ್ಧನನ್ನಾಗಿ ಮಾಡುವುದಿಲ್ಲ ಎಂಬುದು ನಿಮಗೆ ತಿಳಿದೇ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು