ಮಾರ್ಕ 9:43 - ಪರಿಶುದ್ದ ಬೈಬಲ್43 ನಿನ್ನ ಕೈ ನಿನ್ನನ್ನು ಪಾಪದಲ್ಲಿ ಸಿಲುಕಿಸುವುದಾದರೆ ಅದನ್ನು ಕತ್ತರಿಸಿಬಿಡು. ಎರಡು ಕೈಗಳನ್ನು ಇಟ್ಟುಕೊಂಡು, ನಂದಿಹೋಗದ ಬೆಂಕಿಯಿರುವ ನರಕಕ್ಕೆ ಹೋಗುವುದಕ್ಕಿಂತ ಅಂಗವಿಕಲನಾಗಿದ್ದು ನಿತ್ಯಜೀವವನ್ನು ಪಡೆಯುವುದೇ ಮೇಲು. ಆ ಸ್ಥಳದಲ್ಲಿ ಬೆಂಕಿ ಆರಿಹೋಗುವುದೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943-44 ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿ ಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ನಿನ್ನ ಕೈ ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿಹಾಕು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಇದಲ್ಲದೆ ನಿನ್ನ ಕೈ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವದಾದರೆ ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿದ್ದು ಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವದಕ್ಕಿಂತ ಕೈಕಳಕೊಂಡವನಾಗಿ ಜೀವದಲ್ಲಿ ಸೇರುವದು ನಿನಗೆ ಉತ್ತಮ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ನಿಮ್ಮ ಕೈ ನಿಮ್ಮ ಪಾಪಕ್ಕೆ ಕಾರಣವಾದರೆ ಅದನ್ನು ಕಡಿದುಹಾಕಿರಿ. ಎರಡು ಕೈಯುಳ್ಳವರಾಗಿ ಎಂದಿಗೂ ಆರದ ಬೆಂಕಿಯ ನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಅಂಗಹೀನರಾಗಿ ನಿತ್ಯಜೀವನವನ್ನು ಸೇರುವುದು ನಿಮಗೆ ಲೇಸು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್43 ತುಜೊ ಹಾತ್ ತುಜೊ ವಿಶ್ವಾಸ್ ಕಳ್ದುನ್ ಘೆವ್ಕ್ ಕಾರನ್ ಹೊತಾ ಜಾಲ್ಯಾರ್, ತೊ ಕಾತ್ರುನ್ ಕಾಡುನ್ ಸೊಡ್, ದೊನ್ ಹಾತಾ ಘೆವ್ನ್ ಕನ್ನಾಚ್ ಇಜಿನಸಲ್ಲಿ ಆಗ್ ಹೊತ್ತ್ಯಾ ನರ್ಕಾತ್ ಜಾತಲ್ಯಾಚ್ಯಾನ್ಕಿ, ಎಕ್ ಹಾತ್ ನಸ್ತಾನಾ ನಿರಂತರ್ ಜಿವನಾಕ್ ಜಾತಲೆ ಕವ್ಡೆಕಿ ಬರೆ. ಅಧ್ಯಾಯವನ್ನು ನೋಡಿ |
ನಮ್ಮ ಸುತ್ತಲೂ ನಂಬಿಕೆಯುಳ್ಳ ಅನೇಕ ಜನರಿದ್ದಾರೆ. ನಂಬಿಕೆ ಎಂದರೇನೆಂದು ಅವರ ಜೀವಿತಗಳೇ ಸಾಕ್ಷಿ ಹೇಳುತ್ತವೆ. ಆದ್ದರಿಂದ ನಾವು ಅವರಂತಿರಬೇಕು. ನಮ್ಮ ಮುಂದಿರುವ ಗುರಿಯನ್ನು ಮುಟ್ಟಲು ಓಡಬೇಕು ಮತ್ತು ನಮ್ಮ ಪ್ರಯತ್ನವನ್ನು ನಿಲ್ಲಿಸಬಾರದು. ನಮ್ಮನ್ನು ತಡೆಯುವ ಎಲ್ಲಾ ವಿಷಯಗಳನ್ನೂ ನಮ್ಮ ಜೀವಿತದಿಂದ ತೆಗೆದುಹಾಕಬೇಕು. ನಮ್ಮನ್ನು ಸುಲಭವಾಗಿ ಹಿಡಿದುಕೊಳ್ಳುವ ಪಾಪದಿಂದ ಬಿಡಿಸಿಕೊಳ್ಳಬೇಕು.
ಯೆಹೋವನ ಮನುಷ್ಯರಾಗಿರಿ, ನಿಮ್ಮ ಹೃದಯ ಪರಿವರ್ತನೆ ಮಾಡಿಕೊಳ್ಳಿರಿ. ಯೆಹೂದದ ಜನಗಳೇ, ಜೆರುಸಲೇಮಿನ ಜನರೇ, ನೀವು ಬದಲಾಗದಿದ್ದರೆ ನನಗೆ ವಿಪರೀತ ಕೋಪ ಬರುವುದು. ನನ್ನ ಕೋಪವು ಬೆಂಕಿಯ ಜ್ವಾಲೆಯಂತೆ ಭರದಿಂದ ಹಬ್ಬುವದು. ನನ್ನ ಕೋಪವು ನಿಮ್ಮನ್ನು ಸುಟ್ಟು ಬೂದಿ ಮಾಡುವುದು. ಯಾರಿಂದಲೂ ಆ ಬೆಕಿಯನ್ನು ಆರಿಸುವುದು ಸಾಧ್ಯವಾಗುವದಿಲ್ಲ. ಇದೆಲ್ಲ ಏಕೆ ನಡೆಯುವುದು? ನೀವು ಮಾಡಿದ ದುಷ್ಕೃತ್ಯಗಳಿಂದಲೇ.”
ಆದರೆ ತೆರಿಗೆ ವಸೂಲಿಗಾರರನ್ನು ನಾವೇಕೆ ಕೋಪಗೊಳಿಸಬೇಕು? ನೀನು ತೆರಿಗೆಯನ್ನು ಕೊಡು. ಸರೋವರಕ್ಕೆ ಹೋಗಿ ಮೀನನ್ನು ಹಿಡಿ. ನಿನಗೆ ಸಿಕ್ಕಿದ ಮೊದಲನೇ ಮೀನಿನ ಬಾಯನ್ನು ತೆರೆ, ಅದರ ಬಾಯೊಳಗೆ ವಾರ್ಷಿಕ ತೆರಿಗೆಗೆ ಬೇಕಾದ ಒಂದು ನಾಣ್ಯವನ್ನು ಕಾಣುವೆ. ಅದನ್ನು ತೆಗೆದುಕೊಂಡು ಬಂದು, ತೆರಿಗೆ ವಸೂಲಿ ಮಾಡುವವರಿಗೆ ಕೊಡು. ಅದರಿಂದ ನನ್ನ ಮತ್ತು ನಿನ್ನ ತೆರಿಗೆಯನ್ನು ಕೊಟ್ಟಂತಾಗುವುದು” ಎಂದು ಹೇಳಿದನು.