Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:44 - ಪರಿಶುದ್ದ ಬೈಬಲ್‌

44

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಎರಡು ಕೈಗಳಿದ್ದು ನರಕದ ಆರದ ಬೆಂಕಿಗೆ ಗುರಿಯಾಗುವುದಕ್ಕಿಂತ ಅಂಗಹೀನನಾಗಿ ಅಮರಜೀವವನ್ನು ಪಡೆಯುವುದೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ನರಕದಲ್ಲಿ, “ ‘ಅವರನ್ನು ಕಡಿಯುವ ಹುಳ ಸಾಯುವುದಿಲ್ಲ ಮತ್ತು ಬೆಂಕಿಯು ಆರುವುದಿಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ಉಲ್ಲ್ಯಾ ಗ್ರಿಕ್ ಪ್ರತಿಯಾತ್ನಿ ಚಾಳಿಸಾರ್ ಚಾರ್ವೆವೆಚಿ ಗೊಸ್ಟ್ ಹಾಯ್, ತೆ ಚಾಳಿಸಾರ್ ಆಟ್ವೆಚಿ ಗೊಸ್ಟ್ ಅಸಲ್ಲ್ಯಾ ಸರ್ಕೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:44
13 ತಿಳಿವುಗಳ ಹೋಲಿಕೆ  

ನಿನ್ನ ಕೈ ನಿನ್ನನ್ನು ಪಾಪದಲ್ಲಿ ಸಿಲುಕಿಸುವುದಾದರೆ ಅದನ್ನು ಕತ್ತರಿಸಿಬಿಡು. ಎರಡು ಕೈಗಳನ್ನು ಇಟ್ಟುಕೊಂಡು, ನಂದಿಹೋಗದ ಬೆಂಕಿಯಿರುವ ನರಕಕ್ಕೆ ಹೋಗುವುದಕ್ಕಿಂತ ಅಂಗವಿಕಲನಾಗಿದ್ದು ನಿತ್ಯಜೀವವನ್ನು ಪಡೆಯುವುದೇ ಮೇಲು. ಆ ಸ್ಥಳದಲ್ಲಿ ಬೆಂಕಿ ಆರಿಹೋಗುವುದೇ ಇಲ್ಲ.


ನಿನ್ನ ಕಾಲು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ, ಅದನ್ನು ಕತ್ತರಿಸಿಬಿಡು. ಎರಡು ಕಾಲುಗಳನ್ನು ಇಟ್ಟುಕೊಂಡು ನರಕದೊಳಗೆ ಎಸೆಯಲ್ಪಡುವುದಕ್ಕಿಂತ ಕುಂಟನಾಗಿರುವುದೇ ಮೇಲು.


ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಕೆಟ್ಟಕಾರ್ಯಗಳನ್ನು ಮಾಡುವವರು ಹೆದರಿಕೆಯಿಂದ ನಡುಗುವರು. ಜನರು, “ನಮ್ಮಲ್ಲಿ ಯಾರು ನಾಶಮಾಡುವ ಈ ಬೆಂಕಿಯ ಜೊತೆ ಜೀವಿಸಬಲ್ಲರು? ನಿತ್ಯಕಾಲಕ್ಕೂ ಸುಡುವ ಈ ಬೆಂಕಿಯ ಬಳಿಯಲ್ಲಿ ಯಾರು ವಾಸಮಾಡಬಲ್ಲರು?” ಎಂದು ಹೇಳುವರು.


“ಅವರು ನನ್ನ ಪವಿತ್ರ ಪಟ್ಟಣದಲ್ಲಿ ವಾಸಿಸುವರು. ಅವರು ಪಟ್ಟಣದಿಂದ ಹೊರಗೆ ಹೋದರೆ ನನಗೆ ವಿರುದ್ಧವಾಗಿ ಪಾಪಮಾಡಿದವರ ಹೆಣಗಳನ್ನು ನೋಡುವರು. ಅವರ ಹೆಣಗಳೊಳಗೆ ಸಾಯದ ಹುಳಗಳಿರುವವು. ಬೆಂಕಿಯು ಆ ಹೆಣಗಳನ್ನು ಸುಟ್ಟುಬಿಡುವುದು. ಆ ಬೆಂಕಿಯು ಆರುವದೇ ಇಲ್ಲ. ಅವು ಜನರ ಮುಂದೆ ಅಸಹ್ಯವಾಗಿರುವವು.”


ಆತನು ಕಾಳನ್ನು ಸ್ವಚ್ಛಗೊಳಿಸಲು ಸಿದ್ಧನಾಗಿದ್ದಾನೆ. ಆತನು ಕಾಳನ್ನು ಹೊಟ್ಟಿನಿಂದ ಬೇರ್ಪಡಿಸಿ ಒಳ್ಳೆಯ ಕಾಳುಗಳನ್ನು ಕಣಜದಲ್ಲಿ ತುಂಬಿಸಿ ಹೊಟ್ಟನ್ನು ನಂದಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವನು” ಎಂದು ಹೇಳಿದನು.


“ಆಮೇಲೆ ರಾಜನು ತನ್ನ ಎಡಗಡೆಯಿದ್ದ ಜನರಿಗೆ, ‘ನನ್ನಿಂದ ತೊಲಗಿಹೋಗಿರಿ, ನಿಮಗೆ ಶಿಕ್ಷೆಯಾಗಬೇಕೆಂದು ದೇವರು ತೀರ್ಮಾನಿಸಿದ್ದಾನೆ. ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


“ಆಗ ಕೆಟ್ಟಜನರು ಅಲ್ಲಿಂದ ಹೊರಟುಹೋಗುವರು. ಅವರಿಗೆ ನಿತ್ಯದಂಡನೆಯಾಗುವುದು. ಒಳ್ಳೆಯ ಜನರಾದರೋ ನಿತ್ಯಜೀವವನ್ನು ಹೊಂದುವರು.”


ನರಕದಲ್ಲಿ ಮನುಷ್ಯರನ್ನು ತಿನ್ನುವ ಹುಳಗಳು ಸಾಯುವುದೇ ಇಲ್ಲ ಮತ್ತು ಬೆಂಕಿಯು ಆರುವುದೇ ಇಲ್ಲ.


ಅವರಿಗೆ ನಿತ್ಯವಾದ ದಂಡನೆಯಾಗುವುದು. ಪ್ರಭುವಿನೊಂದಿಗಿರಲು ಅವರಿಗೆ ಅವಕಾಶ ದೊರೆಯುವುದಿಲ್ಲ. ಆತನು ತನ್ನ ಮಹಾಶಕ್ತಿಯಿಂದ ಅವರನ್ನು ದೂರವಿರಿಸುತ್ತಾನೆ.


ಅವನು ದೇವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಯುತ್ತಾನೆ. ದೇವರ ಕೋಪವೆಂಬ ಬಟ್ಟಲಿನಲ್ಲಿ ಈ ದ್ರಾಕ್ಷಾರಸವನ್ನು ಅದರ ಪೂರ್ಣಶಕ್ತಿಯ ಸಮೇತವಾಗಿ ತಯಾರಿಸಲಾಗಿದೆ. ಅವನನ್ನು ಪರಿಶುದ್ಧ ದೇವದೂತರ ಮತ್ತು ಕುರಿಮರಿಯಾದಾತನ ಮುಂದೆ ಉರಿಯುವ ಗಂಧಕದಿಂದ ಯಾತನೆಪಡಿಸಲಾಗುವುದು.


ಸೈತಾನನನ್ನು (ಇವನೇ ಜನರನ್ನು ಮೋಸಗೊಳಿಸಿದವನು.) ಬೆಂಕಿಗಂಧಕಗಳು ಉರಿಯುತ್ತಿದ್ದ ಕೆರೆಗೆ ಎಸೆಯಲಾಯಿತು. ಅಲ್ಲಿ ಮೃಗವೂ ಇತ್ತು, ಸುಳ್ಳುಪ್ರವಾದಿಗಳೂ ಇದ್ದರು. ಅಲ್ಲಿ ಅವರು ಹಗಲಿರುಳು ಎಂದೆಂದಿಗೂ ಹಿಂಸೆ ಅನುಭವಿಸುವರು.


ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರು ಬರೆಯಲ್ಪಟ್ಟಿಲ್ಲವೋ ಆ ವ್ಯಕ್ತಿಯನ್ನು ಬೆಂಕಿಯ ಕೆರೆಗೆ ಎಸೆಯಲಾಯಿತು.


ಆದರೆ ಹೇಡಿಗಳಿಗೆ, ನಂಬಿಕೆಯಿಲ್ಲದವರಿಗೆ, ಅಸಹ್ಯಕೃತ್ಯ ಮಾಡುವವರಿಗೆ, ಕೊಲೆಗಾರರಿಗೆ, ಲೈಂಗಿಕ ಪಾಪಮಾಡುವವರಿಗೆ, ಮಾಟಮಂತ್ರಗಾರರಿಗೆ, ವಿಗ್ರಹಾರಾಧಕರಿಗೆ, ಸುಳ್ಳುಗಾರರಿಗೆ ಸಿಕ್ಕುವ ಸ್ಥಳ ಬೆಂಕಿಗಂಧಕಗಳು ಉರಿಯುವ ಕೆರೆಯೇ. ಇದು ಎರಡನೆಯ ಮರಣವಾಗಿರುತ್ತದೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು