Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:7 - ಪರಿಶುದ್ದ ಬೈಬಲ್‌

7 ಆಗ ಮೋಡವು ಬಂದು, ಅವರನ್ನು ಮುಸುಕಿತು. ಆ ಮೋಡದ ಒಳಗಿಂದ ಒಂದು ಧ್ವನಿಯು, “ಈತನು ನನ್ನ ಪ್ರಿಯ ಮಗನು. ಈತನಿಗೆ ವಿಧೇಯರಾಗಿ” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಷ್ಟರಲ್ಲಿ ಒಂದು ಮೋಡವು ಬಂದು ಅವರ ಮೇಲೆ ಕವಿಯಿತು. ಆ ಮೋಡದೊಳಗಿನಿಂದ, “ಈತನು ನನ್ನ ಪ್ರಿಯ ಕುಮಾರನು; ಈತನ ಮಾತನ್ನು ಕೇಳಿರಿ” ಎಂದು ಧ್ವನಿ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅಷ್ಟರಲ್ಲಿ ಮೇಘವೊಂದು ಅವರನ್ನು ಆವರಿಸಿತು. ಅದರೊಳಗಿಂದ, “ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ಈತನ ಮಾತಿಗೆ ಕಿವಿಗೊಡಿ,” ಎಂಬ ವಾಣಿ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅಷ್ಟರಲ್ಲಿ ಮೋಡವು ಬಂದು ಅವರ ಮೇಲೆ ಕವಿಯಿತು. ಆ ಮೋಡದೊಳಗಿಂದ - ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಆಕಾಶವಾಣಿ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಅಲ್ಲಿ ಮೋಡವು ಅವರ ಮೇಲೆ ಕವಿದುಕೊಂಡಿತು. ಮೋಡದೊಳಗಿಂದ, “ಈತನು ಪ್ರಿಯನಾಗಿರುವ ನನ್ನ ಮಗನು, ಈತನ ಮಾತನ್ನು ಕೇಳಿರಿ,” ಎಂಬ ಧ್ವನಿಯು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತನ್ನಾ ಎಕ್ ಮೊಡ್ ಯೆಲೆ ಅನಿ ತೆಚ್ಯಾ ಸಾವ್ಳಿನ್ ತೆಂಕಾ ಧಾಪ್ಲಿನ್, ಅನಿ ಮೊಡಾತ್ನಾ “ಹ್ಯೊ, ಮಾಜೊ ಲೈ ಅಪುರ್‍ಬಾಯೆಚೊ ಲೆಕ್, ತೆನಿ ಸಾಂಗಟಲ್ಲೆ ಆಯ್ಕಾ!” ಮನುನ್ ಧನ್ ಅಯ್ಕೊ ಯೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:7
41 ತಿಳಿವುಗಳ ಹೋಲಿಕೆ  

ಆತನು ಅತ್ಯಂತ ಪ್ರಭಾವವುಳ್ಳ (ದೇವರ) ಸ್ವರವನ್ನು ಕೇಳಿದನು. ಆಗಲೇ ಆತನು ತಂದೆಯಾದ ದೇವರಿಂದ ಮಾನವನ್ನೂ ಪ್ರಭಾವವನ್ನೂ ಹೊಂದಿಕೊಂಡನು. ಆ ಸ್ವರವು, “ಈತನು ನನ್ನ ಪ್ರಿಯ ಮಗ. ಈತನನ್ನು ಬಹಳವಾಗಿ ಮೆಚ್ಚಿಕೊಂಡಿದ್ದೇನೆ” ಎಂದು ಹೇಳಿತು.


ಆಗ ಪರಲೋಕದಿಂದ ಧ್ವನಿಯೊಂದು ಹೊರಟು, “ಈತನೇ (ಯೇಸು) ನನ್ನ ಪ್ರಿಯ ಮಗನು. ಈತನನ್ನು ನಾನು ಬಹಳ ಮೆಚ್ಚಿದ್ದೇನೆ” ಎಂದು ಹೇಳಿತು.


ಆಗ ಪರಲೋಕದಿಂದ ಧ್ವನಿಯೊಂದು ಹೊರಟು, “ನೀನೇ ನನ್ನ ಪ್ರಿಯ ಮಗನು. ನಾನು ನಿನ್ನನ್ನು ಮೆಚ್ಚಿಕೊಂಡಿದ್ದೇನೆ” ಎಂದು ಹೇಳಿತು.


ಇಗೋ, ಯೇಸು ಮೋಡಗಳ ಸಂಗಡ ಬರುತ್ತಿದ್ದಾನೆ. ಪ್ರತಿಯೊಬ್ಬರು ಆತನನ್ನು ನೋಡುವರು, ಆತನನ್ನು ಇರಿದವರು ಸಹ ನೋಡುವರು. ಆತನನ್ನು ಕಂಡು ಲೋಕದ ಜನರೆಲ್ಲರೂ ಎದೆಬಡಿದುಕೊಂಡು ಗೋಳಾಡುವರು. ಹೌದು, ಇದು ಸಂಭವಿಸುತ್ತದೆ! ಆಮೆನ್.


ಆದ್ದರಿಂದ ನಮಗೆ ಬೋಧಿಸಲ್ಪಟ್ಟ ಸಂಗತಿಗಳನ್ನು ಬಹಳ ಎಚ್ಚರಿಕೆಯಿಂದ ಅನುಸರಿಸಬೇಕು. ಸತ್ಯಮಾರ್ಗವನ್ನು ಬಿಟ್ಟು ತಪ್ಪಿಹೋಗದಂತೆ ಎಚ್ಚರಿಕೆಯಿಂದಿರಬೇಕು.


ಆದರೆ ಆತನೇ ಕ್ರಿಸ್ತನೆಂದೂ ದೇವರ ಮಗನೆಂದೂ ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕವಾಗಿ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದದೆ.


ನಾವು ನಿನ್ನಲ್ಲಿ ನಂಬಿಕೆ ಇಡುತ್ತೇವೆ. ನೀನು ದೇವರಿಂದ ಬಂದ ಪರಿಶುದ್ಧನೆಂದು ನಮಗೆ ಗೊತ್ತಿದೆ” ಎಂದು ಉತ್ತರಕೊಟ್ಟನು.


ಆದ್ದರಿಂದ ಆತನೇ (ಯೇಸುವೇ) ದೇವರ ಮಗನೆಂದು ನಾನು ಜನರಿಗೆ ತಿಳಿಸುವೆನು” ಎಂದನು.


ದೇವರ ಮಗನು ಬಂದಿದ್ದಾನೆಂಬುದು ನಮಗೆ ತಿಳಿದಿದೆ. ದೇವರ ಮಗನು ನಮಗೆ ತಿಳುವಳಿಕೆಯನ್ನು ದಯಪಾಲಿಸಿರುವನು. ಈಗ ನಾವು ದೇವರನ್ನು ತಿಳಿದುಕೊಳ್ಳಬಲ್ಲೆವು. ಸತ್ಯವಾಗಿರುವಾತನು ದೇವರೇ. ಸತ್ಯ ದೇವರಲ್ಲಿಯೂ ಮತ್ತು ಆತನ ಮಗನಾದ ಯೇಸು ಕ್ರಿಸ್ತನಲ್ಲಿಯೂ ನಾವು ನೆಲೆಸಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ಅವರು ಪ್ರಯಾಣ ಮಾಡುತ್ತಾ ನೀರಿದ್ದ ಒಂದು ಸ್ಥಳಕ್ಕೆ ಬಂದಾಗ ಅಧಿಕಾರಿಯು, “ಇಗೋ! ಇಲ್ಲಿ ನೀರಿದೆ! ನಾನು ದೀಕ್ಷಾಸ್ನಾನ ತೆಗೆದುಕೊಳ್ಳಲು ಏನಾದರೂ ಅಡ್ಡಿಯಿದೆಯೇ?” ಎಂದು ಫಿಲಿಪ್ಪನನ್ನು ಕೇಳಿದನು.


“ಈ ಮೋಶೆಯೇ ಯೆಹೂದ್ಯ ಜನರಿಗೆ, ‘ದೇವರು ನಿಮಗೊಬ್ಬ ಪ್ರವಾದಿಯನ್ನು ಕೊಡುವನು. ಆ ಪ್ರವಾದಿಯು ನಿಮ್ಮ ಸ್ವಜನರ ಮಧ್ಯದಿಂದಲೇ ಬರುವನು. ಅವನು ನನ್ನಂತೆಯೇ ಇರುವನು’ ಎಂದು ಹೇಳಿದನು.


ಯೇಸು ಈ ಸಂಗತಿಗಳನ್ನು ಅಪೊಸ್ತಲರಿಗೆ ಹೇಳಿದ ಮೇಲೆ ಅಪೊಸ್ತಲರು ನೋಡುತ್ತಿರುವಾಗಲೇ ಆಕಾಶಕ್ಕೆ ಎತ್ತಲ್ಪಟ್ಟನು. ಮೋಡವು ಆತನನ್ನು ಕವಿದುಕೊಂಡದ್ದರಿಂದ ಅವರು ಆತನನ್ನು ಕಾಣಲಾಗಲಿಲ್ಲ.


ಯೆಹೂದ್ಯರು, “ನಮಗೊಂದು ನಿಯಮವಿದೆ. ಅದರ ಪ್ರಕಾರ ಇವನಿಗೆ ಮರಣದಂಡನೆ ಆಗಲೇಬೇಕು. ಯಾಕೆಂದರೆ ಇವನು ತನ್ನನ್ನು ದೇವರ ಮಗನೆಂದು ಹೇಳಿಕೊಂಡಿದ್ದಾನೆ” ಎಂದು ಉತ್ತರಕೊಟ್ಟರು.


ಯೆಹೂದ್ಯನಾಯಕರು ಆ ಮನುಷ್ಯನನ್ನು ಹೊರಗಟ್ಟಿದ್ದು ಯೇಸುವಿಗೆ ತಿಳಿಯಿತು. ಯೇಸು ಆ ಮನುಷ್ಯನನ್ನು ಕಂಡು, “ನೀನು ಮನುಷ್ಯಕುಮಾರನಲ್ಲಿ ನಂಬಿಕೆಯಿಡುವಿಯಾ?” ಎಂದು ಕೇಳಿದನು.


ಅಲ್ಲದೆ ನನ್ನನ್ನು ಕಳುಹಿಸಿದ ತಂದೆಯು ನನ್ನ ಬಗ್ಗೆ ತಾನೇ ಸಾಕ್ಷಿ ಕೊಟ್ಟಿದ್ದಾನೆ. ಆದರೆ ನೀವು ಆತನ ಧ್ವನಿಯನ್ನು ಎಂದೂ ಕೇಳಿಲ್ಲ. ಆತನು ಹೇಗಿದ್ದಾನೆ ಎಂಬುದನ್ನು ನೀವು ಎಂದೂ ಕಂಡಿಲ್ಲ.


ಯೇಸು ಸಬ್ಬತ್ತನ್ನು ಉಲ್ಲಂಘಿಸಿದ್ದಲ್ಲದೆ ದೇವರನ್ನು ತನ್ನ ತಂದೆಯೆಂದು ಹೇಳಿಕೊಂಡು ತನ್ನನ್ನು ದೇವರಿಗೆ ಸರಿಸಮಾನನನ್ನಾಗಿ ಮಾಡಿಕೊಳ್ಳುತ್ತಿದ್ದಾನೆಂದು ಯೆಹೂದ್ಯರು ಆತನನ್ನು ಕೊಲ್ಲಲು ಮತ್ತಷ್ಟು ಪ್ರಯತ್ನಿಸಿದರು.


ಆಗ ನತಾನಿಯೇಲನು ಯೇಸುವಿಗೆ, “ಗುರುವೇ, ನೀನೇ ದೇವರ ಮಗನು. ನೀನೇ ಇಸ್ರೇಲರ ರಾಜ” ಎಂದು ಹೇಳಿದನು.


ಯೇಸುವನ್ನು ಕಾಯುತ್ತಿದ್ದ ಸೇನಾಧಿಪತಿ ಮತ್ತು ಸೈನಿಕರು ಭೂಕಂಪವನ್ನು ಮತ್ತು ನಡೆದದ್ದನ್ನು ಕಂಡು ಬಹಳವಾಗಿ ಹೆದರಿ, “ಈತನು ನಿಜವಾಗಿಯೂ ದೇವರ ಮಗನಾಗಿದ್ದನು!” ಎಂದು ಹೇಳಿದರು.


ಇವನು ದೇವರನ್ನು ನಂಬಿದ್ದನು. ಈಗ ದೇವರಿಗೆ ನಿಜವಾಗಿಯೂ ಇವನು ಬೇಕಿದ್ದರೆ, ದೇವರೇ ಇವನನ್ನು ಕಾಪಾಡಲಿ. ‘ನಾನು ದೇವರ ಮಗನು’ ಎಂದು ಇವನೇ ಹೇಳಿಕೊಂಡನಲ್ಲಾ” ಎಂದು ಅವರು ಹೇಳಿದರು.


“ನನಗಾದ ರಾತ್ರಿಯ ದರ್ಶನದಲ್ಲಿ, ನನ್ನ ಎದುರಿಗೆ ಮನುಷ್ಯಕುಮಾರನಂತಿರುವವನನ್ನು ಕಂಡೆ. ಆತನು ಆಕಾಶದಲ್ಲಿ ಮೇಘಗಳ ಮೇಲೆ ಬರುತ್ತಿದ್ದನು. ಅವನು ಆ ಪುರಾತನ ರಾಜನ ಸಮೀಪಕ್ಕೆ ಬಂದನು; ಅವನನ್ನು ಆ ಮಹಾವೃದ್ಧನ ಸನ್ನಿಧಿಗೆ ತರಲಾಯಿತು.


ಕಾರ್ಮೋಡಗಳು ಆತನನ್ನು ಕವಿದುಕೊಂಡಿವೆ. ನೀತಿಯೂ ನ್ಯಾಯವೂ ಆತನ ರಾಜ್ಯದ ಬಲವಾಗಿವೆ.


ಯೆಹೋವನ ಒಡಂಬಡಿಕೆಯ ಕುರಿತು ಹೇಳುತ್ತಿರುವೆ. ಆತನು ನನಗೆ, “ಈ ಹೊತ್ತು ನಾನು ನಿನಗೆ ತಂದೆಯಾದೆ! ನೀನೇ ನನ್ನ ಮಗನು.


ತರುವಾಯ ಮೋಡವು ದೇವದರ್ಶನಗುಡಾರವನ್ನು ಕವಿಯಿತು. ಯೆಹೋವನ ಮಹಿಮೆಯು ಪವಿತ್ರಗುಡಾರವನ್ನು ತುಂಬಿಕೊಂಡಿತು.


ಸೀನಾಯಿ ಬೆಟ್ಟದ ಮೇಲೆ ಯೆಹೋವನ ಮಹಿಮೆಯು ಇಳಿದು ಬಂದಿತು. ಮೋಡವು ಆರುದಿನಗಳವರೆಗೆ ಬೆಟ್ಟವನ್ನು ಕವಿದುಕೊಂಡಿತ್ತು. ಏಳನೆಯ ದಿನದಲ್ಲಿ, ಮೋಡದೊಳಗಿಂದ ಯೆಹೋವನು ಮೋಶೆಯೊಡನೆ ಮಾತಾಡಿದನು.


ಪೇತ್ರನಿಗೆ ಏನು ಹೇಳಬೇಕೋ ತಿಳಿಯಲಿಲ್ಲ. ಏಕೆಂದರೆ ಅವನು ಮತ್ತು ಉಳಿದ ಇನ್ನಿಬ್ಬರು ಶಿಷ್ಯರು ಬಹಳ ಭಯಗೊಂಡಿದ್ದರು.


ಆಗ ಪೇತ್ರ, ಯಾಕೋಬ ಮತ್ತು ಯೋಹಾನರು ಕಣ್ಣೆತ್ತಿ ನೋಡಿದಾಗ ಯೇಸು ಒಬ್ಬನೇ ಅಲ್ಲಿದ್ದನು.


ಪವಿತ್ರಾತ್ಮನು ಆತನ ಮೇಲೆ ಪಾರಿವಾಳದ ರೂಪದಲ್ಲಿ ಇಳಿದು ಬಂದನು. ಆ ಕೂಡಲೇ, ಪರಲೋಕದಿಂದ ಧ್ವನಿಯೊಂದು ಹೊರಟು, “ನೀನು ನನ್ನ ಪ್ರಿಯ ಮಗನು, ನಾನು ನಿನನ್ನು ಮೆಚ್ಚಿಕೊಂಡಿದ್ದೇನೆ” ಎಂದು ಹೇಳಿತು.


ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೊ!” ಎಂದು ಹೇಳಿದನು. ಆಗ ಪರಲೋಕದಿಂದ, “ನನ್ನ ಹೆಸರನ್ನು ಮಹಿಮೆಪಡಿಸಿಕೊಂಡಿದ್ದೇನೆ. ನಾನು ಮತ್ತೆ ಮಹಿಮೆಪಡಿಸಿಕೊಳ್ಳುವೆನು” ಎಂಬ ವಾಣಿ ಆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು