ಯೆಹೋವನೇ, ನೀನು ಯೆಹೂದ ಜನಾಂಗವನ್ನು ಸಂಪೂರ್ಣವಾಗಿ ತಿರಸ್ಕರಿಸಿರುವೆಯಾ? ಯೆಹೋವನೇ, ನೀನು ಚೀಯೋನನ್ನು ದ್ವೇಷಿಸುವೆಯಾ? ನಾವು ಪುನಃ ಗುಣಹೊಂದಲಾರದ ಹಾಗೆ ನಮ್ಮನ್ನು ಹೊಡೆದು ಗಾಯಗೊಳಿಸಿರುವೆಯಲ್ಲ. ನೀನು ಹೀಗೇಕೆ ಮಾಡಿದೆ? ನಾವು ನೆಮ್ಮದಿಯನ್ನು ನಿರೀಕ್ಷಿಸಿದೆವು, ಆದರೆ ಒಳ್ಳೆಯದೇನೂ ಆಗಲಿಲ್ಲ. ನಾವು ಕ್ಷೇಮವನ್ನು ಎದುರುನೋಡುತ್ತಿದ್ದೆವು. ಆದರೆ ಕೇವಲ ಭಯ ನಮ್ಮೆದುರಿಗೆ ಬಂದಿತು.
ಅವನು ಶೀಲೋವನ್ನು ತಲುಪಿದಾಗ ಏಲಿಯು ಪೀಠದ ಮೇಲೆ ಕುಳಿತಿದ್ದನು. ದೇವರ ಪವಿತ್ರ ಪೆಟ್ಟಿಗೆಗೆ ಏನಾಯಿತೋ ಎಂದು ಚಿಂತಿಸುತ್ತಾ ಏಲಿಯು ನಗರದ್ವಾರದಲ್ಲಿ ಕುರ್ಚಿಯ ಮೇಲೆ ಕಾಯುತ್ತಾ ಕುಳಿತಿದ್ದನು. ಆಗ ಬೆನ್ಯಾಮೀನ್ಯನು ಶೀಲೋವನ್ನು ಪ್ರವೇಶಿಸಿ ಅಲ್ಲಿನ ಕೆಟ್ಟ ಸುದ್ದಿಯನ್ನು ಹೇಳಿದನು. ನಗರದ ಜನರೆಲ್ಲರು ಜೋರಾಗಿ ಗೋಳಾಡಿದರು.