ಮೀಕ 1:13 - ಪರಿಶುದ್ದ ಬೈಬಲ್13 ಲಾಕೀಷಿನ ಸ್ತ್ರೀಯೇ, ವೇಗವಾಗಿ ಓಡುವ ಕುದುರೆಯನ್ನು ನಿನ್ನ ಬಂಡಿಗೆ ಬಿಗಿ. ಚೀಯೋನಿನ ಪಾಪವು ಲಾಕೀಷಿನಲ್ಲಿ ಪ್ರಾರಂಭವಾಯಿತು. ಯಾಕೆಂದರೆ ನೀನು ಇಸ್ರೇಲಿನ ಪಾಪವನ್ನು ಅನುಸರಿಸಿದಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಲಾಕೀಷಿನವರೇ ಅಶ್ವಗಳನ್ನು ರಥಕ್ಕೆ ಕಟ್ಟಿರಿ. ನಿಮ್ಮ ಊರೇ ಚೀಯೋನ್ ನಗರಿಯ ಪಾಪಕ್ಕೆ ಮೂಲ, ಹೌದು ಇಸ್ರಾಯೇಲಿನ ದ್ರೋಹಗಳು ನಿಮ್ಮಲ್ಲಿಯೇ ಹುಟ್ಟಿಬಂದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಲಾಕೀಷಿನ ನಿವಾಸಿಗಳೇ, ನಿಮ್ಮ ಕುದುರೆಗಳನ್ನು ರಥಕ್ಕೆ ಹೂಡಿರಿ. ನಿಮ್ಮ ಊರೇ ಸಿಯೋನ್ ನಗರದ ಪಾಪಕ್ಕೆ ಮೂಲ ಕಾರಣ. ಹೌದು, ಇಸ್ರಯೇಲಿನ ದ್ರೋಹಗಳು ನಿಮ್ಮಲ್ಲಿಯೇ ಕಾಣಿಸಿಕೊಂಡವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಲಾಕೀಷಿನವರೇ, ಅಶ್ವಗಳನ್ನು ರಥಕ್ಕೆ ಕಟ್ಟಿರಿ; ನಿಮ್ಮ ಊರೇ ಚೀಯೋನ್ ನಗರಿಯ ಪಾಪಕ್ಕೆ ಮೂಲ; ಹೌದು, ಇಸ್ರಾಯೇಲಿನ ದ್ರೋಹಗಳು ನಿಮ್ಮಲ್ಲಿಯೇ ಹುಟ್ಟಿಬಂದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಲಾಕೀಷಿನ ನಿವಾಸಿಗಳೇ, ಕುದುರೆಗಳನ್ನು ರಥಕ್ಕೆ ಕಟ್ಟಿರಿ, ಚೀಯೋನ್ ಮಗಳ ಪಾಪವು ನಿನ್ನಿಂದ ಪ್ರಾರಂಭವಾಯಿತು ಇಸ್ರಾಯೇಲಿನ ದ್ರೋಹಗಳು ನಿಮ್ಮಲ್ಲಿಯೇ ಹುಟ್ಟಿ ಬಂದವು. ಅಧ್ಯಾಯವನ್ನು ನೋಡಿ |
ಆದರೆ ನಿನ್ನ ವಿರುದ್ಧವಾಗಿ ಇವುಗಳನ್ನು ಹೇಳಬೇಕಾಗಿದೆ. ಯೆಜೆಬೇಲ್ ಎಂಬ ಸ್ತ್ರೀಯು ತನ್ನ ಇಷ್ಟದಂತೆ ಮಾಡಲು ಅವಕಾಶಕೊಟ್ಟಿರುವೆ. ಆಕೆಯು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ತನ್ನ ಬೋಧನೆಗಳಿಂದ ನನ್ನ ಸೇವಕರನ್ನು ನನ್ನಿಂದ ದೂರ ಸೆಳೆಯುತ್ತಿದ್ದಾಳೆ. ಲೈಂಗಿಕ ಪಾಪಗಳನ್ನು ಮಾಡುವಂತೆಯೂ ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವಂತೆಯೂ ಆಕೆಯು ನನ್ನ ಜನರನ್ನು ಪ್ರೇರೇಪಿಸುತ್ತಿದ್ದಾಳೆ.
“ಆದರೆ ನಿನ್ನ ವಿರುದ್ಧವಾಗಿ ಹೇಳಬೇಕಾದ ಕೆಲವು ಸಂಗತಿಗಳಿವೆ. ನಿನ್ನ ಸಭೆಯಲ್ಲಿ ಬಿಳಾಮನ ದುರ್ಬೋಧನೆಗಳನ್ನು ಅನುಸರಿಸುವ ಜನರಿದ್ದಾರೆ. ಇಸ್ರೇಲಿನ ಜನರನ್ನು ಹೇಗೆ ಪಾಪಕ್ಕೆ ಒಳಗಾಗುವಂತೆ ಮಾಡಬೇಕೆಂಬುದನ್ನು ಬಿಳಾಮನು ಬಾಲಾಕನಿಗೆ ದುರ್ಬೋಧನೆ ಮಾಡಿದನು. ಆದ್ದರಿಂದ ಇಸ್ರೇಲರು ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವುದರ ಮೂಲಕವಾಗಿಯೂ ಲೈಂಗಿಕ ಪಾಪಗಳನ್ನು ಮಾಡುವುದರ ಮೂಲಕವಾಗಿಯೂ ಪಾಪ ಮಾಡಿದರು.
ಅಶ್ಶೂರದ ಅರಸನಿಗೆ ಒಂದು ಸಂದೇಶವು ಬಂದು ತಲುಪಿತು. ಅದರಲ್ಲಿ, “ಇಥಿಯೋಪ್ಯದ ಅರಸನಾದ ತಿರ್ಹಾಕನು ನಿನ್ನೊಂದಿಗೆ ಯುದ್ಧಮಾಡಲು ಬರುತ್ತಿದ್ದಾನೆ” ಎಂದು ಬರೆದಿತ್ತು. ಅದನ್ನು ಕೇಳಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಲಿಬ್ನಕ್ಕೆ ಹೋದನು. ಸೇನಾದಂಡನಾಯಕನಿಗೆ ಈ ಸಮಾಚಾರ ಮುಟ್ಟಿದ ಕೂಡಲೇ ಅವನು ತನ್ನ ಅರಸನು ಯುದ್ಧಮಾಡುತ್ತಿದ್ದ ಲಿಬ್ನ ಪಟ್ಟಣಕ್ಕೆ ಹೋದನು. ಅಲ್ಲಿಂದ ಅವನು ಹಿಜ್ಕೀಯನ ಬಳಿಗೆ ತನ್ನ ದೂತರನ್ನು ಕಳುಹಿಸಿ,