Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 1:16 - ಪರಿಶುದ್ದ ಬೈಬಲ್‌

16 ನಿನ್ನ ಕೂದಲನ್ನು ಬೋಳಿಸು; ಯಾಕೆಂದರೆ ನೀನು ಪ್ರೀತಿಸುವ ಮಕ್ಕಳಿಗಾಗಿ ನೀನು ಅಳುವೆ. ಗಿಡುಗನಂತೆ ನಿನ್ನ ತಲೆ ಬೋಳಾಗಲಿ. ನಿನ್ನ ದುಃಖವನ್ನು ಪ್ರದರ್ಶಿಸು. ಯಾಕೆಂದರೆ ನಿನ್ನ ಮಕ್ಕಳು ನಿನ್ನಿಂದ ತೆಗೆಯಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೂದವೇ, ನಿನ್ನಿಂದ ಸೆರೆಹೋಗಿರುವ ನಿನ್ನ ಮುದ್ದು ಮಕ್ಕಳಿಗಾಗಿ ಕ್ಷೌರಮಾಡಿಸಿಕೋ ಮತ್ತು ತಲೆಬೋಳಿಸಿಕೋ. ನಿನ್ನ ಬೋಳುತನವನ್ನು ರಣಹದ್ದಿನ ಹಾಗೆ ವಿಸ್ತರಿಸಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಜುದೇಯದ ನಿವಾಸಿಗಳೇ, ನಿಮ್ಮ ಮಕ್ಕಳು ಅಗಲಿ ಸೆರೆಹೋಗಿದ್ದಾರೆ. ನಿಮ್ಮ ಮುದ್ದು ಮಕ್ಕಳಿಗಾಗಿ ತಲೆಬೋಳಿಸಿಕೊಳ್ಳಿ, ಮುಂಡನ ಮಾಡಿಸಿಕೊಳ್ಳಿ. ನಿಮ್ಮ ಬೋಳುತಲೆಯು ರಣಹದ್ದಿನಂತೆ ನುಣ್ಣಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 [ಯೆಹೂದವೇ,] ನಿನ್ನ ಮುದ್ದು ಮಕ್ಕಳಿಗಾಗಿ ಕ್ಷೌರಮಾಡಿಸಿಕೋ, ತಲೆಬೋಳಿಸಿಕೋ; ನಿನ್ನ ಬೋಳುತನವನ್ನು ರಣಹದ್ದಿನ ಹಾಗೆ ವಿಸ್ತರಿಸಿಕೋ; ಅವರು ನಿನ್ನ ಕಡೆಯಿಂದ ಸೆರೆಹೋಗಿದ್ದಾರಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಿನ್ನ ಮುದ್ದುಮಕ್ಕಳಿಗೋಸ್ಕರ ತಲೆ ಬೋಳಿಸಿಕೊಂಡು ಕ್ಷೌರಮಾಡಿಸಿಕೋ. ನಿನ್ನ ಬೋಳುತನವನ್ನು ಹದ್ದಿನಂತೆ ಮಾಡಿಕೋ. ಏಕೆಂದರೆ ಅವರು ನಿನ್ನನ್ನು ಬಿಟ್ಟು ಸೆರೆಯಾಗಿ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 1:16
18 ತಿಳಿವುಗಳ ಹೋಲಿಕೆ  

ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಜನರಿಗೆ, ಅವರ ಸತ್ತುಹೋದ ಸ್ನೇಹಿತರಿಗೋಸ್ಕರ ರೋಧಿಸಿ ದುಃಖಿಸಿರಿ ಎಂದು ಹೇಳುವನು. ಜನರು ತಮ್ಮ ತಲೆಗಳನ್ನು ಬೋಳಿಸಿ ಶೋಕವಸ್ತ್ರಗಳನ್ನು ಧರಿಸುವರು.


“ಯೆರೆಮೀಯನೇ, ನಿನ್ನ ಕೂದಲನ್ನು ಕತ್ತರಿಸಿ ಎಸೆದುಬಿಡು. ಬೋಳುಶಿಖರಕ್ಕೆ ಹೋಗಿ ರೋಧಿಸು. ಏಕೆಂದರೆ ಯೆಹೋವನು ಈ ತಲೆಮಾರಿನ ಜನರನ್ನು ತಿರಸ್ಕರಿಸಿದ್ದಾನೆ; ಆತನು ಇವರಿಗೆ ವಿಮುಖನಾಗಿದ್ದಾನೆ. ಆತನು ಕೋಪದಿಂದ ಅವರನ್ನು ದಂಡಿಸುವನು.


ಆಗ ಯೋಬನು ತನ್ನ ಮೇಲಂಗಿಯನ್ನು ಹರಿದುಕೊಂಡು, ತಲೆಯನ್ನು ಬೋಳಿಸಿಕೊಂಡು, ನೆಲದ ಮೇಲೆ ಮೊಣಕಾಲೂರಿ ದೇವರಿಗೆ ಸ್ತೋತ್ರಸಲ್ಲಿಸುತ್ತಾ,


ನಿಮ್ಮ ಸಂತಸದ ದಿವಸಗಳನ್ನು ಸತ್ತವರಿಗಾಗಿ ರೋದಿಸುವ ದಿವಸಗಳನ್ನಾಗಿ ಮಾಡುವೆನು. ನಿಮ್ಮ ಹಾಡುಗಳೆಲ್ಲಾ ಶೋಕಗೀತೆಯಾಗುವವು. ಎಲ್ಲರೂ ಶೋಕಬಟ್ಟೆಯನ್ನು ಧರಿಸುವಂತೆ ಮಾಡುವೆನು. ಪ್ರತಿ ತಲೆಯನ್ನು ಬೋಳು ತಲೆಯನ್ನಾಗಿ ಮಾಡುವೆನು. ಒಬ್ಬನೇ ಮಗನನ್ನು ಕಳೆದುಕೊಳ್ಳುವಾಗ ರೋದಿಸುವ ಹಾಗೆ ಗಟ್ಟಿಯಾಗಿ ರೋದಿಸುವಂತೆ ಮಾಡುತ್ತೇನೆ. ಅದರ ಅಂತ್ಯ ಕಹಿಯಾಗಿರುವುದು.”


“ಯೆಹೂದದ ಪ್ರಮುಖರು ಮತ್ತು ಜನಸಾಮಾನ್ಯರು ಸತ್ತುಹೋಗುವರು. ಯಾರೂ ಅವರನ್ನು ಹೂಳುವದಿಲ್ಲ. ಅವರಿಗೋಸ್ಕರ ಗೋಳಾಡುವದಿಲ್ಲ. ಅವರ ಬಗ್ಗೆ ದುಃಖ ಸೂಚಿಸಲು ಯಾರೂ ತಮಗೆ ಗಾಯಗಳನ್ನು ಮಾಡಿಕೊಳ್ಳುವದಿಲ್ಲ; ತಮ್ಮ ತಲೆಗಳನ್ನು ಬೋಳಿಸಿಕೊಳ್ಳುವದಿಲ್ಲ.


ಅಯ್ಯೋ ನನ್ನ ಜನರೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಹೊರಳಾಡಿರಿ. ಸತ್ತವರಿಗಾಗಿ ದೊಡ್ಡ ಧ್ವನಿಯಲ್ಲಿ ರೋದಿಸಿರಿ. ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಬೋರ ಪ್ರಲಾಪ ಮಾಡಿರಿ. ವಿನಾಶಕನು ತಕ್ಷಣ ನಮ್ಮ ಮೇಲೆರಗುವನು.


ಅರಸನ ಪರಿವಾರದವರು ಮತ್ತು ದೀಬೋನಿನ ಜನರು ಪೂಜಾಸ್ಥಳಕ್ಕೆ ದುಃಖಿಸಲು ಹೋಗುತ್ತಿದ್ದಾರೆ. ಮೋವಾಬಿನ ಜನರು ನೆಬೋ ಮತ್ತು ಮೇದೆಬದವರಿಗಾಗಿ ರೋಧಿಸುತ್ತಾರೆ. ಜನರು ತಮ್ಮ ಗಡ್ಡಗಳನ್ನೂ ತಲೆಗಳನ್ನೂ ಬೋಳಿಸಿ ತಮ್ಮ ದುಃಖವನ್ನು ಪ್ರದರ್ಶಿಸುತ್ತಾರೆ.


ಹೋಶೇಯನು ಇಸ್ರೇಲಿನ ರಾಜನಾಗಿದ್ದ ಒಂಭತ್ತನೆಯ ವರ್ಷದಲ್ಲಿ ಅಶ್ಶೂರದ ರಾಜನು ಸಮಾರ್ಯವನ್ನು ಸ್ವಾಧೀನಪಡಿಸಿಕೊಂಡನು. ಅಶ್ಶೂರದ ರಾಜನು ಇಸ್ರೇಲರನ್ನು ಸೆರೆಯಾಳುಗಳನ್ನಾಗಿ ಒಯ್ದು ಹಲಹು ಪ್ರಾಂತ್ಯದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ ಮೇದ್ಯರ ನಗರಗಳಲ್ಲಿಯೂ ಇರಿಸಿದನು.


ನಿಮಗೆ ಗಂಡುಹೆಣ್ಣು ಮಕ್ಕಳು ಹುಟ್ಟುವರು. ಆದರೆ ಅವರು ನಿಮ್ಮೊಂದಿಗೆ ಇರುವುದಿಲ್ಲ. ಅವರು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು.


ಗಾಜಾದ ಜನರು ದುಃಖಿತರಾಗಿ ತಮ್ಮ ತಲೆಗಳನ್ನು ಬೋಳಿಸಿಕೊಳ್ಳುವರು. ಅಷ್ಕೆಲೋನಿನ ಜನರನ್ನು ಸ್ತಬ್ಧಗೊಳಿಸಲಾಗುವುದು. ಕಣಿವೆ ಪ್ರದೇಶದಿಂದ ಉಳಿದುಕೊಂಡವರೇ, ನಿಮ್ಮನ್ನು ಎಂದಿನವರೆಗೆ ಕತ್ತರಿಸಿಕೊಳ್ಳುತ್ತಿರುವಿರಿ?


ಅಮೋಸನು, ‘ಯಾರೊಬ್ಬಾಮನು ಕತ್ತಿಯಿಂದ ಸಂಹರಿಸಲ್ಪಡುವನು ಮತ್ತು ಇಸ್ರೇಲಿನ ಜನರು ಸೆರೆಹಿಡಿಯಲ್ಪಟ್ಟವರಾಗಿ ಪರದೇಶಕ್ಕೆ ಒಯ್ಯಲ್ಪಡುವರು’” ಎಂದು ಹೇಳಿದ್ದಾನೆ.


ಆದರೆ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಹೆಂಡತಿಯು ಪಟ್ಟಣದೊಳಗೆ ವೇಶ್ಯೆಯಾಗುವಳು. ನಿನ್ನ ಗಂಡು, ಹೆಣ್ಣುಮಕ್ಕಳು ಕತ್ತಿಯಿಂದ ಸಾಯುವರು. ಅನ್ಯರು ನಿನ್ನ ದೇಶವನ್ನು ಕಿತ್ತುಕೊಂಡು ತಮ್ಮೊಳಗೆ ಹಂಚಿಕೊಳ್ಳುವರು. ಮತ್ತು ನೀನು ಪರದೇಶದಲ್ಲಿ ಸಾಯುವೆ. ಇಸ್ರೇಲಿನ ಜನರು ಖಂಡಿತವಾಗಿಯೂ ಸೆರೆಹಿಡಿಯಲ್ಪಟ್ಟು ತಮ್ಮ ದೇಶದಿಂದ ಒಯ್ಯಲ್ಪಡುವರು.’”


ಆದ್ದರಿಂದ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ. ದೊಡ್ಡ ಧ್ವನಿಯಿಂದ ಗೋಳಾಡಿರಿ. ಏಕೆಂದರೆ ಯೆಹೋವನು ನಮ್ಮ ಮೇಲೆ ತುಂಬ ಕೋಪಗೊಂಡಿದ್ದಾನೆ.


ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದೆದ್ದು ಗೋಳಾಡಿರಿ. ನಿಮ್ಮ ಹೃದಯವು ನೀರಿನಂತೆ ಹರಿಯಲಿ. ನಿಮ್ಮ ಹೃದಯಸಾರವನ್ನು ಯೆಹೋವನ ಸಮ್ಮುಖದಲ್ಲಿ ಹೊಯ್ದುಬಿಡಿರಿ. ನಿಮ್ಮ ಕೈಗಳನ್ನು ಮೇಲೆತ್ತಿ ಯೆಹೋವನಿಗೆ ಪ್ರಾರ್ಥಿಸಿರಿ. ನಿಮ್ಮ ಮಕ್ಕಳು ಬದುಕಲಿ ಎಂದು ಆತನನ್ನು ಕೇಳಿಕೊಳ್ಳಿರಿ. ಹಸಿವೆಯಿಂದ ಮೂರ್ಛೆಹೋಗುತ್ತಿದ್ದ ನಿಮ್ಮ ಮಕ್ಕಳ ಪ್ರಾಣ ಉಳಿಯಲಿ ಎಂದು ಆತನನ್ನು ಪ್ರಾರ್ಥಿಸಿರಿ. ಹಸಿವೆಯಿಂದ ಅವರು ನಗರದ ಎಲ್ಲ ಬೀದಿಗಳಲ್ಲಿ ಮೂರ್ಛೆಹೋಗುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು