ಮೀಕ 1:2 - ಪರಿಶುದ್ದ ಬೈಬಲ್2 ಎಲ್ಲಾ ಜನರೇ, ಕೇಳಿರಿ! ಭೂಮಿಯೂ ಅದರಲ್ಲಿರುವವರೆಲ್ಲರೂ ಕೇಳಿರಿ! ನನ್ನ ಒಡೆಯನಾದ ಯೆಹೋವನು ತನ್ನ ಪವಿತ್ರ ಆಲಯದಿಂದ ಬರುವನು. ನಿಮ್ಮ ವಿರುದ್ಧ ಸಾಕ್ಷಿಯಾಗಿ ಆತನು ಬರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಜನಾಂಗಗಳೇ, ನೀವೆಲ್ಲರೂ ಕೇಳಿರಿ. ಭೂಮಂಡಲವೇ, ಭೂಮಿಯಲ್ಲಿರುವ ಸಮಸ್ತರೇ, ಕಿವಿಗೊಡಿರಿ, ಕರ್ತನಾದ ಯೆಹೋವನು ತನ್ನ ಪವಿತ್ರಾಲಯದೊಳಗಿಂದ ನಿಮಗೆ ವಿರುದ್ಧವಾಗಿ ಸಾಕ್ಷಿಕೊಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಕೇಳಿರಿ ಸರ್ವಜನಾಂಗಗಳೇ ಕಿವಿಗೊಡಿ ಬುವಿಯ ಸರ್ವನಿವಾಸಿಗಳೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಜನಾಂಗಗಳೇ, ನೀವೆಲ್ಲರೂ ಕೇಳಿರಿ; ಭೂಮಂಡಲವೇ, ಭೂವಿುಯಲ್ಲಿರುವ ಸಮಸ್ತವೇ, ಕಿವಿಗೊಡಿರಿ! ಕರ್ತನು, ಕರ್ತನಾದ ಯೆಹೋವನು ತನ್ನ ಪವಿತ್ರಾಲಯದೊಳಗಿಂದ ನಿಮಗೆ ವಿರುದ್ಧವಾಗಿ ಸಾಕ್ಷಿ ಕೊಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಎಲ್ಲಾ ಜನಗಳೇ ಕೇಳಿರಿ, ಭೂಮಿಯೇ, ಅದರಲ್ಲಿರುವವರೆಲ್ಲರೇ, ಕಿವಿಗೊಡಿರಿ. ಸಾರ್ವಭೌಮ ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದೊಳಗಿಂದ ನಿಮಗೆ ವಿರೋಧವಾಗಿ ಸಾಕ್ಷಿ ಹೇಳುವರು. ಅಧ್ಯಾಯವನ್ನು ನೋಡಿ |
ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.
“ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. “ಜಯಗಳಿಸಿದ ಪ್ರತಿಯೊಬ್ಬ ವ್ಯಕ್ತಿಗೂ ನಾನು ಅಡಗಿಸಿಟ್ಟಿರುವ ಮನ್ನವನ್ನು ಕೊಡುತ್ತೇನೆ. ಅವನಿಗೆ ನಾನು ಬಿಳುಪಾದ ಕಲ್ಲನ್ನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಹೊಸ ಹೆಸರನ್ನು ಕೆತ್ತಲಾಗಿದೆ. ಈ ಹೊಸ ಹೆಸರು ಯಾರಿಗೂ ತಿಳಿದಿಲ್ಲ. ಈ ಕಲ್ಲನ್ನು ಪಡೆದುಕೊಂಡ ವ್ಯಕ್ತಿಯು ಮಾತ್ರ ಹೊಸ ಹೆಸರನ್ನು ತಿಳಿದುಕೊಳ್ಳುತ್ತಾನೆ.
“ನಮ್ಮ ಕಾಣಿಕೆಗಳನ್ನು ಯೆಹೋವನು ಏಕೆ ಸ್ವೀಕರಿಸುವುದಿಲ್ಲ?” ಎಂದು ನೀವು ಕೇಳಬಹುದು. ಯಾಕೆಂದರೆ ನಿಮ್ಮ ಪಾಪಕೃತ್ಯಗಳನ್ನು ಆತನು ನೋಡಿರುತ್ತಾನೆ. ಅವುಗಳಿಗೆ ವಿರೋಧವಾಗಿ ಆತನೇ ಸಾಕ್ಷಿಯಾಗಿರುತ್ತಾನೆ. ನಿಮ್ಮ ಹೆಂಡತಿಯರನ್ನು ನೀವು ಮೋಸಗೊಳಿಸಿದ್ದನ್ನು ಆತನು ನೋಡಿರುತ್ತಾನೆ. ನೀವು ಆಕೆಯನ್ನು ನಿಮ್ಮ ಯೌವನ ಕಾಲದಲ್ಲಿ ಹೆಂಡತಿಯನ್ನಾಗಿ ಮಾಡಿಕೊಂಡಿರುತ್ತೀರಿ. ಆಕೆಯು ನಿಮ್ಮ ಆಪ್ತ ಸ್ನೇಹಿತೆಯಾಗಿದ್ದಳು. ನೀವಿಬ್ಬರೂ ಮಾತುಕೊಟ್ಟಿರಿ. ಆಕೆ ನಿಮ್ಮ ಹೆಂಡತಿಯಾದಳು. ಆದರೆ ನೀವು ಅವಳಿಗೆ ಅಪನಂಬಿಗಸ್ಥರಾದಿರಿ.