Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 1:3 - ಪರಿಶುದ್ದ ಬೈಬಲ್‌

3 ಯೆಹೋವನು ತನ್ನ ಸ್ಥಳದಿಂದ ಹೊರಟು ಬರುವುದನ್ನು ನೋಡಿರಿ. ಆತನು ಲೋಕದ ಬೆಟ್ಟಗಳ ಮೇಲೆ ನಡೆಯಲು ಬರುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಗೋ ಯೆಹೋವನು ತನ್ನ ಸ್ಥಾನದಿಂದ ಹೊರಟು ಇಳಿದುಬರುತ್ತಿದ್ದಾನೆ. ಭೂಮಿಯ ಉನ್ನತಪ್ರದೇಶಗಳಲ್ಲಿ ನಡೆಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸಾಕ್ಷಿ ನುಡಿದಿಹನು ನಿಮ್ಮ ವಿರುದ್ಧ ಸರ್ವೇಶ್ವರ ಪವಿತ್ರಾಲಯದಿಂದ ಇಳಿದುಬರುತಿಹನಿದೋ ಸ್ವಾಮಿ ತನ್ನ ಆಸ್ಥಾನದಿಂದ ಜಗದ ಉನ್ನತ ಪ್ರದೇಶಗಳಲ್ಲಿ ಸಂಚರಿಸಲಿಹನಾತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇಗೋ, ಯೆಹೋವನು ತನ್ನ ಸ್ಥಾನದಿಂದ ಹೊರಟು ಇಳಿದುಬರುತ್ತಿದ್ದಾನೆ, ಭೂವಿುಯ ಉನ್ನತಪ್ರದೇಶಗಳಲ್ಲಿ ನಡೆಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರು ತಮ್ಮ ವಾಸಸ್ಥಾನದಿಂದ ಇಳಿದು ಬರುತ್ತಾರೆ. ಅವರು ಇಳಿದು ಭೂಮಿಯ ಉನ್ನತವಾದ ಸ್ಥಳಗಳ ಮೇಲೆ ಸಂಚರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 1:3
15 ತಿಳಿವುಗಳ ಹೋಲಿಕೆ  

ನಾನು ಯಾರು? ನಾನೇ ಪರ್ವತಗಳನ್ನು ನಿರ್ಮಿಸಿದಾತನು. ನಿಮ್ಮಲ್ಲಿ ಮನಸ್ಸನ್ನು ಉಂಟುಮಾಡಿದಾತನು ನಾನೇ. ನಾನು ಜನರಿಗೆ ಮಾತನಾಡಲು ಕಲಿಸಿದೆನು. ಕತ್ತಲೆಯನ್ನು ಬೆಳಕು ಮಾಡಿದೆನು. ಭೂಮಿಯ ಮೇಲಿರುವ ಪರ್ವತಗಳ ಮೇಲೆ ನಾನು ನಡಿಯುತ್ತೇನೆ. ನಾನು ಯಾರು? ನನ್ನ ಹೆಸರು ಸೈನ್ಯಗಳ ದೇವರಾದ ಯೆಹೋವನು.


ಇಗೋ, ಈ ಲೋಕದ ಜನರು ಮಾಡಿದ ಪಾಪಕೃತ್ಯಗಳಿಗೆ ನ್ಯಾಯತೀರಿಸಲು ಯೆಹೋವನು ತನ್ನ ಸ್ಥಳದಿಂದ ಎದ್ದಿದ್ದಾನೆ. ಭೂಮಿಯು ತನ್ನಲ್ಲಿರುವ ರಕ್ತವನ್ನು ತೋರಿಸುವದು. ಭೂಮಿಯು ಇನ್ನುಮುಂದೆ ಸತ್ತವರನ್ನು ಮರೆಮಾಡುವುದಿಲ್ಲ.


ಬೆಟ್ಟಗುಡ್ಡಗಳ ಪ್ರಾಂತ್ಯವನ್ನು ವಶಪಡಿಸಲು ಇಸ್ರೇಲನ್ನು ನಡೆಸಿದನು. ಹೊಲದ ಬೆಳೆಯನ್ನು ಇಸ್ರೇಲ್ ಕೊಯಿಲು ಮಾಡಿದನು. ಬಂಡೆಯಿಂದ ಜೇನನ್ನು ಯೆಹೋವನು ಇಸ್ರೇಲಿಗೆ ಕೊಟ್ಟನು. ಗಟ್ಟಿಯಾದ ಬಂಡೆಯಿಂದ ಎಣ್ಣೆಯು ಹೊರಡುವಂತೆ ಮಾಡಿದನು.


ನನ್ನ ಒಡೆಯನಾದ ಯೆಹೋವನು ನನಗೆ ಬಲವನ್ನು ಕೊಡುವನು. ಜಿಂಕೆಯಂತೆ ವೇಗವಾಗಿ ಓಡಲು ನನಗೆ ಸಹಾಯ ಮಾಡುವನು. ಪರ್ವತಗಳಲ್ಲಿ ನನ್ನನ್ನು ಸುರಕ್ಷಿತವಾಗಿ ನಡೆಸುವನು. ಸಂಗೀತ ನಿರ್ದೇಶಕನಿಗೆ. ತಂತಿವಾದ್ಯಗಳಿಂದ ಹಾಡತಕ್ಕದ್ದು.


ನಮ್ಮ ದೇವರು ಪರಲೋಕದಲ್ಲಿದ್ದಾನೆ; ತಾನು ಬಯಸಿದ್ದನ್ನೆಲ್ಲಾ ಮಾಡುತ್ತಾನೆ.


ಆಗ ದೇವರಾತ್ಮವು ನನ್ನನ್ನು ಮೇಲಕ್ಕೆ ಎತ್ತಿತು. ಯೆಹೋವನ ಮಹಿಮೆಯು ತನ್ನ ಸ್ಥಳದಿಂದ ಮೇಲೇರಿದಾಗ ನನ್ನ ಹಿಂಭಾಗದಲ್ಲಿ ಮಹಾ ಗುಡುಗುವ ಶಬ್ದವನ್ನು ಕೇಳಿದೆನು. ಅದು ಯೆಹೋವನಿಗೆ ಆತನ ನಿವಾಸದಲ್ಲಿ ಸ್ತೋತ್ರವಾಗಲಿ ಎಂಬ ವಾಣಿಯೊಂದಿಗೆ ಕೇಳಿಸುತ್ತಿತ್ತು.


ಏಕೆಂದರೆ ಯೆಹೋವನ ಬಲವು ಈ ಪರ್ವತದಲ್ಲಿದೆ. ಮೋವಾಬ್ ಸೋಲಿಸಲ್ಪಡುವದು. ಯೆಹೋವನು ವೈರಿಯನ್ನು ಹುಲ್ಲಿನಂತೆ ತುಳಿದುಬಿಡುವನು.


ಆ ಗರ್ವಿಷ್ಠರ ಕಡೆಗೆ ನೋಡಿ ಅವರನ್ನು ದೀನರನ್ನಾಗಿ ಮಾಡು. ದುಷ್ಟರನ್ನು ಅವರು ನಿಂತಿರುವಲ್ಲಿಯೇ ಜಜ್ಜಿಹಾಕು.


ಇಸ್ರೇಲೇ, ನೀವು ಆಶೀರ್ವದಿಸಲ್ಪಟ್ಟವರು. ನಿಮ್ಮ ದೇಶದ ಹಾಗೆ ಯಾವ ದೇಶವೂ ಇರದು. ಯೆಹೋವನು ನಿಮ್ಮನ್ನು ರಕ್ಷಿಸಿದನು. ಆತನು ನಿಮ್ಮನ್ನು ಕಾಪಾಡುವ ಬಲವಾದ ಗುರಾಣಿ. ಆತನು ನಿಮಗೆ ಶಕ್ತಿಯುತವಾದ ಖಡ್ಗ. ವೈರಿಗಳು ನಿಮಗೆ ಭಯಪಡುವರು. ನೀವು ಅವರ ಪವಿತ್ರ ಸ್ಥಳವನ್ನು ತುಳಿದುಬಿಡುವಿರಿ!”


ಅದೇ ಸಮಯದಲ್ಲಿ ಜೆರುಸಲೇಮಿಗೆ ಪೂರ್ವದಲ್ಲಿರುವ ಆಲೀವ್ ಮರಗಳ ಬೆಟ್ಟದ ಮೇಲೆ ನಿಂತುಕೊಳ್ಳುವನು. ಆ ಬೆಟ್ಟವು ಇಬ್ಭಾಗವಾಗುವದು. ಅದರ ಒಂದು ಭಾಗವು ಉತ್ತರಕ್ಕೆ ಹೋಗುವದು, ಇನ್ನೊಂದು ಭಾಗವು ದಕ್ಷಿಣದ ಕಡೆಗೆ ಹೋಗುವದು.


ನನ್ನ ಒಡೆಯನಾದ ಸರ್ವಶಕ್ತನಾದ ಯೆಹೋವನು ಭೂಮಿಯನ್ನು ಸ್ಪರ್ಶಿಸುವನು. ಆಗ ಅದು ಕರಗಿಹೋಗುವುದು. ದೇಶದಲ್ಲಿ ವಾಸಿಸುವ ಜನರೆಲ್ಲಾ ಸತ್ತುಹೋದವರಿಗಾಗಿ ಗೋಳಾಡುವರು. ಈಜಿಪ್ಟಿನ ನೈಲ್ ನದಿಯಂತೆ ದೇಶದಲ್ಲಿ ಏರಿಳಿತ ಉಂಟಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು