Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 1:5 - ಪರಿಶುದ್ದ ಬೈಬಲ್‌

5 ಇದಕ್ಕೆಲ್ಲಾ ಕಾರಣ ಯಾಕೋಬನ ಪಾಪಗಳೇ, ಇಸ್ರೇಲರ ದ್ರೋಹಗಳೇ! ಯಾಕೋಬು ಪಾಪಮಾಡಿದ್ದಕ್ಕೆ ಕಾರಣವೇನು? ಸಮಾರ್ಯವೇ ಕಾರಣ. ಯೆಹೂದದ ಎತ್ತರವಾದ ಸ್ಥಳ ಯಾವುದು? ಅದೇ ಜೆರುಸಲೇಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇದಕ್ಕೆಲ್ಲಾ ಕಾರಣ ಯಾಕೋಬಿನ ದ್ರೋಹ ಮತ್ತು ಇಸ್ರಾಯೇಲ್ ವಂಶದ ಪಾಪಗಳೇ. ಯಾಕೋಬಿನ ದ್ರೋಹವೇನು? ಸಮಾರ್ಯವಲ್ಲವೇ! ಯೆಹೂದದ ಕೆಟ್ಟ ಪೂಜಾಸ್ಥಾನಗಳು ಯಾವುವು? ಯೆರೂಸಲೇಮಲ್ಲವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇದಕ್ಕೆಲ್ಲಾ ಕಾರಣ ಯಕೋಬನ ದ್ರೋಹ. ಇಸ್ರಯೇಲ್ ಮನೆತನದ ಪಾಪ. ಯಕೋಬನ ದ್ರೋಹಕ್ಕೆ ಕಾರಣ ಯಾವುದು? ಸಮಾರ್ಯ ಅಲ್ಲವೆ? ಜುದೇಯದ ವಿಗ್ರಹಾರಾಧನೆಯ ಸ್ಥಳ ಯಾವುದು? ಜೆರುಸಲೇಮ್ ಅಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇದಕ್ಕೆಲ್ಲಾ ಕಾರಣವು ಯಾಕೋಬಿನ ದ್ರೋಹವೇ, ಇಸ್ರಾಯೇಲ್ ವಂಶದ ಪಾಪಗಳೇ, ಯಾಕೋಬಿನ ದ್ರೋಹವೇನು? ಸಮಾರ್ಯವಲ್ಲವೇ. ಯೆಹೂದದ [ಕೆಟ್ಟ] ಪೂಜಾಸ್ಥಾನಗಳು ಯಾವವು? ಯೆರೊಸಲೇಮಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇದೆಲ್ಲಾ ಯಾಕೋಬಿನ ಅಪರಾಧದ ನಿಮಿತ್ತವೇ ಇಸ್ರಾಯೇಲಿನ ಮನೆತನದವರ ಪಾಪದಿಂದಲೇ, ಯಾಕೋಬನ ಅಪರಾಧವೇನು? ಅದು ಸಮಾರ್ಯವಲ್ಲವೇ? ಯೆಹೂದದ ಉನ್ನತ ಪೂಜಾಸ್ಥಳ ಯಾವುದು? ಅದು ಯೆರೂಸಲೇಮು ಅಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 1:5
30 ತಿಳಿವುಗಳ ಹೋಲಿಕೆ  

ಆ ಜನರು ಸಮಾರ್ಯದ ಪಾಪದ ಮೇಲೆ ಆಣೆಯಿಡುವರು, ‘ದಾನೇ, ನಿನ್ನ ದೇವರಾಣೆ ….’ ‘ಬೇರ್ಷೆಬದ ದೇವರಾಣೆ ….’ ಎಂಬುದಾಗಿ ಹೇಳುವರು. ಆದರೆ ಆ ಜನರು ಬಿದ್ದುಹೋಗುವರು. ಅಲ್ಲಿಂದ ತಿರುಗಿ ಏಳುವದೇ ಇಲ್ಲ.”


ನೀವು ಕೆಟ್ಟದ್ದನ್ನು ಮಾಡಿದರೆ ಆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. ನಿಮಗೆ ವಿಪತ್ತು ಬರುತ್ತದೆ. ಆ ವಿಪತ್ತು ನಿಮಗೊಂದು ಪಾಠವನ್ನು ಕಲಿಸುತ್ತದೆ. ಅದರ ಬಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. ನನಗೆ ಭಯಭಕ್ತಿ ತೋರದೆ ಇರುವದು ತಪ್ಪು.” ಈ ಸಂದೇಶವು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಬಂದಿತು.


ನಮ್ಮ ತಲೆಯಿಂದ ಕಿರೀಟವು ಬಿದ್ದುಹೋಗಿದೆ. ನಾವು ಪಾಪ ಮಾಡಿದ್ದರಿಂದಲೇ ನಮಗೆ ಕೇಡುಗಳಾಗಿವೆ.


ಭೂಲೋಕದ ಜನರೇ, ಕೇಳಿರಿ, ಆ ಜನರು ಮಾಡಿದ ಎಲ್ಲಾ ಕುಯುಕ್ತಿಗಳಿಗಾಗಿ ನಾನು ಯೆಹೂದ ಜನರಿಗೆ ವಿನಾಶವನ್ನು ತರುವೆನು. ಅವರು ನನ್ನ ಸಂದೇಶಗಳಿಗೆ ಗಮನ ಕೊಡದೆ ಇದ್ದುದರಿಂದ, ಅವರು ನನ್ನ ಧರ್ಮಶಾಸ್ತ್ರವನ್ನು ಅಸಡ್ಡೆ ಮಾಡಿದ್ದರಿಂದ ಇದೆಲ್ಲ ನಡೆಯುವುದು.”


“ನಿನ್ನ ನಡತೆಯೂ ನಿನ್ನ ಕೃತ್ಯಗಳೂ ನಿನಗೆ ಈ ಕಷ್ಟವನ್ನು ತಂದವು. ನಿನ್ನ ದುಷ್ಟತನವೇ ನಿನ್ನ ಜೀವನವನ್ನು ಇಷ್ಟು ಕಷ್ಟಕರವನ್ನಾಗಿ ಮಾಡಿದೆ. ನಿನ್ನ ದುಷ್ಟತನವೇ ನಿನ್ನ ಮನಸ್ಸಿಗೆ ಆಳವಾದ ನೋವನ್ನು ಉಂಟುಮಾಡಿದೆ.”


ತೊಂದರೆಯು ನಿನ್ನ ತಪ್ಪಿನ ಫಲ. ನಿನ್ನನ್ನು ಸರಿಯಾದ ಮಾರ್ಗದಲ್ಲಿ ನಡೆಸುತ್ತಿದ್ದ ನಿನ್ನ ದೇವರಾದ ಯೆಹೋವನಿಗೆ ನೀನು ವಿಮುಖನಾದೆ.


ಅವನ ಮೂಲಕ ಯೆಹೋವನು ಹೇಳಿದ ಸಂಗತಿಗಳು ಖಂಡಿತವಾಗಿಯೂ ನಿಜವಾಗುತ್ತವೆ. ಬೇತೇಲಿನ ಯಜ್ಞವೇದಿಕೆಯ ವಿರುದ್ಧವಾಗಿಯೂ ಸಮಾರ್ಯದ ಇತರ ಪಟ್ಟಣಗಳಲ್ಲಿರುವ ಉನ್ನತಸ್ಥಳಗಳ ವಿರುದ್ಧವಾಗಿಯೂ ಯೆಹೋವನು ಅವನ ಮೂಲಕವಾಗಿ ಮಾತನಾಡಿದನು” ಎಂದು ಹೇಳಿದನು.


ಚೀಯೋನಿನಲ್ಲಿ ಸುಖದಿಂದಿರುವ ಜನರಿಗೂ ಸಮಾರ್ಯದ ಪರ್ವತಗಳ ಮೇಲೆ ಸುರಕ್ಷಿತರಾಗಿರುವ ಜನರಿಗೂ ಕೇಡು ಸಂಭವಿಸುವದು. ನೀವು ವಿಶೇಷವಾದ ದೇಶದ ವಿಶೇಷ ನಾಯಕರು. ಇಸ್ರೇಲಿನ ಮನೆತನವು ಸಲಹೆಗಾಗಿ ನಿಮ್ಮ ಹತ್ತಿರ ಬರುತ್ತದೆ.


“ನಾನು ಇಸ್ರೇಲನ್ನು ಗುಣಪಡಿಸುವೆನು. ಆಗ ಎಫ್ರಾಯೀಮನು ಪಾಪಮಾಡಿದ್ದಾನೆಂದು ಜನರಿಗೆ ತಿಳಿದುಬರುವದು. ಜನರಿಗೆ ಸಮಾರ್ಯದವರ ಸುಳ್ಳು ತಿಳಿದುಬರುವದು. ಆ ನಗರದಲ್ಲಿ ಕಳ್ಳರು ಬರುತ್ತಾ ಹೋಗುತ್ತಾ ಇರುವದನ್ನು ಜನರು ತಿಳಿಯುವರು.


ಯೆಹೂದದ ಜನರೇ, ನೀವು ತಪ್ಪುಗಳನ್ನು ಮಾಡಿರುವಿರಿ. ಆದ್ದರಿಂದಲೇ ಮಳೆಬೆಳೆಗಳು ಆಗಿಲ್ಲ. ನಿಮ್ಮ ಪಾಪಗಳಿಂದಾಗಿ ಯೆಹೋವನ ಆ ಉತ್ತಮ ಕಾಣಿಕೆಗಳನ್ನು ನೀವು ಸವಿಯಲಾಗಲಿಲ್ಲ.


ಅವನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ತನ್ನ ಪಿತೃವಾದ ದಾವೀದನು ಅನುಸರಿಸಿದ್ದ ದೇವರನ್ನು ಅನುಸರಿಸಿದನು. ಆಗ ಅವನು ಇನ್ನೂ ಎಳೆಯ ಪ್ರಾಯದವನಾಗಿದ್ದನು. ಅವನು ಪಟ್ಟಕ್ಕೆ ಬಂದ ಹನ್ನೆರಡನೆಯ ವರ್ಷದಲ್ಲಿ, ಜೆರುಸಲೇಮಿನಲ್ಲಿ ಮತ್ತು ಯೆಹೂದದಲ್ಲಿದ್ದ ಎತ್ತರವಾದ ಸ್ಥಳಗಳನ್ನೂ ಅಶೇರಸ್ತಂಭಗಳನ್ನೂ ಎರಕದ ಮತ್ತು ಕೆತ್ತನೆಯ ವಿಗ್ರಹಗಳನ್ನೂ ನಾಶಮಾಡಿದನು.


ಜನರು ಬಾಳ್ ದೇವರ ವಿಗ್ರಹಗಳನ್ನೂ ಯಜ್ಞವೇದಿಕೆಗಳನ್ನೂ ಯೋಷೀಯನ ಮುಂದೆಯೇ ಕೆಡವಿಹಾಕಿದರು. ಆಮೇಲೆ ಯೋಷೀಯನು ಉನ್ನತಸ್ಥಳದಲ್ಲಿದ್ದ ಧೂಪವೇದಿಕೆಯನ್ನು ಕೆಡವಿ ಹಾಕಿ, ವಿಗ್ರಹಗಳನ್ನೆಲ್ಲಾ ಒಡೆದು ಪುಡಿಮಾಡಿ ಬಾಳ್ ದೇವರ ಪೂಜಾರಿಗಳ ಸಮಾಧಿಯ ಮೇಲೆ ಚೆಲ್ಲಿದನು.


ಸಮಾರ್ಯವು ಎಫ್ರಾಯೀಮಿನ ರಾಜಧಾನಿಯಾಗಿರುವಷ್ಟು ಕಾಲ ಮತ್ತು ರೆಮಲ್ಯನ ಮಗನು ಸಮಾರ್ಯದಲ್ಲಿ ಅರಸನಾಗಿರುವಷ್ಟು ಕಾಲ ಅವರ ಯೋಜನೆಗಳು ಕೈಗೂಡುವುದಿಲ್ಲ. ನೀನು ಈ ವಾರ್ತೆಯನ್ನು ನಂಬದಿದ್ದರೆ ಜನರು ನಿನ್ನ ಮಾತನ್ನು ನಂಬದಿರಲಿ.”


ಇಸಾಕನ ವೇದಿಕೆಗಳೆಲ್ಲಾ ನಾಶವಾಗುವದು. ಇಸ್ರೇಲಿನ ಪವಿತ್ರ ಸ್ಥಳಗಳೆಲ್ಲಾ ಬಂಡೆಯ ರಾಶಿಯಾಗಿ ಮಾರ್ಪಡುವವು. ಯಾರೊಬ್ಬಾಮನ ಕುಟುಂಬದ ಮೇಲೆ ಆಕ್ರಮಣ ಮಾಡಿ ಅವರನ್ನು ಸಂಹರಿಸುವೆನು” ಎಂದು ಹೇಳಿದನು.


ಲಾಕೀಷಿನ ಸ್ತ್ರೀಯೇ, ವೇಗವಾಗಿ ಓಡುವ ಕುದುರೆಯನ್ನು ನಿನ್ನ ಬಂಡಿಗೆ ಬಿಗಿ. ಚೀಯೋನಿನ ಪಾಪವು ಲಾಕೀಷಿನಲ್ಲಿ ಪ್ರಾರಂಭವಾಯಿತು. ಯಾಕೆಂದರೆ ನೀನು ಇಸ್ರೇಲಿನ ಪಾಪವನ್ನು ಅನುಸರಿಸಿದಿ.


ಸೊಲೊಮೋನನು ಕೆಮೋಷನನ್ನು ಆರಾಧಿಸಲು ಒಂದು ಸ್ಥಳವನ್ನು ನಿರ್ಮಿಸಿದನು. ಮೋವಾಬ್ಯರ ಭಯಂಕರ ವಿಗ್ರಹವೇ ಕೆಮೋಷ್. ಜೆರುಸಲೇಮಿನ ಪಕ್ಕದಲ್ಲಿದ್ದ ಬೆಟ್ಟದ ಮೇಲೆ ಸೊಲೊಮೋನನು ಆರಾಧನೆಯ ಸ್ಥಳವನ್ನು ನಿರ್ಮಿಸಿದನು. ಆ ಬೆಟ್ಟದ ಮೇಲೆಯೇ ಸೊಲೊಮೋನನು ಮೋಲೆಕ್ ದೇವತೆಯ ಪೂಜಾಸ್ಥಳವನ್ನು ನಿರ್ಮಿಸಿದನು. ಅಮ್ಮೋನಿಯರ ಭಯಂಕರ ವಿಗ್ರಹವೇ ಮೋಲೆಕ್.


ಆದರೆ ಒಮ್ರಿಯು ಸಮಾರ್ಯ ಬೆಟ್ಟವನ್ನು ಶೆಮೆರನಿಂದ ಅರವತ್ತೆಂಟು ಕಿಲೋಗ್ರಾಂ ಬೆಳ್ಳಿಗೆ ಕೊಂಡುಕೊಂಡನು. ಒಮ್ರಿಯು ಆ ಬೆಟ್ಟದ ಮೇಲೆ ಒಂದು ನಗರವನ್ನು ಕಟ್ಟಿಸಿದನು. ಅವನು ಆ ನಗರಕ್ಕೆ ಸಮಾರ್ಯವೆಂದು ಅದರ ಒಡೆಯನಾದ ಶೆಮೆರನ ಹೆಸರನ್ನು ಇಟ್ಟನು.


“ಸಮಾರ್ಯದ ಪ್ರವಾದಿಗಳು ಕೆಟ್ಟದ್ದಾಗಿ ನಡೆದುಕೊಂಡದ್ದನ್ನು ನಾನು ನೋಡಿದ್ದೇನೆ. ಅವರು ಬಾಳ್ ದೇವತೆಗೋಸ್ಕರ ಆವೇಶದಿಂದ ಪ್ರವಾದಿಸಿದ್ದನ್ನು ನಾನು ಕಂಡಿದ್ದೇನೆ. ಆ ಪ್ರವಾದಿಗಳು ಇಸ್ರೇಲಿನ ಜನರನ್ನು ಯೆಹೋವನಿಂದ ದೂರ ತೆಗೆದುಕೊಂಡು ಹೋಗಿದ್ದಾರೆ.


ಯೆಹೂದದ ಪ್ರವಾದಿಗಳು ಜೆರುಸಲೇಮಿನಲ್ಲಿ ಭಯಂಕರ ದುಷ್ಕೃತ್ಯಗಳನ್ನು ಮಾಡುವುದನ್ನು ನಾನು ನೋಡಿದ್ದೇನೆ. ಈ ಪ್ರವಾದಿಗಳು ವ್ಯಭಿಚಾರ ಮಾಡುತ್ತಾರೆ. ಅವರು ಸುಳ್ಳುಗಳನ್ನು ಕೇಳಿ, ಆ ಸುಳ್ಳುಬೋಧನೆಗಳನ್ನು ಪಾಲಿಸುತ್ತಾರೆ. ಅವರು ದುಷ್ಟರಿಗೆ ಅವರ ದುಷ್ಟತನವನ್ನು ಮುಂದುವರಿಸಲು ಪ್ರೋತ್ಸಾಹಿಸುತ್ತಾರೆ. ಆದ್ದರಿಂದ ಜನರು ಪಾಪಮಾಡುವುದನ್ನು ನಿಲ್ಲಿಸಲಿಲ್ಲ. ಅವರೆಲ್ಲರು ನನಗೆ ಸೊದೋಮ್ ನಗರದಂತೆ ಇದ್ದಾರೆ. ಜೆರುಸಲೇಮಿನ ಜನರು ಗೊಮೋರ ನಗರದಂತೆ ಇದ್ದಾರೆ.”


ನಿನ್ನ ಅಕ್ಕ ಸಮಾರ್ಯಳು. ಆಕೆಯು ನಿನ್ನ ಉತ್ತರ ದಿಕ್ಕಿನಲ್ಲಿ ತನ್ನ ಹೆಣ್ಣು ಮಕ್ಕಳೊಂದಿಗೆ (ಪಟ್ಟಣಗಳು) ವಾಸ ಮಾಡಿದ್ದಳು. ನಿನ್ನ ತಂಗಿಯು ಸೊದೋಮಳು. ಆಕೆ ನಿನ್ನ ದಕ್ಷಿಣದಲ್ಲಿ ತನ್ನ ಹೆಣ್ಣುಮಕ್ಕಳೊಂದಿಗೆ (ಪಟ್ಟಣಗಳು) ವಾಸಿಸಿದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು