Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 1:6 - ಪರಿಶುದ್ದ ಬೈಬಲ್‌

6 ಆದ್ದರಿಂದ ನಾನು ಸಮಾರ್ಯವನ್ನು ಕಲ್ಲಿನ ರಾಶಿಯನ್ನಾಗಿ ಮಾಡುವೆನು. ಅದು ದ್ರಾಕ್ಷಿಬಳ್ಳಿ ನೆಡಲು ಸಿದ್ಧವಾಗುವುದು. ಸಮಾರ್ಯದ ಕಲ್ಲುಗಳನ್ನೆಲ್ಲಾ ತಗ್ಗಿಗೆ ನೂಕಿಬಿಡುವೆನು; ಆಗ ಅಲ್ಲಿ ಕೇವಲ ಅಸ್ತಿವಾರಗಳು ಕಾಣುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದಕಾರಣ ನಾನು ಸಮಾರ್ಯವನ್ನು ಹೊಲದಲ್ಲಿನ ಹಾಳು ದಿಬ್ಬವನ್ನಾಗಿಯೂ, ದ್ರಾಕ್ಷಿಯ ತೋಟದ ಮಡಿಗಳನ್ನಾಗಿಯೂ ಮಾಡುವೆನು. ಅದರ ಕಲ್ಲುಗಳನ್ನು ತಗ್ಗಿಗೆ ಸುರಿದುಬಿಡುವೆನು. ಅದರ ಅಸ್ತಿವಾರಗಳನ್ನು ಬಯಲನ್ನಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದಕಾರಣ, “ನಾನು ಸಮಾರ್ಯವನ್ನು ಧೂಳಿನ ರಾಶಿಯನ್ನಾಗಿಯೂ ದ್ರಾಕ್ಷಾತೋಟಕ್ಕೆ ಒಳ್ಳೆಯ ಬಯಲನ್ನಾಗಿಯೂ ಮಾಡುವೆನು. ಕಲ್ಲುಹೆಂಟೆಗಳನ್ನು ಕಣಿವೆಗೆ ಸುರಿದುಬಿಡುವೆನು. ಅದರ ತಳಪಾಯವೇ ತೆರೆದು ಕಾಣುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದಕಾರಣ ನಾನು ಸಮಾರ್ಯವನ್ನು ಹೊಲದಲ್ಲಿನ ಹಾಳು ದಿಬ್ಬವನ್ನಾಗಿಯೂ ದ್ರಾಕ್ಷೆಯ ತೋಟದ ಮಡಿಗಳನ್ನಾಗಿಯೂ ಮಾಡುವೆನು; ಅದರ ಕಲ್ಲುಗಳನ್ನು ತಗ್ಗಿಗೆ ಸುರಿದು ಬಿಡುವೆನು; ಅದರ ಅಸ್ತಿವಾರಗಳನ್ನು ಬೈಲುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಹೀಗಿರುವುದರಿಂದ ನಾನು ಸಮಾರ್ಯವನ್ನು ಹೊಲದ ದಿಬ್ಬವನ್ನಾಗಿಯೂ ದ್ರಾಕ್ಷಿಬಳ್ಳಿ ನೆಡುವ ಸ್ಥಳವನ್ನಾಗಿಯೂ ಮಾಡುವೆನು. ಅದರ ಕಲ್ಲುಗಳನ್ನು ತಗ್ಗಿನಲ್ಲಿ ಸುರಿದುಬಿಟ್ಟು, ಅದರ ಅಸ್ತಿವಾರಗಳನ್ನು ಹೊರಗೆಡಹುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 1:6
19 ತಿಳಿವುಗಳ ಹೋಲಿಕೆ  

ನೀವು ಗೋಡೆಗೆ ಗಾರೆ ಹಾಕಿದಿರಿ. ಆದರೆ ನಾನು ಇಡೀ ಗೋಡೆಯನ್ನೆ ನಾಶಮಾಡುವೆನು. ಅದನ್ನು ನೆಲಸಮ ಮಾಡುವೆನು. ಆ ಗೋಡೆಯು ನಿಮ್ಮ ಮೇಲೆ ಬಿದ್ದು ನಿಮ್ಮನ್ನು ಕೊಲ್ಲುವುದು. ಆಗ ನಾನು ಯೆಹೋವನೆಂದು ಗೊತ್ತಾಗುವುದು.


ನಾಯಕರೇ, ನಿಮ್ಮಿಂದಾಗಿ ಚೀಯೋನ್ ನಾಶವಾಗುವದು. ನೇಗಿಲಿನಿಂದ ಉತ್ತಲ್ಪಟ್ಟ ಹೊಲದಂತೆ ಅದು ಇರುವದು. ಜೆರುಸಲೇಮ್ ಕಲ್ಲಿನ ರಾಶಿಯಾಗುವದು. ಆಲಯದ ಗುಡ್ಡವು ಬರಿದಾದ ಬೆಟ್ಟವಾಗುವುದು. ಅದರ ಮೇಲೆ ಪೊದೆಗಳು ಹುಲುಸಾಗಿ ಬೆಳೆದುಕೊಳ್ಳುವವು.


ನೋಡು, ಬಂಗಾರವು ಹೇಗೆ ಕಪ್ಪಾಗಿದೆ. ನೋಡು, ಶುದ್ಧಬಂಗಾರವು ಹೇಗೆ ಬದಲಾಗಿದೆ. ಅಮೂಲ್ಯವಾದ ಕಲ್ಲುಗಳು ಎಲ್ಲೆಲ್ಲಿಯೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಅವು ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.


“ಆದರೆ ನೀನು ಕೇಳಿಲ್ಲವೇ? ನಾನು ಬಹುಕಾಲದ ಹಿಂದೆಯೇ ಅದನ್ನು ಯೋಜಿಸಿದ್ದೆನು. ಪುರಾತನ ಕಾಲದಿಂದಲೇ ಅದನ್ನು ಆಲೋಚಿಸಿದ್ದೆನು, ಈಗ ನಾನು ಅದನ್ನು ನೆರವೇರಿಸಿದ್ದೇನೆ. ನೀನು ಬಲಾಢ್ಯ ನಗರಗಳನ್ನು ಹಾಳುದಿಬ್ಬಗಳನ್ನಾಗಿ ಮಾಡಲು ಅವಕಾಶ ನೀಡಿದವನು ನಾನೇ.


ಆಗ ಯೇಸು “ಈ ಕಟ್ಟಡಗಳನ್ನೆಲ್ಲ ನೋಡುತ್ತಿದ್ದೀರಾ? ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಇವುಗಳೆಲ್ಲಾ ನಾಶವಾಗುತ್ತವೆ. ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದಂತೆ ಎಲ್ಲಾ ಕಲ್ಲುಗಳು ಕೆಡವಲ್ಪಡುತ್ತವೆ” ಎಂದು ಹೇಳಿದನು.


ನಿನ್ನ ಜನರನ್ನು ರಕ್ಷಿಸಲು ನೀನು ಬಂದೆ. ನೀನು ಆರಿಸಿದ್ದ ರಾಜನನ್ನು ಜಯದ ಕಡೆಗೆ ನಡಿಸುವುದಕ್ಕಾಗಿ ಬಂದೆ. ಪ್ರತೀ ದುಷ್ಟ ಕುಟುಂಬದ ನಾಯಕನನ್ನು ನೀನು ಸಂಹರಿಸಿದೆ. ಭೂಲೋಕದಲ್ಲಿದ್ದ ಪ್ರಮುಖನಿಂದಿಡಿದು ಪ್ರಮುಖನಲ್ಲದವನವರೆಗೂ ನೀನು ಹತಿಸಿದೆ.


ನೀವು ಅನ್ಯಾಯವಾಗಿ ಜನರಿಂದ ಸುಂಕ ವಸೂಲಿ ಮಾಡುವಿರಿ. ಗೋದಿಯ ಮೂಟೆಗಳನ್ನು ಅವರಿಂದ ಸುಲುಕೊಳ್ಳುತ್ತೀರಿ. ಕಲ್ಲುಗಳನ್ನು ಕೊರೆದು ನಿಮಗಾಗಿ ಅಂದವಾದ ಮನೆಗಳನ್ನು ಕಟ್ಟಿಸಿಕೊಳ್ಳುವಿರಿ. ಆದರೆ ಆ ಮನೆಗಳಲ್ಲಿ ನೀವು ವಾಸಿಸುವುದಿಲ್ಲ. ಸುಂದರವಾದ ದ್ರಾಕ್ಷಿತೋಟಗಳನ್ನು ನೆಡುವಿರಿ. ಆದರೆ ಅದರ ದ್ರಾಕ್ಷಾರಸವನ್ನು ನೀವು ಕುಡಿಯುವುದಿಲ್ಲ.


ಸಮಾರ್ಯವು ಶಿಕ್ಷಿಸಲ್ಪಡಬೇಕು. ಯಾಕೆಂದರೆ ಆಕೆಯು ತನ್ನ ದೇವರಿಗೆ ವಿರುದ್ಧವಾಗಿ ನಡೆದಳು. ಇಸ್ರೇಲರು ಖಡ್ಗದಿಂದ ಸಾಯುವರು. ಅವರ ಮಕ್ಕಳು ಹರಿಯಲ್ಪಟ್ಟು ಚೂರುಚೂರಾಗುವರು. ಅವರ ಗರ್ಭಿಣಿ ಸ್ತ್ರೀಯರನ್ನು ಸೀಳಿಬಿಡುವರು.”


ಬಾಬಿಲೋನು ನಾಶವಾದ ಕಟ್ಟಡಗಳ ಗುಡ್ಡೆಯಾಗುವುದು. ಬಾಬಿಲೋನು ಕಾಡುನಾಯಿಗಳ ನಿವಾಸವಾಗುವುದು. ಜನರು ಕಲ್ಲುಬಂಡೆಗಳ ಗುಡ್ಡೆಯನ್ನು ನೋಡಿ ಆಶ್ಚರ್ಯಪಡುವರು. ಬಾಬಿಲೋನಿನ ಬಗ್ಗೆ ಜನರು ತಲೆಯಾಡಿಸುವರು. ಬಾಬಿಲೋನು ನಿರ್ಜನ ಪ್ರದೇಶವಾಗುವುದು.


ಯೆಹೋವನು ಹೀಗೆನ್ನುತ್ತಾನೆ: “ಬಾಬಿಲೋನೇ, ನೀನು ಇಡೀ ದೇಶವನ್ನು ನಾಶಪಡಿಸುವ ಜ್ವಾಲಾಮುಖಿಯಂತಿರುವೆ. ಆದರೆ ನಾನು ನಿನಗೆ ವಿರುದ್ಧವಾಗಿ ತಿರುಗಿದ್ದೇನೆ. ನಾನು ನಿನ್ನನ್ನು ಸುಟ್ಟುಹೋದ ಪರ್ವತವನ್ನಾಗಿ ಮಾಡುವೆನು.


“ನಾನು (ಯೆಹೋವನು) ಜೆರುಸಲೇಮ್ ನಗರವನ್ನು ಕಸದ ರಾಶಿಯನ್ನಾಗಿ ಮಾಡುವೆನು. ಅದು ನರಿಗಳ ನಿವಾಸವಾಗುವದು. ನಾನು ಯೆಹೂದ ಪ್ರಾಂತದ ನಗರಗಳನ್ನು ನಾಶಮಾಡುವೆನು. ಅಲ್ಲಿ ಒಬ್ಬರೂ ವಾಸಮಾಡಲಾರರು.”


ಯೆಹೋವನು ಜನರ ಉನ್ನತವಾದ ಗೋಡೆಗಳನ್ನೂ ಸುರಕ್ಷಿತ ಸ್ಥಳಗಳನ್ನೂ ನಾಶಮಾಡುವನು. ಯೆಹೋವನು ಅವುಗಳನ್ನೆಲ್ಲಾ ನೆಲಸಮಮಾಡಿ ಧೂಳಿಗೇ ತರುವನು.


ನೀನು ವಿದೇಶದ ಪಟ್ಟಣವನ್ನು ಕೆಡವಿಹಾಕಿರುವೆ. ಆ ಪಟ್ಟಣವು ಮಹಾಗೋಡೆಗಳಿಂದ ಸಂರಕ್ಷಿಸಲ್ಪಟ್ಟದ್ದಾಗಿತ್ತು. ಆದರೆ ಈಗ ಅದು ಕೇವಲ ಕಲ್ಲುಗಳ ರಾಶಿ. ಅರಮನೆಯು ಕೆಡವಲ್ಪಟ್ಟಿದೆ. ಅದನ್ನು ತಿರುಗಿ ಕಟ್ಟಲು ಸಾಧ್ಯವೇ ಇಲ್ಲ.


ಆದರೆ ದಾವೀದನು ತಪ್ಪಿಸಿಕೊಂಡು ಬಂದು ನಗರಕ್ಕೆ ನುಗ್ಗಿದರೆ, ಇಸ್ರೇಲರೆಲ್ಲ ಆ ನಗರದ ಹತ್ತಿರಕ್ಕೆ ಹಗ್ಗಗಳನ್ನು ತರುತ್ತಾರೆ. ನಾವು ಆ ನಗರದ ಗೋಡೆಗಳನ್ನು ಕಣಿವೆಯ ಆಳಕ್ಕೆ ಎಳೆದು ಬಿಡುತ್ತೇವೆ. ಆ ನಗರದಲ್ಲಿ ಒಂದು ಸಣ್ಣ ಕಲ್ಲು ಸಹ ಉಳಿಯಲು ಬಿಡುವುದಿಲ್ಲ” ಎಂದು ಹೇಳಿದನು.


ದಮಸ್ಕಕ್ಕೆ ಇದು ದುಃಖಕರವಾದ ಸಂದೇಶ. ಯೆಹೋವನು ಹೇಳುವುದೇನೆಂದರೆ, “ದಮಸ್ಕವು ಈಗ ಒಂದು ದೊಡ್ಡ ನಗರವಾಗಿದೆ. ಆದರೆ ಅದು ನಾಶವಾಗುವದು. ಕೆಡವಲ್ಪಟ್ಟ ಕಟ್ಟಡಗಳು ಮಾತ್ರವೇ ದಮಸ್ಕದಲ್ಲಿರುವವು.


ಇಸ್ರೇಲಿನ ರೈತರಾದ ನೀವು ಮತ್ತೆ ದ್ರಾಕ್ಷಿತೋಟಗಳನ್ನು ಬೆಳೆಸುವಿರಿ. ನೀವು ಸಮಾರ್ಯ ನಗರದ ಸುತ್ತಮುತ್ತಲಿನ ಬೆಟ್ಟಗಳಲ್ಲಿ ಆ ದ್ರಾಕ್ಷಿತೋಟವನ್ನು ಬೆಳೆಸುವಿರಿ. ರೈತರಾದ ನೀವು ಅದರ ಫಲವನ್ನು ಅನುಭವಿಸುವಿರಿ.


ಅಶ್ಶೂರದ ರಾಜನಾದ ಶಲ್ಮನೆಸರನು ಸಮಾರ್ಯದ ವಿರುದ್ಧ ಹೋರಾಡಲು ಹೋದನು. ಅವನ ಸೈನ್ಯವು ನಗರವನ್ನು ಸುತ್ತುವರಿಯಿತು. ಹಿಜ್ಕೀಯನು ಯೆಹೂದದ ರಾಜನಾಗಿದ್ದ ನಾಲ್ಕನೆಯ ವರ್ಷದಲ್ಲಿ ಇದು ಸಂಭವಿಸಿತು. (ಅದು ಏಲನ ಮಗನಾದ ಹೋಶೇಯನು ಇಸ್ರೇಲಿನ ರಾಜನಾಗಿ ಆಳುತ್ತಿದ್ದ ಏಳನೆಯ ವರ್ಷದಲ್ಲಿ ಸಂಭವಿಸಿತು.)


ಮೂರು ವರ್ಷಗಳ ಕೊನೆಯಲ್ಲಿ ಶಲ್ಮನೆಸರನು ಸಮಾರ್ಯವನ್ನು ವಶಪಡಿಸಿಕೊಂಡನು. ಹಿಜ್ಕೀಯನು ಯೆಹೂದದ ರಾಜನಾಗಿದ್ದ ಆರನೆಯ ವರ್ಷದಲ್ಲಿ ಅವನು ಸಮಾರ್ಯವನ್ನು ವಶಪಡಿಸಿಕೊಂಡನು. (ಹೋಶೇಯನು ಇಸ್ರೇಲಿನ ರಾಜನಾಗಿ ಆಳುತ್ತಿದ್ದ ಒಂಭತ್ತನೆಯ ವರ್ಷದಲ್ಲಿ ಇದು ಸಂಭವಿಸಿತು.)


ನನ್ನ ಒಡೆಯನಾದ ಯೆಹೋವನು ತನ್ನ ಹೆಸರಿನ ಮೇಲೆ ಆಣೆಯಿಟ್ಟು ಈ ಮಾತುಗಳನ್ನು ನುಡಿದಿದ್ದಾನೆ. ಸರ್ವಶಕ್ತನಾದ ಯೆಹೋವನ ನುಡಿಗಳಿವು: “ಯಾಕೋಬನು ಹೆಚ್ಚಳಪಡುವಂಥವುಗಳನ್ನು ನಾನು ದ್ವೇಷಿಸುತ್ತೇನೆ. ಅವನ ಬಲವಾದ ಬುರುಜುಗಳನ್ನು ದ್ವೇಷಿಸುತ್ತೇನೆ. ಆದ್ದರಿಂದ ಶತ್ರುಗಳು ಬಂದು ಪಟ್ಟಣವನ್ನೂ ಪಟ್ಟಣದಲ್ಲಿರುವದೆಲ್ಲವನ್ನೂ ಸೂರೆಮಾಡುವಂತೆ ಮಾಡುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು