7 ಆಕೆಯ ವಿಗ್ರಹಗಳೆಲ್ಲಾ ಒಡೆದು ಪುಡಿಮಾಡಲ್ಪಡುವವು. ಆಕೆಯ ಸೂಳೆತನದ ಹಣವು ಬೆಂಕಿಯಲ್ಲಿ ಸುಡಲ್ಪಡುವುದು. ಆಕೆಯ ಸುಳ್ಳುದೇವರ ವಿಗ್ರಹಗಳನ್ನೆಲ್ಲಾ ನಾಶಮಾಡುವೆನು. ಯಾಕೆಂದರೆ ಸಮಾರ್ಯ ನನಗೆ ಅಪನಂಬಿಗಸ್ತಳಾಗಿ ಧನಿಕಳಾದಳು. ನನಗೆ ನಂಬಿಗಸ್ತರಲ್ಲದವರು ಆಕೆಯಿಂದ ಅದನ್ನು ಕಸಿದುಕೊಳ್ಳುವರು.
7 ಅದರ ಎರಕದ ಬೊಂಬೆಗಳನ್ನೆಲ್ಲಾ ಪುಡಿಪುಡಿ ಮಾಡುವೆನು. ಅದರ ಸಮಸ್ತ ಸಂಪಾದನೆಯು ಸುಟ್ಟುಹೋಗುವುದು. ಅದರ ಸಕಲ ವಿಗ್ರಹಗಳನ್ನು ಹಾಳುಮಾಡುವೆನು. ಅದು ವೇಶ್ಯಾವಾಟಿಕೆಯಿಂದ ಸಂಪಾದನೆಯಾಗಿ ಕೂಡಿಸಿಟ್ಟುಕೊಂಡವುಗಳು ಹಾಗೂ ವೇಶ್ಯಾವಾಟಿಕೆಯ ಸಂಪಾದನೆಯಾಗಿಯೇ ಪರರ ಪಾಲಾಗುವವು.
7 ಅದರಲ್ಲಿನ ಎರಕದ ಪ್ರತಿಮೆಗಳನ್ನು ಪುಡಿಪುಡಿ ಮಾಡುವೆನು. ಅದರ ಸಂಪಾದನೆಯೆಲ್ಲ ಅಗ್ನಿಗೆ ಆಹುತಿಯಾಗುವುದು. ಅದರ ವಿಗ್ರಹಗಳನ್ನೆಲ್ಲ ಹಾಳುಮಾಡುವೆನು. ಅವು ಸೂಳೆತನದಿಂದ ಸಂಪಾದನೆಯಾದುವು, ಸೂಳೆತನದ ಸಂಪಾದನೆಯಾಗಿಯೇ ಪರರ ಪಾಲಾಗುವುದು,” ಎಂದು ಸರ್ವೇಶ್ವರ ಹೇಳುತ್ತಾರೆ.
7 ಅದರ ಎರಕದ ಬೊಂಬೆಗಳೆಲ್ಲಾ ಒಡೆಯಲ್ಪಡುವವು; ಅದರ ಸಮಸ್ತ ಸಂಪಾದನೆಯು ಸುಟ್ಟುಹೋಗುವದು, ಅದರ ಸಕಲ ವಿಗ್ರಹಗಳನ್ನು ಹಾಳುಮಾಡುವೆನು; ಅದು ಸೂಳೆತನದ ಸಂಪಾದನೆಯಾಗಿ ಕೂಡಿಸಿಟ್ಟುಕೊಂಡವುಗಳು, ಸೂಳೆತನದ ಸಂಪಾದನೆಯಾಗಿಯೇ ಪರರಪಾಲಾಗುವವು.
7 ಅದರ ವಿಗ್ರಹಗಳೆಲ್ಲಾ ತುಂಡುಗಳಾಗುವಂತೆ ಮಾಡುವೆನು. ಅದರ ಆಲಯದ ಕಾಣಿಕೆಗಳೆಲ್ಲಾ ಬೆಂಕಿಯಿಂದ ಸುಟ್ಟುಹೋಗುವುದು. ಅದರ ವಿಗ್ರಹಗಳನ್ನೆಲ್ಲಾ ಹಾಳುಮಾಡುವೆನು. ಅದು ವೇಶ್ಯಾವೃತ್ತಿಯ ಕೂಲಿಯಿಂದ ಕೂಡಿಸಿಕೊಂಡವು. ವೇಶ್ಯಾವೃತ್ತಿಯ ಕೂಲಿಯನ್ನಾಗಿಯೇ ಅವುಗಳನ್ನು ಉಪಯೋಗಿಸಬೇಕಾಗುತ್ತದೆ.
ಸೂಳೆತನದಿಂದ ಗಳಿಸಿದ ಹಣವನ್ನು ನಿಮ್ಮ ದೇವರಾದ ಯೆಹೋವನ ವಿಶೇಷ ವಾಸಸ್ಥಾನಕ್ಕೆ ತೆಗೆದುಕೊಂಡು ಬರಬಾರದು. ಒಬ್ಬನು ತಾನು ಹೊತ್ತುಕೊಂಡ ಹರಕೆಯನ್ನು ಆ ಹಣದಿಂದ ಪೂರೈಸಕೂಡದು. ಯಾಕೆಂದರೆ ಲೈಂಗಿಕ ಪಾಪದಲ್ಲಿ ತಮ್ಮ ದೇಹಗಳನ್ನು ಮಾರುವವರನ್ನು ನಿಮ್ಮ ದೇವರಾದ ಯೆಹೋವನು ದ್ವೇಷಿಸುತ್ತಾನೆ; ಲೈಂಗಿಕ ಪಾಪಗಳ ಆದಾಯದಿಂದ ಬಂದ ಹಣದಿಂದ ಖರೀದಿ ಮಾಡಿದ ಕಾಣಿಕೆಗಳನ್ನು ಆತನು ದ್ವೇಷಿಸುತ್ತಾನೆ.
ಆಕೆಯ ದ್ರಾಕ್ಷಾಲತೆಗಳನ್ನೂ ಅಂಜೂರದ ಮರಗಳನ್ನೂ ನಾಶಮಾಡುವೆನು. ‘ಇವುಗಳನ್ನು ನನ್ನ ಪ್ರಿಯತಮರು ನನಗೆ ಕೊಟ್ಟರು’ ಎಂದು ಆಕೆ ಹೇಳುತ್ತಾಳೆ. ಆದರೆ ನಾನು ಆಕೆಯ ತೋಟವನ್ನೇ ಬದಲಾಯಿಸುವೆನು. ಅದು ದಟ್ಟ ಅಡವಿಯಂತೆ ಆಗುವದು. ಅದರಲ್ಲಿದ್ದ ಮರಗಳ ಹಣ್ಣನ್ನು ಕಾಡುಪ್ರಾಣಿಗಳು ಬಂದು ತಿನ್ನುವವು.
ದೇವರ ಕೋಪವೆಂಬ ಮತ್ತು ಅವಳ ಲೈಂಗಿಕ ಪಾಪವೆಂಬ ದ್ರಾಕ್ಷಾರಸವನ್ನು ಲೋಕದ ಜನರೆಲ್ಲರೂ ಕುಡಿದು ಮತ್ತರಾದರು. ಭೂಲೋಕದ ರಾಜರುಗಳೆಲ್ಲ ಅವಳೊಂದಿಗೆ ಲೈಂಗಿಕ ಪಾಪ ಮಾಡಿದರು. ಭೂಲೋಕದ ವರ್ತಕರು ಅವಳ ಅತಿಯಾದ ಸುಖದಿಂದ ಶ್ರೀಮಂತರಾದರು.
ಅವಳೊಂದಿಗೆ ಲೈಂಗಿಕ ಪಾಪಮಾಡಿ ಅವಳ ಸಂಪತ್ತಿನಲ್ಲಿ ಪಾಲುಗಾರರಾದ ಲೋಕದ ರಾಜರುಗಳು ಅವಳ ದಹನದಿಂದೇರುವ ಹೊಗೆಯನ್ನು ನೋಡುತ್ತಾರೆ. ಅವಳು ಸಾಯುತ್ತಿರುವುದನ್ನು ಕಂಡು ರಾಜರುಗಳು ಗೋಳಾಡುವರು ಮತ್ತು ದುಃಖಿಸುವರು.
ಅವರ ತಾಯಿಯು ವೇಶ್ಯೆಯಂತೆ ವರ್ತಿಸಿದಳು. ತಾನು ನಡಿಸಿದ ಕೃತ್ಯಗಳಿಗಾಗಿ ಆಕೆ ನಾಚಿಕೆಪಡಬೇಕು. ಆಕೆಯು ಹೀಗೆಂದುಕೊಳ್ಳುತ್ತಿದ್ದಾಳೆ, ‘ನಾನು ನನ್ನ ಪ್ರಿಯತಮರ ಬಳಿಗೆ ಹೋಗುವೆನು. ಅವರು ನನಗೆ ಅನ್ನ ನೀರನ್ನು ಕೊಡುವರು. ನನಗೆ ಉಣ್ಣೆಯನ್ನೂ, ನಾರುಮಡಿಯನ್ನೂ ಕೊಡುವರು. ದ್ರಾಕ್ಷಾರಸ ಮತ್ತು ಆಲೀವ್ ಎಣ್ಣೆಯನ್ನೂ ಕೊಡುವರು.’
ಪಸ್ಕಹಬ್ಬದ ಆಚರಣೆಯು ಮುಕ್ತಾಯವಾಯಿತು. ಇಸ್ರೇಲಿನಿಂದ ಜೆರುಸಲೇಮಿಗೆ ಬಂದಿದ್ದವರು ಯೆಹೂದದ ಪಟ್ಟಣಗಳಿಗೆ ಹೋದರು. ಅಲ್ಲಿದ್ದ ಕಲ್ಲಿನ ವಿಗ್ರಹಗಳನ್ನು ಒಡೆದು ನಾಶಮಾಡಿದರು; ಅಶೇರಸ್ತಂಭಗಳನ್ನು ಮತ್ತು ಪೂಜಾಸ್ಥಳಗಳನ್ನು ಕೆಡವಿಹಾಕಿದರು. ಹೀಗೆ ಅವರು ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯಗಳಲ್ಲೆಲ್ಲಾ ಸಂಚಾರ ಮಾಡಿದರು. ಆ ಜನರು ಎಫ್ರಾಯೀಮ್ ಮನಸ್ಸೆ ಪ್ರಾಂತ್ಯಗಳಲ್ಲಿಯೂ ಹಾಗೆಯೇ ಮಾಡಿದರು. ವಿಗ್ರಹಗಳನ್ನು ಪೂಜಿಸಲು ಮಾಡಿದ ಎಲ್ಲಾ ವಸ್ತುಗಳನ್ನು ನಾಶಮಾಡಿದರು. ಬಳಿಕ ಆ ಇಸ್ರೇಲರೆಲ್ಲಾ ತಮ್ಮತಮ್ಮ ಮನೆಗಳಿಗೆ ಹಿಂದಿರುಗಿದರು.
ನೀವು ಮಾಡಿದ ಬಂಗಾರದ ಬಸವನನ್ನು ತೆಗೆದುಕೊಂಡು ಚೂರುಚೂರು ಮಾಡಿ, ಬೆಂಕಿಯಲ್ಲಿ ಸುಟ್ಟುಬಿಟ್ಟೆನು. ಮತ್ತೆ ಅದನ್ನು ಒಡೆದು ಧೂಳನ್ನಾಗಿ ಮಾಡಿ ಆ ಧೂಳನ್ನು ಬೆಟ್ಟದಿಂದ ಹರಿಯುತ್ತಿದ್ದ ನದಿಯಲ್ಲಿ ಬಿಸಾಡಿಬಿಟ್ಟೆನು.
ನಾನು ನಿಮ್ಮ ಉನ್ನತವಾದ ಪೂಜಾಸ್ಥಳಗಳನ್ನು ನಾಶಮಾಡುವೆ. ನಾನು ನಿಮ್ಮ ಧೂಪವೇದಿಕೆಗಳನ್ನು ಕಡಿದುಹಾಕುವೆನು. ನಿಮ್ಮ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಹಾಕುವೆನು. ನೀವು ನನಗೆ ಬಹಳ ಅಸಹ್ಯರಾಗಿರುವಿರಿ.
ಆದರೆ ಮರುದಿನ ಬೆಳಿಗ್ಗೆ ಅಷ್ಡೋದಿನ ಜನರು ಎದ್ದಾಗ ದಾಗೋನ್ ವಿಗ್ರಹವು ನೆಲದ ಮೇಲೆ ಯೆಹೋವನ ಪವಿತ್ರ ಪೆಟ್ಟಿಗೆಯ ಮುಂದೆ ಬೋರಲಬಿದ್ದಿತ್ತು. ದಾಗೋನಿನ ತಲೆಯು ಮತ್ತು ಕೈಗಳು ಮುರಿದು ಹೊಸ್ತಿಲಿನ ಮೇಲೆ ಬಿದ್ದಿದ್ದವು; ದೇಹವು ಏಕಶಿಲೆಯಾಗಿ ಬಿದ್ದಿತ್ತು.
ಎಪ್ಪತ್ತು ವರ್ಷಗಳ ನಂತರ ಯೆಹೋವನು ತೂರಿನ ಕುರಿತು ಮತ್ತೆ ಆಲೋಚಿಸಿ ತೀರ್ಮಾನಿಸುವನು. ತೂರಿನಲ್ಲಿ ವ್ಯಾಪಾರವು ಮತ್ತೆ ಪ್ರಾರಂಭವಾಗುವದು. ಅದು ಲೋಕದ ಎಲ್ಲಾ ರಾಜ್ಯಗಳಿಗೆ ವೇಶ್ಯೆಯಂತಿದೆ.
ನಿಮ್ಮ ಜನರು ವಾಸಮಾಡುವಲ್ಲೆಲ್ಲಾ ಕೆಟ್ಟಸಂಗತಿಗಳು ನಡೆಯುವವು; ಪಟ್ಟಣಗಳು ಕಲ್ಲಿನ ರಾಶಿಗಳಾಗುವವು; ಪೂಜಾಸ್ಥಳಗಳು ನಾಶಮಾಡಲ್ಪಡುವವು. ನಿಮ್ಮ ಯಜ್ಞವೇದಿಕೆಗಳು ಕೆಡವಲ್ಪಟ್ಟು ಹಾಳಾಗಿಹೋಗುವವು; ನಿಮ್ಮ ವಿಗ್ರಹಗಳು ಮುರಿಯಲ್ಪಟ್ಟು ನಾಶವಾಗುವವು. ಜನರು ಅವುಗಳನ್ನು ಇನ್ನು ಎಂದಿಗೂ ಪೂಜಿಸರು. ನಿಮ್ಮ ಧೂಪವೇದಿಕೆಗಳು ಕತ್ತರಿಸಲ್ಪಡುವವು. ನೀವು ಮಾಡಿಕೊಂಡ ವಿಗ್ರಹಗಳು ಅಳಿದುಹೋಗುವವು.
ಯೆಹೋವನು ನೀವು ಮಾಡಿಕೊಂಡ ಬಸವನನ್ನು ನಿರಾಕರಿಸಿದ್ದಾನೆ. ಸಮಾರ್ಯವೇ, ಯೆಹೋವನು ಹೇಳುವುದೇನೆಂದರೆ, ‘ನಾನು ಇಸ್ರೇಲರ ವಿರುದ್ಧವಾಗಿ ತುಂಬಾ ಕೋಪಗೊಂಡಿದ್ದೇನೆ.’ ಇಸ್ರೇಲಿನ ಜನರು ಅವರ ಪಾಪಗಳಿಗಾಗಿ ಶಿಕ್ಷಿಸಲ್ಪಡುವರು. ಶಿಲ್ಪಿಯು ಅವರ ವಿಗ್ರಹಗಳನ್ನು ಮಾಡಿದನು. ಅವು ದೇವರಲ್ಲ. ಸಮಾರ್ಯದ ಬಸವನ ವಿಗ್ರಹಗಳು ಚೂರುಚೂರಾಗಿ ಒಡೆಯಲ್ಪಡುವವು.