Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 1:8 - ಪರಿಶುದ್ದ ಬೈಬಲ್‌

8 ಮುಂದೆ ಸಂಭವಿಸುವ ಘಟನೆಗಳ ಬಗ್ಗೆ ನಾನು ಬಹಳ ದುಃಖಿತನಾಗಿದ್ದೇನೆ. ನಾನು ಬಟ್ಟೆಯನ್ನಾಗಲಿ ಚಪ್ಪಲಿಯನ್ನಾಗಲಿ ಹಾಕಿಕೊಳ್ಳದೇ ಹೋಗುವೆನು. ನಾಯಿಯಂತೆ ಅಳುವೆನು, ಪಕ್ಷಿಯಂತೆ ಗೋಳಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದಕ್ಕಾಗಿ ನಾನು ಗೋಳಾಡಿ ರೋದಿಸುವೆನು, ಬರಿಗಾಲಾಗಿಯೂ, ಬೆತ್ತಲೆಯಾಗಿಯೂ ನಡೆದಾಡುವೆನು. ನರಿಗಳಂತೆ ಅರಚಿಕೊಳ್ಳುವೆನು. ಉಷ್ಟ್ರಪಕ್ಷಿಗಳ ಹಾಗೆ ಕಿರಿಚಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಗ ಮೀಕನು: “ಇದಕ್ಕಾಗಿ ನಾನು ಗೋಳಾಡಿ ರೋದಿಸುವೆನು; ಬೆತ್ತಲೆಯಾಗಿ ಬರಿಗಾಲಿನಲ್ಲಿ ಪಾದಯಾತ್ರೆ ಮಾಡುವೆನು; ಗುಳ್ಳೆನರಿಗಳಂತೆ ಊಳಿಡುವೆನು, ಗೂಬೆಯಂತೆ ಘೂಂಕರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇದಕ್ಕಾಗಿ ನಾನು ಅರಿಚಾಟ ಕಿರಿಚಾಟ ಮಾಡುವೆನು; ಬರಿಗಾಲಾಗಿಯೂ ಬೆತ್ತಲೆಯಾಗಿಯೂ ನಡೆಯುವೆನು; ನರಿಗಳಂತೆ ಅರಚಿಕೊಳ್ಳುವೆನು, ಉಷ್ಟ್ರಪಕ್ಷಿಗಳ ಹಾಗೆ ಕಿರಚಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದ್ದರಿಂದ ನಾನು ಗೋಳಾಡಿ ಅರಚುವೆನು. ಬರಿಗಾಲಿನಲ್ಲಿಯೂ ಬೆತ್ತಲೆಯಾಗಿಯೂ ಹೋಗುವೆನು. ನರಿಗಳ ಹಾಗೆ ಕೂಗುವೆನು, ಉಷ್ಟ್ರಪಕ್ಷಿಯಂತೆ ನರಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 1:8
19 ತಿಳಿವುಗಳ ಹೋಲಿಕೆ  

ಆದ್ದರಿಂದ ನಾನು ಹೇಳುವುದೇನೆಂದರೆ: “ನೀವು ನನ್ನ ಕಡೆಗೆ ನೋಡಬೇಡಿ! ನನ್ನನ್ನು ಅಳಲು ಬಿಡಿರಿ! ಜೆರುಸಲೇಮಿನ ನಾಶನದ ಕುರಿತಾಗಿ ನನ್ನನ್ನು ಕೂಡಲೇ ಸಂತೈಸಬೇಡಿರಿ.”


“ಚೀಯೋನಿನಿಂದ ಮಹಾಗೋಳಾಟವು ಕೇಳಿಸುತ್ತಿದೆ: ‘ನಿಜವಾಗಿಯೂ ನಾವು ಹಾಳಾಗಿಹೋದೆವು. ನಿಜವಾಗಿಯೂ ನಾವು ನಾಚಿಕೆಪಡುವಂತಾಗಿದೆ. ನಾವು ನಮ್ಮ ನಾಡನ್ನು ಬಿಡಬೇಕು, ಏಕೆಂದರೆ ನಮ್ಮ ಮನೆಗಳನ್ನು ನಾಶಪಡಿಸಲಾಗಿದೆ.’”


ನಾನು ಪರ್ವತಗಳಿಗಾಗಿ ಗಟ್ಟಿಯಾಗಿ ಅಳುವೆನು; ಬರಿದಾದ ಹೊಲಗಳಿಗಾಗಿ ಶೋಕಗೀತೆಯನ್ನು ಹಾಡುವೆನು. ಏಕೆಂದರೆ ಅಲ್ಲಿ ಸಜೀವ ವಸ್ತುಗಳಿಲ್ಲ. ಯಾರೂ ಅಲ್ಲಿ ತಿರುಗಾಡುವದಿಲ್ಲ. ಆ ಸ್ಥಳಗಳಲ್ಲಿ ದನಗಳ ಸದ್ದು ಕೇಳಿಸುವದಿಲ್ಲ. ಪಕ್ಷಿಗಳು ಹಾರಿಹೋಗಿವೆ; ಪ್ರಾಣಿಗಳು ಓಡಿಹೋಗಿವೆ.


ನನ್ನ ತಲೆಯಲ್ಲೆಲ್ಲ ನೀರು ತುಂಬಿಕೊಂಡಿದ್ದು, ನನ್ನ ಕಣ್ಣುಗಳು ನೀರಿನ ಬುಗ್ಗೆಗಳಾಗಿದ್ದರೆ, ನಾಶಮಾಡಲ್ಪಟ್ಟ ನನ್ನ ಜನರಿಗಾಗಿ ಹಗಲಿರುಳು ಗೋಳಾಡುತ್ತಿದ್ದೆ.


ಅಯ್ಯೋ, ನನ್ನ ದುಃಖ ಮತ್ತು ಚಿಂತೆ ನನ್ನ ಹೊಟ್ಟೆಯಲ್ಲಿ ಸಂಕಟವನ್ನು ಉಂಟುಮಾಡುತ್ತಿವೆ. ನೋವಿನಿಂದ ನಾನು ಬಾಗಿಹೋಗಿದ್ದೇನೆ. ನಾನು ತುಂಬ ಹೆದರಿಕೊಂಡಿದ್ದೇನೆ. ನನ್ನ ಹೃದಯವು ಒಳಗೆ ತಳಮಳಗೊಳ್ಳುತ್ತಿದೆ. ನಾನು ಬಾಯಿ ಮುಚ್ಚಿಕೊಂಡಿರಲಾರೆ. ಏಕೆಂದರೆ, ನಾನು ತುತ್ತೂರಿಯ ಶಬ್ದವನ್ನು ಕೇಳಿದ್ದೇನೆ. ಆ ತುತ್ತೂರಿಯು ಸೈನ್ಯವನ್ನು ಯುದ್ಧಕ್ಕೆ ಕರೆಯುತ್ತಿದೆ.


ನಾನು ಆ ಭಯಂಕರ ಸಂಗತಿಗಳನ್ನು ನೋಡಿದ್ದರಿಂದ ಈಗ ಭಯಪೀಡಿತನಾಗಿದ್ದೇನೆ. ಭಯದಿಂದ ನನ್ನ ಹೊಟ್ಟೆಯು ನೋಯುತ್ತಿದೆ. ಆ ನೋವು ಪ್ರಸವವೇದನೆಯಂತಿದೆ. ನಾನು ಕೇಳುವ ವಿಷಯಗಳು ನನ್ನನ್ನು ಭಯಪಡಿಸಿವೆ; ನಾನು ನೋಡುವ ವಿಷಯಗಳು ನನ್ನನ್ನು ನಡುಗಿಸುತ್ತಿವೆ.


ದ್ರಾಕ್ಷಾಫಲವು ನಾಶವಾಗಿರುವದಕ್ಕಾಗಿ ನಾನು ಯೆಜ್ಜೇರ್ ಮತ್ತು ಸಿಬ್ಮದವರೊಂದಿಗೆ ಅಳುವೆನು. ಸುಗ್ಗಿ ಇಲ್ಲದಿರುವದಕ್ಕಾಗಿ ನಾನು ಹೆಷ್ಬೋನ್ ಮತ್ತು ಎಲೆಯಾಲೆಯ ಜನರೊಂದಿಗೆ ಅಳುವೆನು. ಬೇಸಿಗೆ ಕಾಲದ ಹಣ್ಣುಗಳಿರದು; ಹರ್ಷಧ್ವನಿಯೂ ಇರದು.


ಅಲ್ಲಿ ಮರುಭೂಮಿಯ ಕಾಡುಪ್ರಾಣಿಗಳು ಮಾತ್ರವೇ ವಾಸಿಸುವವು. ಜನರು ಬಾಬಿಲೋನಿನಲ್ಲಿರುವ ತಮ್ಮ ಮನೆಗಳಲ್ಲಿ ವಾಸಿಸುವದಿಲ್ಲ. ಅವರ ಮನೆಗಳಲ್ಲಿ ಗೂಬೆಗಳು ಮತ್ತು ಉಷ್ಟ್ರಪಕ್ಷಿಗಳು ವಾಸಮಾಡುವವು. ಕಾಡುಮೇಕೆಗಳು ಮನೆಯೊಳಗೆ ಆಡುವವು.


ಅರಣ್ಯದಲ್ಲಿರುವ ಗೂಬೆಯಂತೆ ಒಬ್ಬಂಟಿಗನಾಗಿದ್ದೇನೆ. ಪಾಳುಬಿದ್ದ ಕಟ್ಟಡಗಳಲ್ಲಿರುವ ಗೂಬೆಯಂತೆ ನಾನು ಒಬ್ಬಂಟಿಗನಾಗಿದ್ದೇನೆ.


ನಾನು ನರಿಗಳಂತೆಯೂ ಉಷ್ಟ್ರಪಕ್ಷಿಗಳಂತೆಯೂ ಒಬ್ಬಂಟಿಗನಾಗಿರುವೆ.


ನಂತರ ಸೌಲನು ತಾನು ಧರಿಸಿದ್ದ ಬಟ್ಟೆಗಳನ್ನು ತೆಗೆದುಹಾಕಿದನು. ಸಮುವೇಲನ ಎದುರಿನಲ್ಲಿ ಸೌಲನೂ ಸಹ ಪ್ರವಾದಿಸುತ್ತಿದ್ದನು. ಅಂದು ಹಗಲು ರಾತ್ರಿಯೆಲ್ಲ ಸೌಲನು ಬೆತ್ತಲೆಯಾಗಿ ಅಲ್ಲಿಯೇ ಮಲಗಿದ್ದನು. ಆದ್ದರಿಂದಲೇ ಜನರು, “ಸೌಲನೂ ಪ್ರವಾದಿಗಳಲ್ಲಿ ಒಬ್ಬನೇ?” ಎಂದು ಹೇಳುತ್ತಾರೆ.


ಕಾಡುನಾಯಿ ಮತ್ತು ತೋಳಗಳು ಬಾಬಿಲೋನಿನ ಭವ್ಯಭವನಗಳೊಳಗಿಂದ ಅರಚುವವು. ಬಾಬಿಲೋನ್ ಕೊನೆಗೊಳ್ಳುವುದು. ಅದರ ಅಂತ್ಯವು ಸಮೀಪದಲ್ಲಿಯೇ ಇದೆ. ಅದರ ಪೂರ್ಣ ನಾಶನಕ್ಕಾಗಿ ನಾನು ಇನ್ನು ಹೆಚ್ಚು ಹೊತ್ತು ಕಾಯುವದಿಲ್ಲ.”


ಸ್ತ್ರೀಯರೇ, ನೀವೀಗ ಶಾಂತರಾಗಿದ್ದೀರಿ. ಆದರೆ ನೀವು ಭಯಪಡುವವರಾಗಿರಬೇಕು. ನೀವು ಈಗ ಸುರಕ್ಷಿತರಾಗಿದ್ದೀರಿ, ಆದರೆ ನೀವು ಚಿಂತಿಸುವವರಾಗಿರಬೇಕು. ನಿಮ್ಮ ಒಳ್ಳೆಯ ವಸ್ತ್ರಗಳನ್ನು ತೆಗೆದಿಟ್ಟು ಶೋಕಬಟ್ಟೆಯನ್ನು ಧರಿಸಿರಿ. ಆ ಬಟ್ಟೆಗಳನ್ನು ನಿಮ್ಮ ಸೊಂಟಕ್ಕೆ ಕಟ್ಟಿಕೊಳ್ಳಿರಿ.


“ನರಪುತ್ರನೇ, ಈಜಿಪ್ಟಿನ ಜನರಿಗಾಗಿ ಗೋಳಾಡು. ಪಾತಾಳಕ್ಕೆ ಇಳಿದುಹೋಗಿರುವ ಇತರ ಎಲ್ಲರೊಡನೆ ಇರುವದಕ್ಕಾಗಿ ಈಜಿಪ್ಟನ್ನು ಮತ್ತು ಇತರ ಜನಾಂಗಗಳ ಉಳಿದ ಪಟ್ಟಣಗಳನ್ನು ಸಮಾಧಿಗೆ ಕಳುಹಿಸು.


ಆಗ ಜನರು ನಿಮ್ಮ ಬಗ್ಗೆ ಹಾಡನ್ನು ಹಾಡುವರು. ಜನರು ಶೋಕಗೀತೆಯನ್ನು ಹಾಡುವರು. ‘ನಾವು ನಾಶವಾದೆವು! ಯೆಹೋವನು ನಮ್ಮ ದೇಶವನ್ನು ನಮ್ಮಿಂದ ತೆಗೆದುಕೊಂಡು ಇತರ ಜನರಿಗೆ ಕೊಟ್ಟನು. ಹೌದು, ಆತನು ನಮ್ಮ ಭೂಮಿಯನ್ನು ನಮ್ಮಿಂದ ತೆಗೆದುಕೊಂಡುಬಿಟ್ಟನು, ನಮ್ಮ ಗದ್ದೆಗಳನ್ನು ಯೆಹೋವನು ನಮ್ಮ ವೈರಿಗಳಿಗೆ ಪಾಲು ಮಾಡಿಕೊಟ್ಟನು.


ಹಿಜ್ಕೀಯನು ರಾಜನಾಗಿದ್ದ ಹದಿನಾಲ್ಕನೆಯ ವರ್ಷದಲ್ಲಿ ಅಶ್ಶೂರದ ರಾಜನಾದ ಸನ್ಹೇರೀಬನು ಯೆಹೂದದ ಬಲಾಢ್ಯ ನಗರಗಳ ವಿರುದ್ಧವಾಗಿ ಹೋರಾಡಲು ಹೋದನು. ಸನ್ಹೇರೀಬನು ಆ ನಗರಗಳನ್ನೆಲ್ಲ ಸೋಲಿಸಿದನು.


ನಡೆದ ಎಲ್ಲಾ ಸಂಗತಿಗಳನ್ನು ಮೊರ್ದೆಕೈ ಕೇಳಿಕೊಂಡನು. ಯೆಹೂದ್ಯರನ್ನೆಲ್ಲಾ ಕೊಲ್ಲಲು ರಾಜಾಜ್ಞೆ ಹೊರಟಿದೆ ಎಂದು ಕೇಳಿದಾಗ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡು ಶೋಕದ ಬಟ್ಟೆಗಳನ್ನು ಧರಿಸಿ ತಲೆಯ ಮೇಲೆ ಬೂದಿಯನ್ನು ಸುರಿದುಕೊಂಡನು. ಆಮೇಲೆ ಗಟ್ಟಿಯಾಗಿ ಅಳುತ್ತಾ ನಗರ ಬೀದಿಗಳಲ್ಲಿ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು