ಮೀಕ 2:1 - ಪರಿಶುದ್ದ ಬೈಬಲ್1 ಪಾಪಮಾಡಲು ಯೋಚಿಸುವವರಿಗೆ ಸಂಕಟವು ಒದಗುವದು. ಇವರು ಹಾಸಿಗೆಯ ಮೇಲೆ ಬಿದ್ದುಕೊಂಡು ಪಾಪಮಾಡಲು ಯೋಚಿಸುತ್ತಾರೆ. ಬೆಳಿಗ್ಗೆ ಸೂರ್ಯ ಮೂಡಲು ತಾವು ಯೋಚಿಸಿದ ಪಾಪವನ್ನು ಕಾರ್ಯಗತ ಮಾಡುತ್ತಾರೆ. ಯಾಕೆ? ಯಾಕೆಂದರೆ ಅವರಿಗೆ ತಮ್ಮ ಇಷ್ಟಪ್ರಕಾರ ನಡೆದುಕೊಳ್ಳಲು ಬಲವಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ತಮ್ಮ ಹಾಸಿಗೆಯಲ್ಲಿ ಮಲಗಿರುವಾಗಲೇ ಅನ್ಯಾಯವನ್ನು ಯೋಚಿಸಿ, ಕೇಡನ್ನು ಕಲ್ಪಿಸುವವರ ಗತಿಯನ್ನು ಏನು ಹೇಳಲಿ. ಉದಯದ ಬೆಳಕಿನಲ್ಲಿ ಅದನ್ನು ನಡಿಸುವರು, ಅದು ಅವರ ಕೈವಶವಷ್ಟೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ತಮ್ಮ ಹಾಸಿಗೆಯಲ್ಲೇ ಕುತಂತ್ರವನ್ನು ಕಲ್ಪಿಸಿಕೊಂಡು ಕೇಡನ್ನು ಬಗೆಯುವವರಿಗೆ ಧಿಕ್ಕಾರ! ಬೆಳಗಾದದ್ದೇ ಅವರು ಕುತಂತ್ರವನ್ನು ಕಾರ್ಯಗತ ಮಾಡುತ್ತಾರೆ. ಆ ಸಾಮರ್ಥ್ಯ ಅವರ ಕೈಯಲ್ಲಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ತಮ್ಮ ಹಾಸಿಗೆಗಳಲ್ಲೇ ಅನ್ಯಾಯವನ್ನು ಯೋಚಿಸಿ ಕೇಡನ್ನು ಕಲ್ಪಿಸುವವರ ಗತಿಯನ್ನು ಏನು ಹೇಳಲಿ! ಉದಯದ ಬೆಳಕಿನಲ್ಲಿ ಅದನ್ನು ನಡಿಸುವರು, ಅದು ಅವರ ಕೈವಶವಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅಪರಾಧವನ್ನು ಯೋಚಿಸಿ ಅಪರಾಧವನ್ನು ಕಲ್ಪಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡೆಸುವವರಿಗೆ ಕಷ್ಟ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ. ಏಕೆಂದರೆ ಅದು ಅವರ ಕೈಶಕ್ತಿಯಲ್ಲಿದೆ. ಅಧ್ಯಾಯವನ್ನು ನೋಡಿ |
ಆದ್ದರಿಂದ ಈಗ ನೀವು ಮಾಡಬೇಕಾದದ್ದೇನೆಂದರೆ, ಸೇನಾಧಿಪತಿಗೂ ಎಲ್ಲಾ ಯೆಹೂದ್ಯ ನಾಯಕರಿಗೂ ಒಂದು ಸಂದೇಶವನ್ನು ಕಳುಹಿಸಿಕೊಡಿರಿ. ಪೌಲನಿಗೆ ಇನ್ನೂ ಹೆಚ್ಚು ಪ್ರಶ್ನೆಗಳನ್ನು ಕೇಳಬೇಕಾಗಿರುವುದರಿಂದ ಪೌಲನನ್ನು ನಮ್ಮ ಬಳಿಗೆ ಕರೆದುಕೊಂಡು ಬರಬೇಕೆಂದು ಸೇನಾಧಿಪತಿಗೆ ತಿಳಿಸಿರಿ. ಪೌಲನು ಇಲ್ಲಿಗೆ ಬರುತ್ತಿರುವಾಗಲೇ ನಾವು ಮಾರ್ಗದಲ್ಲಿ ಕಾದುಕೊಂಡಿದ್ದು ಅವನನ್ನು ಕೊಲ್ಲುತ್ತೇವೆ” ಎಂದು ಹೇಳಿದರು.
ಇದನ್ನು ಕೇಳಿದ ಹಾಮಾನನ ಹೆಂಡತಿ ಜೆರೆಷಳೂ ಮತ್ತು ಅವನ ಮಿತ್ರವೃಂದದವರೂ ಅವನಿಗೊಂದು ಸಲಹೆಯನ್ನಿತ್ತರು. “ಒಂದು ಗಲ್ಲುಮರವನ್ನು ನೆಡಿಸು. ಅದು ಎಪ್ಪತ್ತೈದು ಅಡಿ ಎತ್ತರವಿರಲಿ. ನಾಳೆ ಮುಂಜಾನೆ ಮೊರ್ದೆಕೈಯನ್ನು ಗಲ್ಲಿಗೇರಿಸಲು ಅರಸನಿಂದ ಅಪ್ಪಣೆ ತೆಗೆದುಕೋ. ಅನಂತರ ಅರಸನೊಂದಿಗೆ ಔತಣ ಸಮಾರಂಭಕ್ಕೆ ಹೋಗಿ ಸಂತೋಷಪಡು.” ಇದನ್ನು ಕೇಳಿ ಹಾಮಾನನು ಸಂತೋಷಗೊಂಡನು. ಕೂಡಲೇ ಸೇವಕನನ್ನು ಕರೆಸಿ ಗಲ್ಲುಮರವನ್ನು ಸಿದ್ಧಮಾಡಲು ಆಜ್ಞಾಪಿಸಿದನು.