Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 2:13 - ಪರಿಶುದ್ದ ಬೈಬಲ್‌

13 ಆಗ ಒಡೆದುಹಾಕುವವನು ಜನಗಳ ಮುಂದೆ ಮುನ್ನುಗ್ಗಿ ಹೋಗಿ, ದ್ವಾರಗಳನ್ನು ಒಡೆದುಹಾಕಿದಾಗ ಜನರು ಪಟ್ಟಣವನ್ನು ಬಿಟ್ಟುಹೋಗುವರು. ಅವರು ತಮ್ಮ ರಾಜನನ್ನೂ ಕರ್ತನನ್ನೂ ಹಿಂಬಾಲಿಸಿಕೊಂಡು ಅಲ್ಲಿಂದ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹೊಡೆದು ಹೋಗುವವನು ಅವರ ಮುಂದೆ ಹೊರಟಿದ್ದಾನೆ. ಅವರೂ ಬಾಗಿಲನ್ನು ಒಡೆದು ನುಗ್ಗಿ ಹೊರಟಿದ್ದಾರೆ. ಅವರ ಅರಸನು ಅವರ ಮುಂದೆ ತೆರಳಿದ್ದಾನೆ. ಯೆಹೋವನು ಅವರ ಮುಂಭಾಗದಲ್ಲಿ ನಡೆಯುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬಾಗಿಲನ್ನು ಒಡೆದು ತೆರೆಯುವಂಥವನು ಜನರ ಮುಂದಾಳಾಗಿ ಹೊರಡುವನು; ಅವರೂ ಬಾಗಿಲನ್ನು ಒಡೆದು ನುಗ್ಗುವರು; ಅವರ ಅರಸನು ಮುಂದಾಳಾಗಿ ಹೋಗುವನು. ಸರ್ವೇಶ್ವರಸ್ವಾಮಿಯೇ ಅವರ ಮುಂದಾಳತ್ವವನ್ನು ವಹಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಒಡೆಯುವವನು ಅವರ ಮುಂದೆ ಹೊರಟಿದ್ದಾನೆ; ಅವರೂ ಬಾಗಿಲನ್ನು ಒಡೆದು ನುಗ್ಗಿ ಹೊರಟಿದ್ದಾರೆ; ಅವರ ಅರಸನು ಅವರ ಮುಂದೆ ತೆರಳಿದ್ದಾನೆ, ಯೆಹೋವನು ಅವರ ಮುಂಭಾಗದಲ್ಲಿ ನಡೆಯುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಮಾರ್ಗ ತೆರೆಯುವಾತನು ಅವರ ಮುಂದೆ ಹೋಗುವನು. ಅವರು ಬಾಗಿಲು ತೆರೆದು ಹೊರಗೆ ಹೋಗುವರು. ಅವರ ಅರಸನು ಅವರ ಮುಂದೆ ಹಾದು ಹೋಗುತ್ತಾನೆ. ಯೆಹೋವ ದೇವರು ಅವರ ಮುಂದಾಳತ್ವವನ್ನು ವಹಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 2:13
36 ತಿಳಿವುಗಳ ಹೋಲಿಕೆ  

ನೀವು ಬಾಬಿಲೋನಿನಿಂದ ಹೊರಗೆ ಬರುವಿರಿ. ತ್ವರೆಪಟ್ಟು ಬರುವಂತೆ ಅವರು ಬಲವಂತ ಮಾಡುವದಿಲ್ಲ. ನೀವು ಓಡಿ ಹೋಗುವಂತೆ ಅವರು ಒತ್ತಾಯಪಡಿಸುವದಿಲ್ಲ. ನೀವು ಹೊರಗೆ ನಡೆಯುವಿರಿ. ಯೆಹೋವನು ನಿಮ್ಮೊಂದಿಗೆ ನಡೆಯುವನು. ಯೆಹೋವನು ನಿಮ್ಮ ಮುಂದೆ ಇರುವನು. ಇಸ್ರೇಲರ ದೇವರು ನಿಮ್ಮ ಹಿಂದೆಯೂ ಇರುವನು.


ಅವರು ಕುರಿಮರಿಯಾದಾತನ ವಿರುದ್ಧ ಯುದ್ಧಗಳನ್ನು ಮಾಡುತ್ತಾರೆ. ಆದರೆ ಕುರಿಮರಿಯಾದಾತನು ಪ್ರಭುಗಳ ಪ್ರಭುವಾದ್ದರಿಂದ ಮತ್ತು ರಾಜಾಧಿರಾಜನಾದ್ದರಿಂದ ಅವರನ್ನು ಸೋಲಿಸುತ್ತಾನೆ. ಆತನೊಂದಿಗೆ, ತಾನು ಕರೆದಿರುವ ಜನರು, ಆಯ್ಕೆಮಾಡಿಕೊಂಡಿರುವ ಜನರು ಮತ್ತು ತನ್ನ ನಂಬಿಗಸ್ತ ಹಿಂಬಾಲಕರು ಇದ್ದರು” ಎಂದನು.


ಸಿಂಹಾಸನದ ಮಧ್ಯೆ ಇರುವ ಕುರಿಮರಿಯಾದಾತನು ಅವರ ಕುರುಬನಾಗಿರುತ್ತಾನೆ. ಆತನು ಅವರನ್ನು ಜೀವ ನೀಡುವ ನೀರಿನ ಬುಗ್ಗೆಗಳ ಬಳಿಗೆ ಕರೆದೊಯ್ಯುತ್ತಾನೆ. ಅವರ ಕಣ್ಣುಗಳಿಂದ ತೊಟ್ಟಿಕ್ಕುವ ಕಣ್ಣೀರನ್ನೆಲ್ಲ ದೇವರು ಒರಸಿಹಾಕುತ್ತಾನೆ” ಎಂದು ಹೇಳಿದನು.


ಯೇಸು ಈಗಾಗಲೇ ಅಲ್ಲಿಗೆ ಪ್ರವೇಶಿಸಿ, ಅನುಸರಿಸುವುದಕ್ಕಾಗಿ ಮಾರ್ಗವನ್ನು ತೋರಿದನು. ಯೇಸು ಮೆಲ್ಕಿಜೆದೇಕನಂತೆ ಸದಾಕಾಲಕ್ಕೂ ಇರುವ ಪ್ರಧಾನಯಾಜಕನಾಗಿದ್ದಾನೆ.


ಯೆಹೋವನು ತನ್ನ ಜನರನ್ನು ಶಕ್ತಿಶಾಲಿಗಳನ್ನಾಗಿ ಮಾಡುವನು. ಅವರು ಆತನ ನಾಮದ ಘನತೆಗೋಸ್ಕರ ಜೀವಿಸುವರು. ಇದು ಯೆಹೋವನ ನುಡಿ.


“ಆಗ ಇಸ್ರೇಲಿನ ಪ್ರಜೆಗಳು ಮತ್ತು ಯೆಹೂದ ಪ್ರಾಂತ್ಯದ ಪ್ರಜೆಗಳು ಒಂದಾಗಿ ಸೇರಲ್ಪಡುವರು. ತಮಗೆ ಒಬ್ಬ ಅರಸನನ್ನು ಅವರು ಆರಿಸಿಕೊಳ್ಳುವರು. ಅವರ ಜನಾಂಗಕ್ಕೆ ಆ ದೇಶವು ಸಾಲದೆ ಹೋಗುವದು. ಇಜ್ರೇಲನ ದಿನವು ನಿಜವಾಗಿಯೂ ಮಹತ್ವವುಳ್ಳದ್ದಾಗಿರುವದು.”


“ನಾಲ್ಕನೇ ರಾಜ್ಯದ ಅರಸರ ಕಾಲದಲ್ಲಿ ಪರಲೋಕದ ದೇವರು ಇನ್ನೊಂದು ಹೊಸ ಸಾಮ್ರಾಜ್ಯವನ್ನು ಸ್ಥಾಪಿಸುವನು. ಈ ಸಾಮ್ರಾಜ್ಯವು ಎಂದೆಂದಿಗೂ ಉಳಿಯುವದು. ಎಂದಿಗೂ ಅಳಿಯದು; ಬೇರೊಂದು ಜನರ ಗುಂಪಿಗೆ ಹೋಗದಂಥ ಸಾಮ್ರಾಜ್ಯವಾಗಿರುವುದು. ಈ ಸಾಮ್ರಾಜ್ಯವು ಉಳಿದೆಲ್ಲ ಸಾಮ್ರಾಜ್ಯಗಳನ್ನು ನಾಶಮಾಡಿ ಕೊನೆಗಾಣಿಸುವುದು. ಆದರೆ ಆ ಸಾಮ್ರಾಜ್ಯವು ಮಾತ್ರ ಶಾಶ್ವತವಾಗಿ ನಿಲ್ಲುವದು.


ದಾವೀದನು ನನ್ನ ಸಾಮರ್ಥ್ಯದ ವಿಷಯದಲ್ಲಿ ಎಲ್ಲ ಜನಾಂಗಗಳವರಿಗೆ ಸಾಕ್ಷಿಯಾಗಿರುವಂತೆ ನಾನೇ ಮಾಡಿದೆನು. ನಾನು ದಾವೀದನಿಗೆ, ‘ನೀನು ಅಧಿಪತಿಯಾಗುವೆ ಮತ್ತು ಅನೇಕ ಜನಾಂಗಗಳಿಗೆ ನೀನು ಸೈನ್ಯಾಧಿಪತಿಯಾಗುವೆ’ ಎಂದು ಪ್ರಮಾಣ ಮಾಡಿದೆ.”


ನೀನು ಕುರುಡರ ಕಣ್ಣುಗಳಿಗೆ ದೃಷ್ಟಿಯನ್ನು ಕೊಡುವೆ; ಸೆರೆಮನೆಯಲ್ಲಿರುವ ಎಷ್ಟೋ ಜನರನ್ನು ನೀನು ಬಿಡಿಸುವೆ. ಕತ್ತಲೆಯಲ್ಲಿ ವಾಸಿಸುವ ಎಷ್ಟೋ ಜನರನ್ನು ನೀನು ಸೆರೆಮನೆಯಿಂದ ಬಿಡಿಸುವೆ.


“ಸಮಾಧಿಯಿಂದ ಅವರನ್ನು ರಕ್ಷಿಸುವೆನು; ಮರಣದಿಂದ ಅವರನ್ನು ಪಾರುಮಾಡುವೆನು. ಮರಣವೇ, ನಿನ್ನ ವ್ಯಾಧಿಗಳೆಲ್ಲಿ? ಸಮಾಧಿಯೇ, ನಿನ್ನ ಶಕ್ತಿ ಎಲ್ಲಿ? ನಾನು ಪ್ರತಿಕಾರ ಸಲ್ಲಿಸುವದಿಲ್ಲ.


ಹೀಗೆ ಇದ್ದ ಬಳಿಕ ಇಸ್ರೇಲರು ಹಿಂತಿರುಗಿ ಬರುವರು. ಆಗ ಅವರು ತಮ್ಮ ದೇವರಾದ ಯೆಹೋವನನ್ನೂ ಅವರ ಅರಸನಾದ ದಾವೀದನನ್ನೂ ಹುಡುಕುವರು. ಕೊನೆಯ ದಿವಸಗಳಲ್ಲಿ ತಮ್ಮ ದೇವರಾದ ಯೆಹೋವನನ್ನೂ ಆತನ ಒಳ್ಳೆಯತನವನ್ನೂ ಗೌರವಿಸಲು ಬರುವರು.


ಯೆಹೋವನು ಹೇಳುವುದೇನೆಂದರೆ, “ನಿನ್ನನ್ನು ಸಂತೈಸುವಾತನು ನಾನೇ. ಆದ್ದರಿಂದ ನೀನು ಜನರಿಗೆ ಯಾಕೆ ಹೆದರಬೇಕು. ಅವರು ಹುಟ್ಟಿ ಸಾಯುವ ನರರಾಗಿದ್ದಾರೆ. ಅವರು ಹುಲ್ಲಿನಂತೆ ಸಾಯುವ ಕೇವಲ ಮಾನವರಾಗಿದ್ದಾರೆ.”


ಯಾಕೋಬಿನ ಜನರೇ, ನಾನು ನಿಮ್ಮೆಲ್ಲರನ್ನು ಒಟ್ಟಾಗಿ ಸೇರಿಸುತ್ತೇನೆ. ಇಸ್ರೇಲಿನಲ್ಲಿ ಉಳಿದವರನ್ನೆಲ್ಲಾ ಒಟ್ಟುಗೂಡಿಸುತ್ತೇನೆ. ಹಟ್ಟಿಯೊಳಗೆ ಕುರಿಗಳನ್ನು ಸೇರಿಸುವಂತೆ, ಹುಲ್ಲುಗಾವಲಿನಲ್ಲಿ ಕುರಿಮಂದೆ ಸೇರಿಸಲ್ಪಡುವಂತೆ ನಾನು ಅವರನ್ನು ಒಟ್ಟುಗೂಡಿಸುವೆನು. ಆಗ ಆ ಸ್ಥಳವು ಜನಸಮೂಹದ ಗದ್ದಲದಿಂದ ತುಂಬಿಹೋಗುವುದು.


ಆಗ ನಾನು ಹೇಳಿದ್ದೇನೆಂದರೆ, “ಯಾಕೋಬಿನ ನಾಯಕರೇ, ಇಸ್ರೇಲಿನ ಅಧಿಪತಿಗಳೇ, ನನ್ನ ಮಾತನ್ನು ಕೇಳಿರಿ. ನ್ಯಾಯ ಏನು ಎಂದು ನಿಮಗೆ ತಿಳಿದಿರಬೇಕು.


ಆ ಸಮಯದಲ್ಲಿ ಯೆಹೋವನ ದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದಕ್ಕೆ ಬಂದನು. ಆದ್ದರಿಂದ ಅವರ ಮುಂಭಾಗದಲ್ಲಿದ್ದ ಮೇಘಸ್ತಂಭವು ಅವರ ಹಿಂಭಾಗಕ್ಕೆ ಹೋಯಿತು.


ಬಳಿಕ ಯೆಹೋಶುವನು ಯಾಜಕರಿಗೆ, “ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಜನಗಳ ಮುಂದೆ ನದಿಯ ಕಡೆಗೆ ನಡೆಯಿರಿ” ಎಂದನು. ಯಾಜಕರು ಪೆಟ್ಟಿಗೆಯನ್ನು ಹೊತ್ತುಕೊಂಡು ಜನರ ಮುಂದೆ ನಡೆದರು.


“ನಿಮ್ಮ ತಾಯಿಯೊಂದಿಗೆ ವಾದಿಸಿರಿ. ಯಾಕೆಂದರೆ ಆಕೆ ನನ್ನ ಹೆಂಡತಿಯಲ್ಲ. ನಾನು ಆಕೆಯ ಗಂಡನಲ್ಲ. ವೇಶ್ಯೆಯ ಹಾಗೆ ಆಕೆ ವರ್ತಿಸುವದನ್ನು ನಿಲ್ಲಿಸು ಎಂದು ಹೇಳಿರಿ. ಆಕೆಯ ಸ್ತನಗಳ ಮಧ್ಯದಿಂದ ಆಕೆಯ ಪ್ರಿಯತಮರನ್ನು ತೆಗೆದುಹಾಕಲು ಹೇಳಿರಿ.


“ಆ ‘ಕುಂಟು’ ನಗರದ ಜನರೇ ಅಳಿದುಳಿದ ಜನರಾಗುವರು. ಆ ಪಟ್ಟಣದ ಜನರನ್ನು ಬಲವಂತದಿಂದ ಓಡಿಸಲಾಯಿತು. ಆದರೆ ನಾನು ಅವರನ್ನು ಬಲಶಾಲಿಯಾದ ಜನಾಂಗವನ್ನಾಗಿ ಮಾಡುವೆನು.” ಯೆಹೋವನು ಅವರ ಅರಸನಾಗುವನು. ಆತನು ಚೀಯೋನ್ ಪರ್ವತದಿಂದ ನಿತ್ಯಕಾಲಕ್ಕೂ ಆಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು