ಮೀಕ 2:6 - ಪರಿಶುದ್ದ ಬೈಬಲ್6 ಜನರು, “ನೀನು ನಮಗೆ ಬೋಧಿಸಬೇಡ, ಆ ಕೆಟ್ಟವಿಷಯಗಳನ್ನು ನಮಗೆ ಹೇಳಬೇಡ, ನಮಗೆ ಯಾವ ಕೆಟ್ಟ ವಿಷಯವೂ ಸಂಭವಿಸುವುದಿಲ್ಲ” ಎಂದು ಹೇಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆಹಾ, ಆ ಕೆಡುಕರು “ಪ್ರವಾದನೆ ಮಾಡಬೇಡಿರಿ. ಇಂಥ ವಿಷಯಗಳಲ್ಲಿ ಪ್ರವಾದನೆಯನ್ನು ಎತ್ತಬಾರದು, ದೂಷಣೆಗಳು ತೊಲಗುವುದೇ ಇಲ್ಲ” ಎಂದು ಪ್ರವಾದನೆ ಮಾಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆಗ ಆ ಕೆಡುಕರು, “ಪ್ರವಾದನೆ ಮಾಡಬೇಡ. ಇಂಥ ವಿಷಯಗಳಲ್ಲಿ ಪ್ರವಾದನೆಯ ಮಾತೆತ್ತಕೂಡದು. ಆ ವಿನಾಶ ನಮಗೆ ತಟ್ಟುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 [ಆಹಾ, ಆ ಕೆಡುಕರು] ಪ್ರವಾದನೆ ಮಾಡಬೇಡಿರಿ; ಇಂಥ ವಿಷಯಗಳಲ್ಲಿ ಪ್ರವಾದನೆಯನ್ನೆತ್ತ ಕೂಡದು; ದೂಷಣೆಗಳು ತೊಲಗುವದೇ ಇಲ್ಲ ಎಂದು ಪ್ರವಾದನೆಮಾಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ಪ್ರವಾದಿಸಬೇಡ, ಈ ಸಂಗತಿಗಳ ಬಗ್ಗೆ ಪ್ರವಾದನೆ ಹೇಳಬೇಡ. ಅವಮಾನ ನಮ್ಮ ಮೇಲೆ ಬರುವುದೇ ಇಲ್ಲ,” ಎಂದು ಅವರ ಪ್ರವಾದಿಗಳು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
ಯಾಕೆಂದರೆ ನೀವು ಒಮ್ರಿಯ ಆಜ್ಞೆಯನ್ನು ಪರಿಪಾಲಿಸಿದಿರಿ. ಅಹಾಬನ ಮನೆಯವರು ಮಾಡುತ್ತಿದ್ದ ದುಷ್ಕೃತ್ಯಗಳನ್ನು ನೀವು ಮಾಡುತ್ತೀರಿ. ನೀವು ಅವರ ಬೋಧನೆಯನ್ನು ಅನುಸರಿಸುತ್ತೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ಕೆಡವಲ್ಪಟ್ಟ ನಿಮ್ಮ ನಗರವನ್ನು ನೋಡಿದ ಜನರು ಆಶ್ಚರ್ಯದಿಂದ ಸಿಳ್ಳುಹಾಕುವರು. ಆಗ ಬೇರೆ ಜನಾಂಗದವರು ನಿಮ್ಮ ಮೇಲೆ ಹೊರಿಸಿದ ಅವಮಾನವನ್ನು ನೀವು ಸಹಿಸಿಕೊಳ್ಳುವಿರಿ.”