ಹೀಗೆ ಹೇಳಿದರು, “ಪ್ರವಾದಿಯಾದ ಮೀಕಾಯನು ಮೋರೆಷೆತ್ ನಗರದವನಾಗಿದ್ದನು. ಹಿಜ್ಕೀಯನು ಯೆಹೂದದ ರಾಜನಾಗಿದ್ದ ಕಾಲದಲ್ಲಿ ಮೀಕಾಯನು ಪ್ರವಾದಿಯಾಗಿದ್ದನು. ಯೆಹೂದದ ಸಮಸ್ತ ಜನರಿಗೆ ಮೀಕಾಯನು ಹೀಗೆ ಹೇಳಿದನು: ‘ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ಚೀಯೋನ್ ನಗರವು ನೇಗಿಲುಹೊಡೆದ ಹೊಲವಾಗುವುದು. ಜೆರುಸಲೇಮ್ ನಗರವು ಕಲ್ಲಿನ ದಿಬ್ಬವಾಗುವುದು. ಪವಿತ್ರ ಆಲಯವಿದ್ದ ಪರ್ವತವು ಮರಗಿಡಗಳಿಂದ ಮುಚ್ಚಿಹೋಗುವುದು.’
ಆಗ ಯೇಸು “ಈ ಕಟ್ಟಡಗಳನ್ನೆಲ್ಲ ನೋಡುತ್ತಿದ್ದೀರಾ? ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಇವುಗಳೆಲ್ಲಾ ನಾಶವಾಗುತ್ತವೆ. ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದಂತೆ ಎಲ್ಲಾ ಕಲ್ಲುಗಳು ಕೆಡವಲ್ಪಡುತ್ತವೆ” ಎಂದು ಹೇಳಿದನು.
ಆದ್ದರಿಂದ ನಾನು ಸಮಾರ್ಯವನ್ನು ಕಲ್ಲಿನ ರಾಶಿಯನ್ನಾಗಿ ಮಾಡುವೆನು. ಅದು ದ್ರಾಕ್ಷಿಬಳ್ಳಿ ನೆಡಲು ಸಿದ್ಧವಾಗುವುದು. ಸಮಾರ್ಯದ ಕಲ್ಲುಗಳನ್ನೆಲ್ಲಾ ತಗ್ಗಿಗೆ ನೂಕಿಬಿಡುವೆನು; ಆಗ ಅಲ್ಲಿ ಕೇವಲ ಅಸ್ತಿವಾರಗಳು ಕಾಣುವವು.
“ನಾನು (ಯೆಹೋವನು) ಜೆರುಸಲೇಮ್ ನಗರವನ್ನು ಕಸದ ರಾಶಿಯನ್ನಾಗಿ ಮಾಡುವೆನು. ಅದು ನರಿಗಳ ನಿವಾಸವಾಗುವದು. ನಾನು ಯೆಹೂದ ಪ್ರಾಂತದ ನಗರಗಳನ್ನು ನಾಶಮಾಡುವೆನು. ಅಲ್ಲಿ ಒಬ್ಬರೂ ವಾಸಮಾಡಲಾರರು.”
ಅವರು ಆ ವಸ್ತುಗಳನ್ನು ಬೆಟ್ಟಗಳ ಮೇಲೆಯೂ ಬಯಲು ಪ್ರದೇಶದಲ್ಲಿಯೂ ಜ್ಞಾಪಿಸಿಕೊಳ್ಳುವರು. ಯೆಹೂದದ ಜನರಲ್ಲಿ ಭಂಡಾರಗಳಿವೆ. ನಾನು ಅವುಗಳನ್ನು ಬೇರೆಯವರಿಗೆ ಒಪ್ಪಿಸುತ್ತೇನೆ. ನಿಮ್ಮ ದೇಶದಲ್ಲಿದ್ದ ಎಲ್ಲಾ ಉನ್ನತಸ್ಥಳಗಳನ್ನು ಜನರು ನಾಶಮಾಡುವರು. ಆ ಸ್ಥಳಗಳಲ್ಲಿ ಪೂಜೆಮಾಡಿ ನೀವು ಪಾಪಕ್ಕೆ ಗುರಿಯಾಗಿರುವಿರಿ.
ಯೆಹೂದದ ರಾಜನು ವಾಸಮಾಡುವ ಅರಮನೆಯ ಬಗ್ಗೆ ಯೆಹೋವನು ಹೀಗೆನ್ನುತ್ತಾನೆ: “ಈ ಅರಮನೆಯು ಗಿಲ್ಯಾದಿನ ಅರಣ್ಯದಂತೆ, ಲೆಬನೋನಿನ ಪರ್ವತದಂತೆ ಎತ್ತರವಾಗಿದೆ. ಆದರೆ ನಾನು ಅದನ್ನು ನಿಜವಾಗಿ ಮರುಭೂಮಿಯಂತೆ ಮಾಡುತ್ತೇನೆ. ಈ ಅರಮನೆಯು ಹಾಳುಬಿದ್ದ ನಗರದಂತಾಗುವುದು.
“ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆಂದನು: ‘ಯೆಹೂದ ಮತ್ತು ಜೆರುಸಲೇಮಿಗೆ ಅನೇಕ ಕೇಡುಗಳು ಸಂಭವಿಸುವವೆಂದು ನಾನು ಹೇಳಿರುವೆನು. ಆ ಎಲ್ಲಾ ಕೇಡುಗಳು ಬೇಗನೆ ಸಂಭವಿಸುವಂತೆ ನಾನು ಮಾಡುವೆನು. ನಾನು ಆ ಜನರೊಂದಿಗೆ ಮಾತನಾಡಿದೆ, ಆದರೆ ಅವರು ಕಿವಿಗೆ ಹಾಕಿಕೊಳ್ಳಲಿಲ್ಲ. ನಾನು ಅವರನ್ನು ಕೂಗಿದೆ, ಆದರೆ ಅವರು ನನಗೆ ಓಗೊಡಲಿಲ್ಲ.’”
ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೇಳುತ್ತಾನೆ, “ನಾನು ಜೆರುಸಲೇಮ್ ನಗರಕ್ಕೂ ಮತ್ತು ಯೆಹೂದದ ಎಲ್ಲಾ ಪಟ್ಟಣಗಳಿಗೂ ತಂದ ಭಯಂಕರವಾದ ಕೇಡನ್ನು ನೀವು ನೋಡಿದ್ದೀರಿ. ಆ ಪಟ್ಟಣಗಳು ಇಂದು ಕೇವಲ ಕಲ್ಲಿನ ಗುಡ್ಡೆಗಳಾಗಿವೆ.
ನೆಬೂಜರದಾನನು ಯೆಹೋವನ ಆಲಯವನ್ನು ಸುಟ್ಟನು. ಅವನು ಜೆರುಸಲೇಮಿನಲ್ಲಿದ್ದ ಅರಮನೆಯನ್ನು ಮತ್ತು ಉಳಿದೆಲ್ಲ ಮನೆಗಳನ್ನು ಸುಟ್ಟುಬಿಟ್ಟನು. ಅವನು ಜೆರುಸಲೇಮಿನ ಎಲ್ಲಾ ಮುಖ್ಯ ಕಟ್ಟಡಗಳನ್ನು ಸುಟ್ಟುಹಾಕಿದನು.
ಜನರು ರಾಜಧಾನಿಯನ್ನು ತೊರೆದುಬಿಡುವರು. ಅರಮನೆ, ಬುರುಜುಗಳೆಲ್ಲವೂ ನಿರ್ಜನವಾಗಿವೆ. ಜನರು ಮನೆಗಳಲ್ಲಿ ವಾಸಿಸದೆ ಗುಹೆಗಳಲ್ಲಿ ವಾಸಮಾಡುವರು. ಕಾಡುಕತ್ತೆಗಳೂ ಕುರಿಗಳೂ ನಗರದಲ್ಲಿ ವಾಸಿಸುವವು. ಪಶುಗಳು ಅಲ್ಲಿ ಹುಲ್ಲು ಮೇಯುವವು.
ನಾನು ಪರ್ವತಗಳಿಗಾಗಿ ಗಟ್ಟಿಯಾಗಿ ಅಳುವೆನು; ಬರಿದಾದ ಹೊಲಗಳಿಗಾಗಿ ಶೋಕಗೀತೆಯನ್ನು ಹಾಡುವೆನು. ಏಕೆಂದರೆ ಅಲ್ಲಿ ಸಜೀವ ವಸ್ತುಗಳಿಲ್ಲ. ಯಾರೂ ಅಲ್ಲಿ ತಿರುಗಾಡುವದಿಲ್ಲ. ಆ ಸ್ಥಳಗಳಲ್ಲಿ ದನಗಳ ಸದ್ದು ಕೇಳಿಸುವದಿಲ್ಲ. ಪಕ್ಷಿಗಳು ಹಾರಿಹೋಗಿವೆ; ಪ್ರಾಣಿಗಳು ಓಡಿಹೋಗಿವೆ.
ನೀವು ಈ ಆಜ್ಞೆಗಳನ್ನು ಪಾಲಿಸದಿದ್ದರೆ ರಾಜನ ಅರಮನೆಯನ್ನು ನಾಶಮಾಡಲಾಗುವುದು. ಅದು ಕಲ್ಲುಬಂಡೆಗಳ ರಾಶಿಯಾಗುವದೆಂದು ಯೆಹೋವನಾದ ನಾನು ಆಣೆಯಿಟ್ಟುಕೊಂಡು ಹೇಳುತ್ತೇನೆ’” ಎಂದು ಯೆಹೋವನು ನುಡಿದನು.