Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 3:3 - ಪರಿಶುದ್ದ ಬೈಬಲ್‌

3 ನೀವು ನನ್ನ ಜನರ ದೇಹದಿಂದ ಚರ್ಮ ತೆಗೆದು ಎಲುಬುಗಳನ್ನು ತುಂಡುಮಾಡಿ ಅವರನ್ನು ನಾಶಮಾಡುತ್ತೀರಿ. ತಪ್ಪಲೆಯೊಳಗೆ ಬೇಯಿಸಲು ಮಾಂಸ ತುಂಡುಮಾಡಿ ಹಾಕುವಂತೆ ನೀವು ಅವರ ಎಲುಬುಗಳನ್ನು ತುಂಡುಮಾಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನನ್ನ ಪ್ರಜೆಯ ಮಾಂಸವನ್ನು ತಿನ್ನುತ್ತಾರೆ. ಅವರ ಚರ್ಮವನ್ನು ಸುಲಿದುಹಾಕಿ ಅವರ ಎಲುಬುಗಳನ್ನು ಮುರಿಯುತ್ತಾರೆ. ಹಂಡೆಯಲ್ಲಿನ ತುಂಡುಗಳಂತೆ, ಕೊಪ್ಪರಿಗೆಯಲ್ಲಿನ ಮಾಂಸದ ಹಾಗೆ ಅವರನ್ನು ಚೂರುಚೂರಾಗಿ ಕತ್ತರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನನ್ನ ಪ್ರಜೆಯ ಮೈ ಚರ್ಮವನ್ನು ಸುಲಿಯುವುದಲ್ಲದೆ ಅವರ ಎಲುಬುಗಳನ್ನು ಮುರಿದುಹಾಕುತ್ತೀರಿ. ಹಂಡೆಯಲ್ಲಿನ ತುಂಡುಗಳಂತೆ, ಆವಿಗೆಯಲ್ಲಿನ ಮಾಂಸದ ಚೂರುಗಳಂತೆ ನನ್ನ ಪ್ರಜೆಯನ್ನು ಚೂರುಚೂರಾಗಿ ಕತ್ತರಿಸಿಹಾಕಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನನ್ನ ಪ್ರಜೆಯ ಮಾಂಸವನ್ನು ತಿನ್ನುತ್ತಾರೆ, ಅವರ ಚರ್ಮವನ್ನು ಸುಲಿದುಹಾಕಿ ಅವರ ಎಲುಬುಗಳನ್ನು ಮುರಿಯುತ್ತಾರೆ; ಹಂಡೆಯಲ್ಲಿನ ತುಂಡುಗಳಂತೆ, ಕೊಪ್ಪರಿಗೆಯಲ್ಲಿನ ಮಾಂಸದ ಹಾಗೆ ಅವರನ್ನು ಚೂರುಚೂರಾಗಿ ಕತ್ತರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನನ್ನ ಪ್ರಜೆಯ ಮಾಂಸವನ್ನು ತಿನ್ನುತ್ತಾರೆ. ಅವರ ಚರ್ಮವನ್ನು ಸುಲಿದುಹಾಕುತ್ತಾರೆ. ಅವರ ಎಲುಬುಗಳನ್ನು ಮುರಿದುಹಾಕುತ್ತೀರಿ. ಹಂಡೆಯಲ್ಲಿನ ತುಂಡುಗಳಂತೆ, ಮಡಕೆಯಲ್ಲಿನ ಮಾಂಸದ ಚೂರುಗಳಂತೆ ನನ್ನ ಪ್ರಜೆಯನ್ನು ಚೂರುಚೂರಾಗಿ ಕತ್ತರಿಸಿಹಾಕಿದ್ದೀರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 3:3
11 ತಿಳಿವುಗಳ ಹೋಲಿಕೆ  

ದುಷ್ಟರು ಅರ್ಥಮಾಡಿಕೊಳ್ಳುವುದಿಲ್ಲವೇ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ. ಅವರು ಯೆಹೋವನನ್ನು ಆರಾಧಿಸುವುದೂ ಇಲ್ಲ.


‘ಮನೆಗಳನ್ನು ಕಟ್ಟುವ ಅಗತ್ಯ ಈಗಿಲ್ಲ. ಪಟ್ಟಣವು ಮಡಕೆಯಂತಿದೆ ಮತ್ತು ನಾವು ಮಾಂಸದಂತಿದ್ದೇವೆ’ ಎಂದು ಸುಳ್ಳು ಹೇಳುತ್ತಿದ್ದಾರೆ.


ಜೆರುಸಲೇಮಿನ ನಾಯಕರು ಗರ್ಜಿಸುವ ಸಿಂಹದಂತೆ ಇದ್ದಾರೆ, ಅವರ ನ್ಯಾಯಾಧಿಪತಿಗಳು ರಾತ್ರಿ ಕಾಲದಲ್ಲಿ ಕುರಿಗಳ ಮೇಲೆ ಬೀಳುವ ಹಸಿದ ತೋಳಗಳಂತಿದ್ದಾರೆ. ಬೆಳಗಾಗಲು, ಏನೂ ಉಳಿಯುವುದಿಲ್ಲ.


ದುಷ್ಟರು ನನ್ನನ್ನು ಕೊಲ್ಲಲು ಆಕ್ರಮಣಮಾಡುವಾಗ ತಾವೇ ಮುಗ್ಗರಿಸಿ ಬೀಳುವರು.


ನಾಯಕರಿಗೂ ಹಿರಿಯರಿಗೂ ಅವರು ಮಾಡಿದ ಕಾರ್ಯಗಳ ವಿರುದ್ಧವಾಗಿ ಆತನು ನ್ಯಾಯತೀರಿಸುವನು. ಯೆಹೋವನು ಹೇಳುವುದೇನೆಂದರೆ: “ನೀವು ದಾಕ್ಷಾತೋಟವನ್ನು (ಯೆಹೂದವನ್ನು) ಸುಟ್ಟುಹಾಕಿದ್ದೀರಿ; ಬಡಜನರಿಂದ ನೀವು ಕಿತ್ತುಕೊಂಡ ವಸ್ತುಗಳನ್ನು ಈಗಲೂ ನಿಮ್ಮ ಮನೆಗಳಲ್ಲಿ ಇಟ್ಟುಕೊಂಡಿದ್ದೀರಿ.


ಅದರೊಳಗೆ ಮಾಂಸದ ತುಂಡುಗಳನ್ನು ಹಾಕು. ತೊಡೆ, ಭುಜ, ಮಾಂಸದ ಒಳ್ಳೆಯ ಭಾಗಗಳನ್ನು ಹಾಕು. ಒಳ್ಳೆಯ ಎಲುಬುಗಳನ್ನೂ ಹಾಕು.


ಆದರೆ ನನಗೆ ವೈರಿಯಂತೆ ಎದ್ದುನಿಂತಿರುವ ನನ್ನ ಜನರೇ, ನೀವು ಹಾದುಹೋಗುವವರ ಬಟ್ಟೆಯನ್ನು ಅವರ ಬೆನ್ನಿನ ಮೇಲಿಂದ ಕಿತ್ತುಕೊಳ್ಳುತ್ತೀರಿ. ನಿಭರ್ಯವಾಗಿ ಓಡಾಡುವ ಜನರಿಂದ ಕೈದಿಗಳೋ ಎಂಬಂತೆ ಸುಲಿದುಕೊಳ್ಳುತ್ತೀರಿ.


ಖಡ್ಗಗಳಂತಿರುವ ಹಲ್ಲುಗಳನ್ನು ಹೊಂದಿರುವ ಜನರಿದ್ದಾರೆ. ಅವರ ಕೋರೆಗಳು ಕತ್ತಿಗಳಂತಿವೆ. ಅವರು ಬಡಜನರಲ್ಲಿ ಇರುವುದನ್ನೆಲ್ಲಾ ತಮ್ಮಿಂದಾದಷ್ಟು ದೋಚಿಕೊಳ್ಳಲು ತಮ್ಮ ಸಮಯವನ್ನು ಉಪಯೋಗಿಸುವರು.


ನನ್ನ ಜನರನ್ನು ಕುಗ್ಗಿಸಲು ನಿಮಗೆ ಯಾವ ಅಧಿಕಾರವಿದೆ? ಬಡಜನರ ಮುಖವನ್ನು ಧೂಳಿನಲ್ಲಿ ಹಾಕಿ ಉಜ್ಜಲು ನಿಮಗೆ ಯಾವ ಅಧಿಕಾರವಿದೆ?” ಇದು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನ ನುಡಿಗಳು.


ನನ್ನ ಮಾತುಗಳನ್ನು ಕೇಳಿರಿ! ಜನರೇ, ನೀವು ಬಡವರ ಮೇಲೆ ನಡೆದಾಡುತ್ತೀರಿ. ಈ ದೇಶದ ಬಡಜನರನ್ನು ನಾಶಮಾಡುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು