Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 3:5 - ಪರಿಶುದ್ದ ಬೈಬಲ್‌

5 ಕೆಲವು ಸುಳ್ಳುಪ್ರವಾದಿಗಳೆದ್ದು ಯೆಹೋವನ ಜನರಿಗೆ ಸುಳ್ಳನ್ನು ತಿಳಿಸುತ್ತಾರೆ. ಅಂಥವರ ಬಗ್ಗೆ ಯೆಹೋವನು ಹೇಳುವುದೇನೆಂದರೆ, “ಈ ಪ್ರವಾದಿಗಳ ಮಾತುಗಳು ಅವರ ಹೊಟ್ಟೆಗಳನ್ನವಲಂಬಿಸಿವೆ. ಜನರು ಅವರಿಗೆ ಆಹಾರ ಕೊಟ್ಟರೆ ಶಾಂತಿಯನ್ನು ವಾಗ್ದಾನ ಮಾಡುತ್ತಾರೆ. ಜನರು ಅವರಿಗೆ ಆಹಾರ ಕೊಡದಿದ್ದರೆ ಯುದ್ಧವನ್ನು ವಾಗ್ದಾನ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವವರೂ, ತಿನ್ನುವುದಕ್ಕೆ ಕೊಡುವಂಥವರಿಗೆ, “ಸಮಾಧಾನವಿರುವುದು” ಎಂದು ಪ್ರಕಟಿಸುವರು ಮತ್ತು ತಮ್ಮ ಬಾಯಿಗೆ ರುಚಿಯಾದ ತಿಂಡಿಯನ್ನು ಕೊಡದವನ ಮೇಲೆ ಯುದ್ಧವನ್ನು ನಿರ್ಧರಿಸುವ ಪ್ರವಾದಿಗಳ ವಿಷಯವಾಗಿ ಯೆಹೋವನು ಇಂತೆನ್ನುತ್ತಾನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಜನರನ್ನು ಸನ್ಮಾರ್ಗದಿಂದ ದುರ್ಮಾರ್ಗಕ್ಕೆ ಎಳೆಯುವ ಪ್ರವಾದಿಗಳಿಗೆ ತಿನ್ನಲು ಏನಾದರೂ ಕೊಟ್ಟರೆ “ಶಾಂತಿ” ಎನ್ನುತ್ತಾರೆ. ಆದರೆ ತಿನ್ನಲು ಯಾರಾದರೂ ಕೊಡದಿದ್ದರೆ ಯುದ್ಧದ ಬೆದರಿಕೆ ಹಾಕುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವವರೂ ಹಲ್ಲುಗಳಿಗೆ ಕುರುಕುವದೇನಾದರೂ ಸಿಕ್ಕಿರುವ ತನಕ ಶುಭವನ್ನು ಪ್ರಕಟಿಸುವವರೂ ತಮ್ಮ ಬಾಯಿಗೆ ಕವಳಕೊಡದವನ ಮೇಲೆ ಯುದ್ಧನಿರ್ಧರಿಸುವವರೂ ಆಗಿರುವ ಪ್ರವಾದಿಗಳ ವಿಷಯವಾಗಿ ಯೆಹೋವನು ಇಂತೆನ್ನುತ್ತಾನೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರು ಹೇಳುವುದೇನೆಂದರೆ, “ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವ ಪ್ರವಾದಿಗಳಿಗೆ ತಿನ್ನಲು ಕೊಟ್ಟರೆ ‘ಸಮಾಧಾನವಾಗಲಿ’ ಎನ್ನುವರು. ಆದರೆ ಅವರಿಗೆ ತಿನ್ನಲು ಏನೂ ಕೊಡದವನ ವಿರೋಧವಾಗಿ ಯುದ್ಧಕ್ಕೂ ಅವರು ಸಿದ್ಧರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 3:5
25 ತಿಳಿವುಗಳ ಹೋಲಿಕೆ  

ಪ್ರವಾದಿಗಳು ಮತ್ತು ಯಾಜಕರು ನನ್ನ ಜನರಿಗಾದ ದೊಡ್ಡ ಗಾಯಗಳಿಗೆ ಚಿಕ್ಕಗಾಯಗಳಿಗೋ ಎಂಬಂತೆ ಚಿಕಿತ್ಸೆ ಮಾಡುತ್ತಾರೆ. ವಾಸಿಯಾಗಿಲ್ಲದಿದ್ದರೂ ‘ವಾಸಿಯಾಗಿದೆ’ ಎನ್ನುತ್ತಾರೆ.


ನಾನು ಕಾಲ್ಪನಿಕ ಕನಸುಗಳನ್ನು ಬೋಧಿಸುವ ಸುಳ್ಳುಪ್ರವಾದಿಗಳ ವಿರೋಧಿಯಾಗಿದ್ದೇನೆ.” ಇದು ಪ್ರಭುವಿನ ನುಡಿ. “ಅವರು ತಮ್ಮ ಸುಳ್ಳುಬೋಧನೆಗಳಿಂದ ನನ್ನ ಜನರನ್ನು ಅಡ್ಡದಾರಿಗೆಳೆಯುತ್ತಾರೆ. ನಾನು ಜನರಿಗೆ ಉಪದೇಶ ಮಾಡುವದಕ್ಕಾಗಿ ಆ ಪ್ರವಾದಿಗಳನ್ನು ಕಳುಹಿಸಿಲ್ಲ. ನನಗೋಸ್ಕರವಾಗಿ ಏನನ್ನಾದರೂ ಮಾಡಲು ನಾನು ಅವರಿಗೆ ಎಂದೂ ಆಜ್ಞಾಪಿಸಿಲ್ಲ. ಅವರು ಯೆಹೂದದ ಜನರಿಗೆ ಸ್ವಲ್ಪವೂ ಸಹಾಯವನ್ನು ಮಾಡಲಾರರು” ಇದು ಯೆಹೋವನ ನುಡಿ.


ಅಂಥ ಜನರು ನಮ್ಮ ಪ್ರಭುವಾದ ಕ್ರಿಸ್ತನ ಸೇವೆ ಮಾಡುತ್ತಿಲ್ಲ. ಅವರು ಕೇವಲ ತಮ್ಮ ಸುಖಕ್ಕಾಗಿ ಈ ಕಾರ್ಯಗಳನ್ನು ಮಾಡುತ್ತಿದ್ದಾರೆ. ಕೆಟ್ಟದರ ಬಗ್ಗೆ ತಿಳಿದಿಲ್ಲದ ಜನರ ಮನಸ್ಸುಗಳನ್ನು ಮೋಸಗೊಳಿಸುವುದಕ್ಕಾಗಿ ಅವರು ನಯನಾಜುಕಿನ ನುಡಿಗಳನ್ನಾಡುತ್ತಾರೆ ಮತ್ತು ಮುಖಸ್ತುತಿಯ ಮಾತುಗಳನ್ನಾಡುತ್ತಾರೆ.


ಫರಿಸಾಯರಿಂದ ದೂರವಾಗಿರಿ. ಅವರೇ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಹಳ್ಳದಲ್ಲಿ ಬೀಳುವರು” ಎಂದು ಉತ್ತರಕೊಟ್ಟನು.


“ಸುಳ್ಳುಪ್ರವಾದಿಗಳ ಬಗ್ಗೆ ಎಚ್ಚರವಾಗಿರಿ. ಅವರು ಕುರಿಗಳ ಹಾಗೆ ಕಾಣಿಸಿಕೊಂಡು ನಿಮ್ಮ ಬಳಿಗೆ ಬರುತ್ತಾರೆ. ಆದರೆ ಅವರು ತೋಳಗಳಂತೆ ನಿಜವಾಗಿಯೂ ಅಪಾಯಕಾರಿಗಳಾಗಿದ್ದಾರೆ.


“ಆದರೆ ಯಾಜಕರೇ, ನೀವು ನನ್ನನ್ನು ಹಿಂಬಾಲಿಸುವದನ್ನು ನಿಲ್ಲಿಸಿ ಬಿಟ್ಟಿರಿ. ಅನೇಕ ಜನರು ತಪ್ಪು ದಾರಿಯಲ್ಲಿ ಹೋಗುವಂತೆ ಮಾಡಲು ನೀವು ಉಪದೇಶವನ್ನು ಬಳಸಿಕೊಂಡಿರಿ. ಲೇವಿಯೊಂದಿಗೆ ಮಾಡಿದ ಒಡಂಬಡಿಕೆಯನ್ನು ನೀವು ಹಾಳುಮಾಡಿಬಿಟ್ಟಿರಿ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.


ಈ ಜನರು ನನ್ನ ಮಾತುಗಳನ್ನು ಕೇಳಲು ಇಷ್ಟಪಡುವದಿಲ್ಲ. ಆದರೆ ಬೇರೊಬ್ಬನ ಸುಳ್ಳು ಮಾತುಗಳನ್ನು ಕೇಳಲು ಇಷ್ಟಪಡುವರು. ಸುಳ್ಳು ಪ್ರವಾದಿಯು ಬಂದು, “ನಿಮಗೆ ಒಳ್ಳೆಯ ಭವಿಷ್ಯವಿದೆ. ಬೇಕಾದಷ್ಟು ದ್ರಾಕ್ಷಾರಸ, ಮದ್ಯವು ನಿಮಗೆ ದೊರಕುವವು” ಎಂದು ಹೇಳಿದರೆ ಅವರು ಅವನನ್ನು ನಂಬಿ ಸ್ವೀಕರಿಸಿಕೊಳ್ಳುವರು.


ಯೆಹೂದದ ಜನರು ನನ್ನ ಹೆಸರನ್ನು ಮರೆಯುವಂತೆ ಅವರು ಪ್ರಯತ್ನ ಮಾಡುತ್ತಿದ್ದಾರೆ. ಅವರು ಒಬ್ಬರಿಗೊಬ್ಬರು ಈ ಸುಳ್ಳು ಕನಸುಗಳ ಬಗ್ಗೆ ಹೇಳಿ ಹೀಗೆ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನನ್ನು ಮರೆತಂತೆಯೇ ನನ್ನ ಜನರು ಸಹ ನನ್ನನ್ನು ಮರೆಯಲೆಂದು ಪ್ರಯತ್ನ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನನ್ನು ಮರೆತು ಸುಳ್ಳುದೇವರಾದ ಬಾಳನನ್ನು ಪೂಜಿಸಿದರು.


ಮಕ್ಕಳು ನನ್ನ ಜನರನ್ನು ಸೋಲಿಸಿಬಿಡುವರು. ಸ್ತ್ರೀಯರು ನನ್ನ ಜನರನ್ನು ಆಳುವರು. ನನ್ನ ಜನರೇ, ನಿಮ್ಮ ಮಾರ್ಗದರ್ಶಕರು ನಿಮ್ಮನ್ನು ತಪ್ಪುದಾರಿಯಲ್ಲಿ ನಡಿಸುವರು; ಸರಿಯಾದ ದಾರಿಯಿಂದ ನಿಮ್ಮನ್ನು ಅಡ್ಡದಾರಿಗೆ ನಡಿಸುವರು.


ಜನಾಂಗದವರಿಗೆ ಇದನ್ನು ಪ್ರಕಟಿಸು: ಯುದ್ಧಕ್ಕೆ ತಯಾರಾಗಿರಿ! ಶೂರರನ್ನು ಎಚ್ಚರಿಸಿರಿ! ಯುದ್ಧ ವೀರರು ಹತ್ತಿರಕ್ಕೆ ಬರಲಿ; ಅವರು ಬರಲಿ!


ಪಕ್ಷಪಾತ ತಪ್ಪು. ಕೆಲವರಾದರೋ ಒಂದು ತುಂಡು ರೊಟ್ಟಿಗಾಗಿಯೂ ತಪ್ಪು ಮಾಡುವರು.


“ಜೆರುಸಲೇಮಿನ ಮೇಲೆ ಧಾಳಿ ಮಾಡುವದಕ್ಕೆ ಸಿದ್ಧರಾಗಿರಿ. ಏಳಿರಿ, ನಾವು ನಗರವನ್ನು ಮಧ್ಯಾಹ್ನದಲ್ಲಿಯೇ ಮುತ್ತೋಣ. ಆದರೆ ಈಗಾಗಲೇ ಹೊತ್ತಾಗಿದೆ. ಸಾಯಂಕಾಲದ ನೆರಳುಗಳು ವಿಸ್ತಾರಗೊಳ್ಳುತ್ತಿವೆ.


ನಿನ್ನ ಪ್ರವಾದಿಗಳು ನಿನಗಾಗಿ ದರ್ಶನಗಳನ್ನು ಕಂಡರು. ಆದರೆ ಅವರ ದರ್ಶನಗಳು ನಿರರ್ಥಕವಾದ ಹುಸಿನುಡಿಗಳಾಗಿವೆ. ಅವರು ನಿನ್ನ ಪಾಪಕೃತ್ಯಗಳನ್ನು ಬಹಿರಂಗಪಡಿಸಲಿಲ್ಲ. ಅವರು ಪರಿಸ್ಥಿತಿಯನ್ನು ಸುಧಾರಿಸುವ ಪ್ರಯತ್ನ ಮಾಡಲಿಲ್ಲ. ಅವರು ನಿನ್ನ ಕುರಿತು ಸಂದೇಶಗಳನ್ನು ಪ್ರವಾದಿಸಿದರು. ಆದರೆ ಅವು ನಿರಾಧಾರವಾದ ಸಂದೇಶಗಳಾಗಿದ್ದು ನಿನ್ನನ್ನು ಮರುಳುಗೊಳಿಸಿದವು.


ಯೆಹೋವನು ಹೇಳುವುದೇನೆಂದರೆ, “ಯಾವ ಪ್ರವಾದಿಗಳು ಸುಳ್ಳುದರ್ಶನವನ್ನು ನೋಡಿ ಸುಳ್ಳನ್ನು ಹೇಳಿದ್ದಾರೋ, ಅವರನ್ನು ಶಿಕ್ಷಿಸುವೆನು. ನನ್ನ ಜನರ ಮಧ್ಯೆಯಿಂದ ಅವರನ್ನು ತೆಗೆದುಬಿಡುವೆನು. ಅವರ ಹೆಸರುಗಳು ಇಸ್ರೇಲರ ವಂಶಾವಳಿ ಪಟ್ಟಿಯಲ್ಲಿ ಇರುವುದಿಲ್ಲ. ಅವರು ಇಸ್ರೇಲ್ ದೇಶಕ್ಕೆ ಹಿಂದಿರುಗಿ ಬರುವುದಿಲ್ಲ. ನಾನೇ ಒಡೆಯನಾದ ಯೆಹೋವನೆಂದು ಆಗ ನಿಮಗೆ ಗೊತ್ತಾಗುವುದು.


ನೀವು (ಯಾಜಕರು) ಹಗಲಿನಲ್ಲಿ ಬಿದ್ದುಹೋಗುವಿರಿ. ರಾತ್ರಿ ಹೊತ್ತಿನಲ್ಲಿ ಪ್ರವಾದಿಗಳೂ ನಿಮ್ಮ ಜೊತೆಗೆ ಬೀಳುವರು ಮತ್ತು ನಾನು ನಿಮ್ಮ ತಾಯಿಯನ್ನು ಸಹ ನಾಶಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು